ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಓಲಾ ಎಲೆಕ್ಟ್ರಿಕ್(Ola Electric) ಕಂಪನಿಯು ತನ್ನ ಬಹುನೀರಿಕ್ಷಿತ ಎಸ್1 ಮತ್ತು ಎಸ್1 ಪ್ರೊ ಇವಿ ಸ್ಕೂಟರ್‌ಗಳ ವಿತರಣೆಯನ್ನು ದೇಶಾದ್ಯಂತ ಆರಂಭಿಸಿದ್ದು, ಎಸ್1 ಮಾದರಿಗಾಗಿ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಓಲಾ ಕಂಪನಿಯು ಹೊಸ ಆಫರ್ ನೀಡಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಎಸ್1 ಪ್ರೊ ಮಾದರಿಯ ವಿತರಣೆಗೆ ಈಗಾಗಲೇ ಚಾಲನೆ ನೀಡಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಮುಂದಿನ ಹಂತದಲ್ಲಿ ಎಂಟ್ರಿ ಲೆವಲ್ ಮಾದರಿಯಾದ ಎಸ್1 ಇವಿ ಸ್ಕೂಟರ್ ಮಾದರಿಗಾಗಿ ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ವಿತರಣೆ ಮಾಡುವುದಾಗಿ ಮಾಹಿತಿ ನೀಡಿದೆ. ಜನವರಿ 10ರಿಂದ ಎಸ್1 ಮಾದರಿಯ ವಿತರಣೆ ಆರಂಭವಾಗಲಿದ್ದು, ಎಸ್1 ಮಾದರಿಯ ವಿತರಣೆಗೆ ಕಾಯುತ್ತಿರುವ ಗ್ರಾಹಕರಿಗೆ ಕಂಪನಿಯು ಹೊಸ ಆಫರ್ ನೀಡಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಎಸ್1 ಮಾದರಿಗಾಗಿ ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಕಂಪನಿಯು ಎಸ್1 ಪ್ರೊ ಮಾದರಿಯನ್ನು ವಿತರಣೆ ಮಾಡುವುದಾಗಿ ಮಾಹಿತಿ ನೀಡಿದ್ದು, ತಾಂತ್ರಿಕವಾಗಿ ಒಂದೇ ಆಗಿರುವ ಎಸ್1 ಮತ್ತು ಎಸ್1 ಪ್ರೊ ಮಾದರಿಯನ್ನು ಖರೀದಿಸುವ ಅವಕಾಶ ನೀಡಲಾಗಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಆದರೆ ಎಸ್1 ಮಾದರಿಗಾಗಿ ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರು ಎಸ್1 ಪ್ರೊ ಖರೀದಿಸಲು ಕೆಲವು ಷರತ್ತು ಹಾಕಿರುವ ಕಂಪನಿಯು ತಾಂತ್ರಿಕ ವೈಶಿಷ್ಟ್ಯತೆಯೊಂದಿಗೆ ಎಸ್1 ಮಾದರಿಯನ್ನು ಉಚಿತವಾಗಿ ಎಸ್1 ಪ್ರೊ ಮಾದರಿಗೆ ಅಪ್‌ಗ್ರೆಡ್ ಮಾಡುವುದಾಗಿ ತಿಳಿಸಿದ್ದು, ಒಂದು ವೇಳೆ ಸಾಫ್ಟ್‌ವೇರ್, ಹೆಚ್ಚಿನ ಮೈಲೇಜ್ ರೇಂಜ್ ಬೇಕಿದ್ದಲ್ಲಿ ಹೆಚ್ಚುವರಿಯಾಗಿರುವ ರೂ.30 ಸಾವಿರ ಪಾವತಿಸಿ ಅಪ್‌ಗ್ರೆಡ್ ಮಾಡಿಕೊಳ್ಳುವ ಅವಕಾಶ ನೀಡಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಡಿಸೆಂಬರ್ 16ರಂದು ಎಸ್1 ಮತ್ತು ಎಸ್1 ಪ್ರೊ ಇವಿ ಸ್ಕೂಟರ್ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್ ಕಂಪನಿಯು ಮೊದಲ ಹಂತವಾಗಿ ಬೆಂಗಳೂರು ಮತ್ತು ಚೆನ್ನೈನಲ್ಲಿ ಸ್ಕೂಟರ್ ವಿತರಣೆ ಆರಂಭಿಸಿದ್ದು, ಎರಡನೇ ಹಂತದಲ್ಲಿ ಮುಂಬೈ, ಹೈದ್ರಾಬಾದ್, ಅಹಮದಾಬಾದ್, ಪುಣೆ ಮತ್ತು ವೈಜಾಗ್‌ನಲ್ಲಿ ಇವಿ ಸ್ಕೂಟರ್ ವಿತರಣೆಗೆ ಚಾಲನೆ ನೀಡಲಾಗಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಶೀಘ್ರದಲ್ಲಿಯೇ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಸ್ಕೂಟರ್ ವಿತರಣೆಯನ್ನು ವಿವಿಧ ನಗರಗಳಲ್ಲಿ ವಿಸ್ತರಿಸಲು ನಿರ್ಧರಿಸಿರುವ ಓಲಾ ಕಂಪನಿಯು ಗ್ರಾಹಕರ ತಾಳ್ಮೆಗೆ ಅಭಿನಂದನೆ ಸಲ್ಲಿಸಿದ್ದು, ನಿಗದಿತ ಸಮಯದಲ್ಲಿ ಇವಿ ಸ್ಕೂಟರ್ ವಿತರಣೆ ಮಾಡುವ ಭರವಸೆ ನೀಡಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಓಲಾ ಹೊಸ ಎಸ್1 ಇವಿ ಸ್ಕೂಟರ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿವೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಕುರಿತಾದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಉಪಯಕ್ತ ಮಾಹಿತಿಯುಳ್ಳ ಆ್ಯಪ್ ಕೂಡಾ ಅಭಿವೃದ್ದಿಪಡಿಸಿದ್ದು, ಹೊಸ ಆ್ಯಪ್ ಮೂಲಕ ವಾಹನ ಖರೀದಿ, ವಿತರಣೆ, ಗ್ರಾಹಕ ಸೇವೆ, ಇನ್ಸುರೆನ್ಸ್, ಮೌಲ್ಯ ವರ್ಧಿತ ಸೇವೆಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಹೊಸ ಎಸ್1 ವೆರಿಯೆಂಟ್‌‌ನಲ್ಲಿ ಓಲಾ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಇದರಲ್ಲಿ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಇದರೊಂದಿಗೆ ಕಂಪನಿಯು ಶೀಘ್ರದಲ್ಲಿಯೇ ಎರಡನೇ ಹಂತದ ಬುಕ್ಕಿಂಗ್ ಪ್ರಕ್ರಿಯೆಯನ್ನು ಕೂಡಾ ಆರಂಭಗೊಳ್ಳುವುದಾಗಿ ಮಾಹಿತಿ ನೀಡಿದ್ದು, ಎರಡನೇ ಹಂತದಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಮುಂದಿನ ಎಪ್ರಿಲ್‌ನಿಂದ ಸ್ಕೂಟರ್ ವಿತರಣೆಯಾಗಬಹುದಾಗಿದೆ.

ಎಸ್1 ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಸಿಗಲಿದೆ ಎಸ್1 ಪ್ರೊ ಸ್ಕೂಟರ್! ಷರತ್ತು ಅನ್ವಯ..

ಹೊಸ ಸ್ಕೂಟರ್‌ಗಳ ಖರೀದಿದಾಗಿ ಓಲಾ ಕಂಪನಿಯು ಪ್ರಮುಖ ಬ್ಯಾಂಕ್‌ಗಳ ಪಾಲುದಾರಿಕೆಯೊಂದಿಗೆ ಗರಿಷ್ಠ ಸಾಲ ಸೌಲಭ್ಯದೊಂದಿಗೆ ಆಕರ್ಷಕ ಇಎಂಐ ಆಯ್ಕೆಗಳನ್ನು ನೀಡಿದ್ದು, ಓಲಾ ಫೈನಾನ್ಸಿಲ್ ಸರ್ವಿಸ್ ಮೂಲಕವೂ ಗ್ರಾಹಕರು ಹೊಸ ಸ್ಕೂಟರ್ ಖರೀದಿ ಮಾಡಬಹುದಾಗಿದೆ.

Most Read Articles

Kannada
English summary
Ola electric offers upgrading s1 customers to the s1 pro details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X