ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

ಪ್ರಮುಖ ಕ್ಯಾಬ್ ಸೇವಾ ಕಂಪನಿಯಾದ Ola ಕಳೆದ ವರ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಉದ್ಯಮಕ್ಕೆ ಕಾಲಿಡುವುದಾಗಿ ಘೋಷಿಸಿತ್ತು. ಅದರಂತೆ ಈ ವರ್ಷ ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗಾಗಿ ಬುಕ್ಕಿಂಗ್ ಗಳನ್ನು ಆರಂಭಿಸಿತ್ತು. ಬುಕ್ಕಿಂಗ್ ಆರಂಭವಾದ ಮೊದಲ ದಿನವೇ 24 ಗಂಟೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಸ್ವೀಕರಿಸಿರುವುದಾಗಿ ಕಂಪನಿ ತಿಳಿಸಿತ್ತು.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

Ola ಕಂಪನಿಯು ಈಗ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಕಂಪನಿಯು ಈ ವರ್ಷದ ಆಗಸ್ಟ್‌ 15 ರಂದು ತನ್ನ S1 ಹಾಗೂ S 1 Pro ಎಂಬ ಎರಡು ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುವ ಮುನ್ನವೇ ಬುಕ್ಕಿಂಗ್ ಗಳನ್ನು ಆರಂಭಿಸಲಾಗಿತ್ತು ಎಂಬುದು ಗಮನಾರ್ಹ.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

ಗ್ರಾಹಕರು ರೂ. 499 ಪಾವತಿಸಿ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬುಕ್ಕಿಂಗ್ ಮಾಡಬಹುದಾಗಿತ್ತು. ಮೊದಲ ದಿನವೇ 1 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್'ಗಳನ್ನು ಸ್ವೀಕರಿಸಿದ ಕಂಪನಿಯು ಎರಡನೇ ದಿನ ರೂ.1,100 ಕೋಟಿಗಳಷ್ಟು ಬುಕ್ಕಿಂಗ್ ಸ್ವೀಕರಿಸಿರುವುದಾಗಿ ವರದಿಯಾಗಿತ್ತು. ಭಾರತದ ಆಟೋ ಮೊಬೈಲ್ ಉದ್ಯಮದಲ್ಲಿ ವಾಹನವೊಂದಕ್ಕೆ ಇಷ್ಟೊಂದು ಭರ್ಜರಿ ಸ್ವಾಗತ ದೊರೆತಿರುವುದು ಇದೇ ಮೊದಲು.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

ಈಗ Ola ಕಂಪನಿಯು ತನ್ನ S 1 ಹಾಗೂ S 1 Pro ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್'ಗಳನ್ನು ಪುನರಾರಂಭಿಸಿದೆ ಎಂದು ವರದಿಯಾಗಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ರೂ. 499 ಮುಂಗಡ ಹಣ ಪಾವತಿಸಿ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬುಕ್ಕಿಂಗ್ ಮಾಡಬಹುದು. ಮುಂಚಿತವಾಗಿ ಕಾಯ್ದಿರಿಸಿದ ಗ್ರಾಹಕರಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಶೀಘ್ರವೇ ತಲುಪಿಸಲಾಗುವುದು ಎಂದು ಕಂಪನಿ ತಿಳಿಸಿದೆ.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

ಈ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬುಕ್ಕಿಂಗ್ ಮಾಡಿರುವವರಿಗೆ ಈ ತಿಂಗಳ ಅಂತ್ಯದಿಂದ ವಿತರಣೆಯನ್ನು ಆರಂಭಿಸುವ ನಿರೀಕ್ಷೆಗಳಿವೆ. ಈ ಎಲೆಕ್ಟ್ರಿಕ್ ಸ್ಕೂಟರ್‌ಗಳ ವಿತರಣೆಯನ್ನು ದೇಶಾದ್ಯಂತ ಸಾವಿರಕ್ಕೂ ಹೆಚ್ಚು ನಗರಗಳಲ್ಲಿ ಆರಂಭಿಸಲಾಗುವುದು. Ola S 1 ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ. 1 ಲಕ್ಷಗಳಾದರೆ, S 1 Pro ಸ್ಕೂಟರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ. 1.30 ಲಕ್ಷಗಳಾಗಿದೆ.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

ಭಾರತದ ಕೆಲವು ರಾಜ್ಯಗಳಲ್ಲಿ ಅಲ್ಲಿನ ರಾಜ್ಯ ಸರ್ಕಾರಗಳು ಸಬ್ಸಿಡಿ ನೀಡುವ ಕಾರಣ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು ಕಡಿಮೆ ಬೆಲೆಗೆ ಮಾರಾಟವಾಗುತ್ತವೆ. ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡುವ ಕಾರಣ ದೆಹಲಿಯಲ್ಲಿ S 1 Pro ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ರೂ. 85,099 ಗಳಾದರೆ, S 1 ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ರೂ. 79,999 ಗಳಾಗಿದೆ.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

ಈ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ಆಯಾ ರಾಜ್ಯಗಳು ನೀಡುವ ಸಬ್ಸಿಡಿಯನ್ನು ಆಧರಿಸಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ತನ್ನ ಫೇಮ್ 2 ಯೋಜನೆಯಡಿ ಸಬ್ಸಿಡಿ ನೀಡುತ್ತದೆ. ಇದರ ಜೊತೆಗೆ ಕೆಲವು ರಾಜ್ಯ ಸರ್ಕಾರಗಳೂ ಸಹ ತಮ್ಮ ರಾಜ್ಯಗಳಲ್ಲಿ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಸಬ್ಸಿಡಿ ಯೋಜನೆಗಳನ್ನು ಘೋಷಿಸಿವೆ.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

ಇದರಿಂದ ದೇಶದ ಕೆಲವು ನಗರಗಳಲ್ಲಿ ವಿಶೇಷ ಸಬ್ಸಿಡಿ ಯೋಜನೆಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳು ಸ್ವಲ್ಪ ಕಡಿಮೆ ಬೆಲೆಗೆ ಮಾರಾಟವಾಗುತ್ತವೆ. Ola S 1 ಎಲೆಕ್ಟ್ರಿಕ್ ಸ್ಕೂಟರ್ ಪೂರ್ತಿಯಾಗಿ ಚಾರ್ಜ್ ಆದ ನಂತರ 121 ಕಿ.ಮೀಗಳವರೆಗೆ ಚಲಿಸಬಲ್ಲದು. ಈ ಎಲೆಕ್ಟ್ರಿಕ್ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 90 ಕಿ.ಮೀಗಳಾಗಿದೆ. ಇನ್ನು S 1 Pro ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಹೆಚ್ಚು ಪರಿಣಾಮಕಾರಿ ಉತ್ಪನ್ನವೆಂದು ಪರಿಗಣಿಸಲಾಗುತ್ತದೆ.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

ಈ ಸ್ಕೂಟರ್ ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 181 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 115 ಕಿ.ಮೀಗಳಾಗಿದೆ. Ola ಎಲೆಕ್ಟ್ರಿಕ್ ಸ್ಕೂಟರ್‌ಗಳು ವಿವಿಧ ರೀತಿಯ ಅತ್ಯಾಧುನಿಕ ತಾಂತ್ರಿಕ ಫೀಚರ್'ಗಳನ್ನು ಹೊಂದಿವೆ. ಇವುಗಳಲ್ಲಿ 7 ಇಂಚಿನ ಟಚ್‌ಸ್ಕ್ರೀನ್, 4 ಜಿ ಕನೆಕ್ಟಿವಿಟಿ, ಬ್ಲೂಟೂತ್ ಕನೆಕ್ಟಿವಿಟಿ, ವೈಫೈ, ಕ್ರೂಸ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್ ಗಳು ಸೇರಿವೆ.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

Ola ಎಲೆಕ್ಟ್ರಿಕ್ ಸ್ಕೂಟರ್‌ಗಳು ಇಂತಹ ವಿನೂತನ ಫೀಚರ್ ಗಳನ್ನು ಹೊಂದಿರುವುದರಿಂದ ಭಾರತದಲ್ಲಿ ದೊಡ್ಡ ಮಟ್ಟದ ಸ್ವಾಗತವನ್ನು ಪಡೆಯುತ್ತಿವೆ. Ola ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ತಮಿಳುನಾಡಿನ ಹೊಸೂರಿನಲ್ಲಿರುವ ಕಂಪನಿಯ ಉತ್ಪಾದನಾ ಘಟಕದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಉತ್ಪಾದನಾ ಘಟಕವು ಸುಮಾರು 500 ಎಕರೆ ಪ್ರದೇಶವನ್ನು ಒಳಗೊಂಡ ಅತಿದೊಡ್ಡ ಉತ್ಪಾದನಾ ಘಟಕವಾಗಿದೆ.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

Ola ಎಲೆಕ್ಟ್ರಿಕ್ ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಆಫ್ರಿಕಾ, ಯುರೋಪ್ ಹಾಗೂ ಅಮೆರಿಕಾಗಳಲ್ಲೂ ಬಿಡುಗಡೆಗೊಳಿಸಲು ಮುಂದಾಗಿದೆ. ಅಮೆರಿಕಾದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುವ ಕುರಿತು Ola ಕಂಪನಿಯ ಸಿಇಒ ಭಾವೀಶ್ ಅಗರ್‌ವಾಲ್ ರವರು ಕೆಲ ದಿನಗಳ ಹಿಂದಷ್ಟೇ ಮಾಹಿತಿ ನೀಡಿದ್ದರು. 2022 ರಿಂದ ಈ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ರಫ್ತು ಮಾಡುವ ಬಗ್ಗೆ ಸುಳಿವು ನೀಡಿದ್ದರು.

ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬುಕ್ಕಿಂಗ್ ಪುನರಾರಂಭಿಸಿದ Ola

Ola ಎಲೆಕ್ಟ್ರಿಕ್ ಕಂಪನಿಯು ಸದ್ಯಕ್ಕೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾತ್ರ ಉತ್ಪಾದಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ತ್ರಿ ಚಕ್ರ ವಾಹನಗಳನ್ನು ಹಾಗೂ ಸಣ್ಣ ಗಾತ್ರದ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದನೆ ಮಾಡುವ ಗುರಿಯನ್ನು ಹೊಂದಿದೆ.

Most Read Articles

Kannada
English summary
Ola electric re opens bookings for its electric scooters details
Story first published: Wednesday, October 6, 2021, 10:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X