ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಸ್ಕೂಟರ್ ಮುಂಬರುವ ಅಗಸ್ಟ್ ಅಥವಾ ಸೆಪ್ಟೆಂಬರ್ ಅಂತ್ಯಕ್ಕೆ ಮಾರುಕಟ್ಟೆಗೆ ಪ್ರವೇಶಿಸಲಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಆಟೋ ಉತ್ಪಾದನಾ ಕ್ಷೇತ್ರಕ್ಕೆ ಅಧಿಕೃತವಾಗಿ ಪ್ರವೇಶಿಸಿರುವ ಕ್ಯಾಬ್ ಸೇವಾ ಕಂಪನಿ ಓಲಾ ಅಂಗಸಂಸ್ಥೆಯಾಗಿರುವ ಓಲಾ ಎಲೆಕ್ಟ್ರಿಕ್ ಮೊದಲ ಬಾರಿಗೆ ವಾಹನಗಳ ಉತ್ಪಾದನೆದಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಬೆಲೆ ಮತ್ತು ಮೈಲೇಜ್ ವಿಚಾರವಾಗಿ ಓಲಾ ಹೊಸ ಎಲೆಕ್ಟ್ರಿಕ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಲಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಉತ್ಪಾದನೆಯ ಹಂತದಲ್ಲಿರುವ ಓಲಾ ಹೊಸ ಸ್ಕೂಟರ್ ಶೀಘ್ರದಲ್ಲೇ ವಿವಿಧ ರಾಜ್ಯಗಳಲ್ಲಿ ನಿರ್ಮಾಣ ಹಂತದಲ್ಲಿರುವ ಅಧಿಕೃತ ಶೋರೂಂಗಳಲ್ಲಿ ಪ್ರದರ್ಶನಗೊಳ್ಳಲಿದ್ದು, ಮೊದಲ ಸ್ಕೂಟರ್ ಮಾದರಿಯನ್ನು ಕಂಪನಿಯು ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್)ಗೆ ಹಸ್ತಾಂತರಿಸುವ ಸಿದ್ದತೆಯಲ್ಲಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯ ಚಾರ್ಜಿಂಗ್ ನಿಲ್ದಾಣ ನಿರ್ಮಾಣ ಗುರಿಹೊಂದಿರುವ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಸಂಸ್ಥೆಯು ಅತ್ಯತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುತ್ತಿದ್ದು, ಈ ಹಿನ್ನಲೆಯಲ್ಲಿ ಓಲಾ ಕಂಪನಿಯು ಮೊದಲ ಸ್ಕೂಟರ್ ಅನ್ನು ಸಿಇಎಸ್ಎಲ್ ಸಂಸ್ಥೆಗೆ ಹಸ್ತಾಂತರಿಸುವ ಆಶಯ ವ್ಯಕ್ತಪಡಿಸಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಓಲಾ ಕಂಪನಿಯ ಹೊಸ ವಾಹನ ಉತ್ಪಾದನಾ ಘಟಕವು ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನೆಯು ಅಧಿಕೃತವಾಗಿ ಚಾಲನೆ ಪಡೆದುಕೊಳ್ಳಲಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಹೊಸ ಸ್ಕೂಟರಿನ ಅಧಿಕೃತ ಚಿತ್ರಗಳನ್ನು ಈಗಾಗಲೇ ಬಹಿರಂಗಪಡಿಸಿರುವ ಓಲಾ ಕಂಪನಿಯು ಹೊಸ ಸ್ಕೂಟರ್‌ನಲ್ಲಿ ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾದ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಹೊಸ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ಮಾದರಿಗಳಿಗೆ ಬೆಲೆ ವಿಚಾರದಲ್ಲಿ ಮೈಲೇಜ್ ವಿಚಾರದಲ್ಲಿ ಭಾರೀ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಪೆಟ್ರೋಲ್ ಬೆಲೆ ಹೆಚ್ಚಳದಿಂದಾಗಿ ಓಲಾ ಇವಿ ಸ್ಕೂಟರ್‌ಗೆ ಭರ್ಜರಿ ಬೇಡಿಕೆ ಹರಿದುಬರಲಿದೆ ಎನ್ನಲಾಗಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಬೃಹತ್ ಪ್ರಮಾಣದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಯೋಜನೆಗಾಗಿ ನೇದರ್ಲ್ಯಾಂಡ್ ಮೂಲದ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಜೊತೆಗೂಡಿಸಿರುವ ಓಲಾ ಕಂಪನಿಯು ಭಾರತದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಹೊಸ ಇವಿ ವಾಹನಗಳನ್ನು ರಫ್ತು ಮಾಡುವ ಬೃಹತ್ ಯೋಜನೆ ಹೊಂದಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಓಲಾ ಕಂಪನಿಯು ಹೊಸ ವಾಹನ ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ನಿರ್ಮಾಣ ಮಾಡಲಾಗುತ್ತಿದ್ದು, ಈ ಮೂಲಕ ಹೊಸ ಘಟಕವು ದೇಶದ ಅತ್ಯಾಧುನಿಕ ವಾಹನ ಉತ್ಪಾದನಾ ಘಟಕಗಳಲ್ಲಿ ಒಂದಾಗಲಿದೆ. ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಿವಿಧ ಕಾರ್ಯಗಳಿಗಾಗಿ ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲು ನಿರ್ಧರಿಸಲಾಗುತ್ತಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಬರೋಬ್ಬರಿ 500 ಎಕರೆ ವ್ಯಾಪ್ತಿ ಹೊಂದಿರುವ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳ ನಿರ್ಮಾಣದ ಗುರಿ ಹೊಂದಲಾಗಿದ್ದು, ಪ್ರತಿ 2 ಸೆಕೆಂಡುಗಳಲ್ಲಿ 1 ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣಗೊಳ್ಳಲಿದೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ವಿವಿಧ ಉತ್ಪಾದನಾ ಹಂತಗಳಲ್ಲಿ ಒಂದೇ ಬಾರಿಗೆ ನೂರಾರು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅಸೆಂಬ್ಲಿ ಮಾಡುವ ರೋಬೋಟ್‌ಗಳು ಅಂತಿಮವಾಗಿ ಪ್ರತಿ ಸೆಕೆಂಡುಗಳಲ್ಲಿ ಒಂದು ಉತ್ಪಾದನಾ ಮಾದರಿಯನ್ನು ಮಾರಾಟಕ್ಕೆ ಸಿದ್ದಗೊಳಿಸಲಿವೆ.

ಸಿಇಎಸ್ಎಲ್‌ಗೆ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಲಿದೆ ಓಲಾ

ಹೊಸ ಯೋಜನೆಗಾಗಿ ಓಲಾ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 2,400 ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಸದ್ಯ ಇವಿ ಸ್ಕೂಟರ್ ಮಾತ್ರ ಉತ್ಪಾದನೆ ಮಾಡಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಇವಿ ವಾಹನಗಳನ್ನು ಅಭಿವೃದ್ದಿಪಡಿಸಲಿದೆ.

More from DriveSpark

Article Published On: Wednesday, June 23, 2021, 18:06 [IST]
English summary
Ola Electric Company Planning To Sell Its First Electric Scooter To CESL. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+