ಎರಡನೇ ಹಂತದ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಿದ ಓಲಾ ಎಲೆಕ್ಟ್ರಿಕ್
ಓಲಾ ಎಲೆಕ್ಟ್ರಿಕ್(Ola Electric) ಕಂಪನಿಯು ಎಸ್1 ಮತ್ತು ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುವ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಂಡಿದ್ದು, ಮೊದಲ ಹಂತದಲ್ಲಿ ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಹೊಸ ಇವಿ ಸ್ಕೂಟರ್‌ಗಳ ವಿತರಣೆಗೆ ಸಜ್ಜಾಗುತ್ತಿರುವ ಓಲಾ ಕಂಪನಿಯು ಇದೇ ತಿಂಗಳು 1ರಿಂದ ಎರಡನೇ ಹಂತದ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿಕೊಂಡಿತ್ತು.

ಎಸ್1 ಮತ್ತು ಎಸ್1 ಪ್ರೊ ಮಾದರಿಗಳಿಗೆ ಮೊದಲ ಹಂತದಲ್ಲಿ 1 ಲಕ್ಷಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೇ ತಿಂಗಳು 10ರಿಂದ ಟೆಸ್ಟ್ ರೈಡ್ ಆರಂಭಿಸುತ್ತಿದ್ದು, ಟೆಸ್ಟ್ ರೈಡ್ ಆರಂಭದೊಂದಿಗೆ ಕಂಪನಿಯು 2ನೇ ಹಂತದ ಬುಕ್ಕಿಂಗ್ ಆರಂಭಿಸಲು ಮುಂದಾಗಿತ್ತು. ಆದರೆ ಕಾರಣಾಂತರಗಳಿಂದ ಕಂಪನಿಯು ಹೊಸ ಇವಿ ಸ್ಕೂಟರ್‌ಗಾಗಿ ಎರಡನೇ ಹಂತದ ಬುಕ್ಕಿಂಗ್ ಪ್ರಕ್ರಿಯೆಯನ್ನು ಮುಂದಿನ ತಿಂಗಳು 16ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.

ಮೊದಲ ಹಂತದಲ್ಲಿ ಬುಕ್ಕಿಂಗ್ ಮಾಡಲಾದ ಗ್ರಾಹಕರಿಗೆ ಓಲಾ ಕಂಪನಿಯು ಇದೇ 10ರಿಂದ ಟೆಸ್ಟ್ ರೈಡ್ ಒದಗಿಸಲಿದ್ದು, ಟೆಸ್ಟ್ ರೈಡ್ ನಂತರ ಖರೀದಿಯನ್ನು ಖಚಿತಪಡಿಸಲಿರುವ ಗ್ರಾಹಕರಿಗೆ ಡಿಸೆಂಬರ್ 1ರಿಂದ 31ರ ಒಳಗಾಗಿ ಹೊಸ ಸ್ಕೂಟರ್ ವಿತರಣೆ ಮಾಡುವುದಾಗಿ ಹೇಳಿಕೊಂಡಿದೆ.

ಆದರೆ ಎರಡನೇ ಹಂತದ ಬುಕ್ಕಿಂಗ್ ಪ್ರಕ್ರಿಯೆಯನ್ನು ಹೆಚ್ಚುವರಿಯಾಗಿ ಒಂದೂವರೆ ತಿಂಗಳಿಗೆ ಮುಂದೂಡಿಕೆ ಮಾಡಿರುವ ಓಲಾ ಕಂಪನಿಯು ಉತ್ಪಾದನೆ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ಎರಡನೇ ಹಂತದ ಬುಕ್ಕಿಂಗ್ ಪ್ರಕ್ರಿಯೆ ಮುಂದೂಡಿಕೆ ಮಾಡಿರುವುದಾಗಿ ಹೇಳಿಕೊಂಡಿದ್ದು, ಡಿಸೆಂಬರ್ 16ರಂದು ಎರಡನೇ ಹಂತದ ಬುಕ್ಕಿಂಗ್ ಆರಂಭಗೊಳಿಸುವುದಾಗಿ ಮಾಹಿತಿ ನೀಡಿದೆ.

ಮೊದಲ ಹಂತದಲ್ಲಿ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಡಿಸೆಂಬರ್ 1ರಿಂದ ವಿತರಣೆಯಾಗಲಿದ್ದರೆ ಎರಡನೇ ಹಂತದಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ 2022ರ ಮಾರ್ಚ್ ಅಥವಾ ಎಪ್ರಿಲ್ ಹೊತ್ತಿಗೆ ವಿತರಣೆಯಾಗುವ ಸಾಧ್ಯತೆಗಳಿದ್ದು, ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ತನ್ನ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಉತ್ಪಾದನಾ ಪ್ರಕ್ರಿಯೆಯನ್ನು ತೀವ್ರಗೊಳಿಸಿದೆ.

ಓಲಾ ಕಂಪನಿಯು ಹೊಸ ಇವಿ ಸ್ಕೂಟರ್ ಖರೀದಿ ಪ್ರಕ್ರಿಯೆಗಾಗಿ ಶೋರೂಂಗಳ ಬದಲಾಗಿ ಸಂಪೂರ್ಣವಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಸ್ಕೂಟರ್ ಖರೀದಿ ಪ್ರಕ್ರಿಯೆ ಪ್ರಕ್ರಿಯೆ, ವಿತರಣೆ ಮತ್ತು ಮಾರಾಟ ನಂತರದ ಗ್ರಾಹಕರ ಸೇವೆಗಳು ಸಹ ಮನೆ ಬಾಗಿಲಿಗೆ ಒದಗಿಸುವ ಭರವಸೆ ನೀಡಿದೆ.

ಹೊಸ ಎಸ್1 ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಎರಡು ಇವಿ ಮಾದರಿಗಳಲ್ಲೂ ಕಂಪನಿಯು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಆಕರ್ಷಕ ಮೈಲೇಜ್ ರೇಂಜ್ ನೀಡಿದೆ.

ಎಸ್1 ವೆರಿಯೆಂಟ್‌ನಲ್ಲಿ 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.


Click it and Unblock the Notifications








