ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳ ಮಾಹಿತಿ ಹಂಚಿಕೊಂಡ ಓಲಾ

ಓಲಾ ಎಲೆಕ್ಟ್ರಿಕ್ ಕಂಪನಿಯು ಶೀಘ್ರದಲ್ಲೇ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಸ್ಕೂಟರಿನ ಉತ್ಪಾದನಾ ಮಾದರಿಯ ಪ್ರಮುಖ ಫೀಚರ್ಸ್‌ಗಳನ್ನು ಬಹಿರಂಗಪಡಿಸಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಮೈಲೇಜ್ ವಿಚಾರದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಹೆಚ್ಚಿನ ಮಟ್ಟದ ಮೈಲೇಜ್, ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಳ್ಳುವ ಮೂಲಕ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಓಲಾ ಎಲೆಕ್ಟ್ರಿಕ್ ಕಂಪನಿಯ ಸಿಇಓ ಭಾವೀಶ್ ಅಗರ್‌ವಾಲ್ ಇತ್ತೀಚೆಗೆ ಹಂಚಿಕೊಂಡ ಮಾಹಿತಿ ಪ್ರಕಾರ ಹೊಸ ಸ್ಕೂಟರ್‌ನಲ್ಲಿ ಹೆಚ್ಚಿನ ಮೈಲೇಜ್ ಖಾತ್ರಿಪಡಿಸುವ ಬ್ಯಾಟರಿ ಪ್ಯಾಕ್, ಸ್ಕೂಟರ್‌ಗೆ ಗರಿಷ್ಠ ಸುರಕ್ಷತೆ ಒದಗಿಸುವ ಆ್ಯಪ್ ಆಧರಿತ ಕನೆಕ್ಟೆಡ್ ಟೆಕ್ನಾಲಜಿ ಮತ್ತು ಎರಡು ಫುಲ್ ಸೈಜ್ ಹೆಲ್ಮೆಟ್ ಹಿಡಿಸಬಹುದಾದಷ್ಟು ಬೂಟ್ ಸ್ಪೆಸ್ ನೀಡಿರುವುದು ಬಹುತೇಕ ಖಚಿತವಾಗಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಇನ್ನು ಹೊಸ ಸ್ಕೂಟರ್ ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾದ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದ್ದು, ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ ಕಂಪನಿಯು ವಿವಿಧ ನಗರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಹೊಸ ಯೋಜನೆಗಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 2,400 ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಸದ್ಯ ಇವಿ ಸ್ಕೂಟರ್ ಮಾತ್ರ ಉತ್ಪಾದನೆ ಮಾಡಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಇವಿ ವಾಹನಗಳನ್ನು ಸಹ ಅಭಿವೃದ್ದಿಪಡಿಸುವ ಯೋಜನೆಯಲ್ಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ವಾಹನ ಉತ್ಪಾದನಾ ಯೋಜನೆಗಾಗಿ ಓಲಾ ಕಂಪನಿಯು ತಮಿಳುನಾಡಿನ ಹೊಸರಿನಲ್ಲಿ ಅತ್ಯಾಧುನಿಕ ವಾಹನ ಉತ್ಪಾದನಾ ಘಟಕವನ್ನು ಸಹ ನಿರ್ಮಾಣ ಮಾಡಿದ್ದು, ಹೊಸ ಘಟಕವು ಬರೋಬ್ಬರಿ 500 ಎಕರೆ ವ್ಯಾಪ್ತಿಯಲ್ಲಿ ತಲೆಎತ್ತಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಓಲಾ ಕಂಪನಿಯು ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನಿರ್ಮಾಣದ ಗುರಿ ಹೊಂದಿದ್ದು, ಹೊಸ ಇವಿ ಮಾದರಿಗಳ ಮೂಲಕ ಅಂತರ್‌ರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಹೊಸೂರಿನಲ್ಲಿ ನಿರ್ಮಾಣವಾಗಿ ಓಲಾ ವಾಹನ ಉತ್ಪಾದನಾ ಘಟಕವು ಏಷ್ಯಾದಲ್ಲಿಯೇ ಅತಿದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಘಟಕವಾಗಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಕಂಪನಿಯು ಪ್ರತಿ 2 ಸೆಕೆಂಡುಗಳಲ್ಲಿ 1 ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣಗೊಳ್ಳಬಹುದಾಷ್ಟು ಬೃಹತ್ ಪ್ರಮಾಣದಲ್ಲಿ ವಾಹನ ಅಭಿವೃದ್ದಿಯ ಸೌಲಭ್ಯ ಹೊಂದಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಓಲಾ ಕಂಪನಿಯು ಹೊಸ ಸ್ಕೂಟರ್ ಮಾದರಿಯನ್ನು ಕೇವಲ ಭಾರತದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೂ ರಫ್ತು ಮಾಡುವ ಬೃಹತ್ ಯೋಜನೆ ಹೊಂದಿದ್ದು, ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ನಿರ್ಮಾಣ ಮಾಡಲಾಗುತ್ತಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಿವಿಧ ತಾಂತ್ರಿಕ ಕಾರ್ಯಗಳಿಗಾಗಿ ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲಾಗುತ್ತಿದ್ದು, ಬೃಹತ್ ಪ್ರಮಾಣದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಯೋಜನೆಗಾಗಿ ನೇದರ್ಲ್ಯಾಂಡ್ ಮೂಲದ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಜೊತೆಗೂಡಿಸಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಹೊಸ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಹಲವಾರು ಎಲೆಕ್ಟ್ರಿಕ್ ಮಾದರಿಗಳಿಗೆ ಬೆಲೆ ವಿಚಾರದಲ್ಲಿ ಮೈಲೇಜ್ ವಿಚಾರದಲ್ಲಿ ಭಾರೀ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಪೆಟ್ರೋಲ್ ಬೆಲೆ ಹೆಚ್ಚಳದಿಂದಾಗಿ ಓಲಾ ಇವಿ ಸ್ಕೂಟರ್‌ಗೆ ಭರ್ಜರಿ ಬೇಡಿಕೆ ಹರಿದುಬರಲಿದೆ ಎನ್ನಲಾಗಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಫೀಚರ್ಸ್‌ಗಳನ್ನು ಹಂಚಿಕೊಂಡ ಓಲಾ

ಇದಕ್ಕಾಗಿಯೇ ಈ ವರ್ಷಾಂತ್ಯದೊಳಗೆ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲು ಯೋಜಿಸುತ್ತಿರುವ ಓಲಾ ಕಂಪನಿಯು ದೇಶಾದ್ಯಂತ ಪ್ರಮುಖ 400 ನಗರಗಳಲ್ಲಿ 1 ಲಕ್ಷ ಫಾಸ್ಟ್ ಚಾರ್ಜರ್‌ಗಳನ್ನು ಮತ್ತು ಆಯ್ದ ಮೆಟ್ರೊ ನಗರಗಳಲ್ಲಿ ಹೈಪರ್ ಚಾರ್ಜಿಂಗ್ ಪಾರ್ಕ್‌ಗಳನ್ನು ನಿರ್ಮಾಣ ಮಾಡುತ್ತಿದೆ.

More from DriveSpark

Article Published On: Tuesday, July 13, 2021, 10:51 [IST]
English summary
Ola Electric Scooter Features Teased.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+