ಹತ್ತು ಹೊಸ ಬಣ್ಣಗಳೊಂದಿಗೆ ಖರೀದಿಗೆ ಲಭ್ಯವಿರಲಿವೆ ಓಲಾ ಎಲೆಕ್ಟ್ರಿಕ್ ಸ್ಕೂಟರ್
ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಶೀಘ್ರದಲ್ಲೇ ಬಿಡುಗಡೆಯಾಗುವ ಸಿದ್ದತೆಯಲ್ಲಿದ್ದು, ಹೊಸ ಇವಿ ಸ್ಕೂಟರ್ ಮಾದರಿಗಾಗಿ ಓಲಾ ಕಂಪನಿಯು ಹತ್ತು ಹೊಸ ಬಣ್ಣಗಳ ಆಯ್ಕೆ ನೀಡಿರುವುದು ಬಹುತೇಕ ಖಚಿತವಾಗಿದೆ.

ಓಲಾ ಕಂಪನಿಯು ಗ್ರಾಹಕರ ಬೇಡಿಕೆ ಆಧರಿಸಿ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಹತ್ತು ಬಣ್ಣಗಳ ಆಯ್ಕೆ ನೀಡಿದ್ದು, ಬಣ್ಣಗಳ ಆಯ್ಕೆ ಕುರಿತು ಕಂಪನಿಯು ತನ್ನ ಅಧಿಕೃತ ಟ್ಟಿಟರ್ ಖಾತೆಯಲ್ಲಿ ಬಹಿರಂಗಪಡಿಸಿದೆ. ಹೊಸ ಸ್ಕೂಟರ್ ಅನ್ನು ಮೊದಲ ಬಾರಿಗೆ ಮ್ಯಾಟೆ ಬ್ಲ್ಯಾಕ್, ಪಿಂಕ್ ಮತ್ತು ಬ್ಲ್ಯೂ ಬಣ್ಣಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಹೊಸ ಸ್ಕೂಟರ್ ಮಾದರಿಗಾಗಿ ಹತ್ತು ಹೊಸ ಬಣ್ಣಗಳನ್ನು ನೀಡಿರುವ ಮಾಹಿತಿ ಹಂಚಿಕೊಂಡಿದೆ.

ಹೊಸ ಇವಿ ಸ್ಕೂಟರ್ ಪ್ಯಾಸ್ಟೆಲ್ ರೆಡ್, ಯೆಲ್ಲೊ, ಬ್ಲ್ಯೂ, ವೈಟ್, ಮೆಟಾಲಿಕ್ ಸಿಲ್ವರ್, ರೋಜ್ ಗೋಲ್ಡ್, ಪಿಂಕ್, ಮ್ಯಾಟೆ ಬ್ಲ್ಯಾಕ್, ಬ್ಲ್ಯೂ ಮತ್ತು ಗ್ರೆ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದ್ದು, ಹೊಸ ಸ್ಕೂಟರ್ ಖರೀದಿಗಾಗಿ ಈಗಾಗಲೇ 1.50 ಲಕ್ಷಕ್ಕೂ ಅಧಿಕ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗಾಗಿ ರೂ. 499 ಮುಂಗಡ ಹಣದೊಂದಿಗೆ ಬುಕ್ಕಿಂಗ್ ಆರಂಭಿಸಿದ್ದು, ಹೊಸ ಸ್ಕೂಟರಿನಲ್ಲಿ ಕಂಪನಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಹೊಸ ಸ್ಕೂಟರ್‌ನಲ್ಲಿ ಓಲಾ ಕಂಪನಿಯು ಎರಡು ಮಾದರಿಯಲ್ಲಿ ಬ್ಯಾಟರಿ ಪ್ಯಾಕ್ ನೀಡುವ ಸಾಧ್ಯತೆಗಳಿದ್ದು, ಸಿಂಗಲ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ಪ್ರತಿ ಚಾರ್ಜ್‌ಗೆ 140 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ ಡ್ಯುಯಲ್ ಬ್ಯಾಟರಿ ಬ್ಯಾಕ್ಅಪ್ ಹೊಂದಿರುವ ಮಾದರಿಯಿಂದ ಗರಿಷ್ಠ 240 ಕಿ.ಮೀ ಮೈಲೇಜ್ ಪಡೆಯಬಹುದಾಗಿದೆ.

ಈ ಮೂಲಕ ಓಲಾ ಹೊಸ ಸ್ಕೂಟರ್ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ ಹೆಚ್ಚಿನ ಸಂಖ್ಯೆಯಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ಹೊಸ ವಾಹನ ಉತ್ಪಾದನಾ ಯೋಜನೆಗಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 2,400 ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಸದ್ಯ ಇವಿ ಸ್ಕೂಟರ್ ಮಾತ್ರ ಉತ್ಪಾದನೆ ಮಾಡಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ತ್ರಿ ಚಕ್ರ ವಾಹನಗಳು ಮತ್ತು ಇವಿ ಕಾರುಗಳನ್ನು ಸಹ ಅಭಿವೃದ್ದಿಪಡಿಸಲಿದೆ.

ವಾಹನ ಉತ್ಪಾದನೆಗಾಗಿ ಓಲಾ ಕಂಪನಿಯು ತಮಿಳುನಾಡಿನ ಹೊಸೂರಿನಲ್ಲಿ ಬೃಹತ್ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡುತ್ತಿದ್ದು, ಹೊಸ ಉತ್ಪಾದನಾ ಘಟಕವು ಬರೋಬ್ಬರಿ 500 ಎಕರೆ ವ್ಯಾಪ್ತಿಯಲ್ಲಿ ಅಭಿವೃದ್ದಿಗೊಳ್ಳುತ್ತಿದೆ.

ಓಲಾ ಹೊಸ ವಾಹನ ಉತ್ಪದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉತ್ಪಾದನೆ ಮಾಡಬಹುದಾದ ಸಾಮರ್ಥ್ಯ ಹೊಂದಿದ್ದು, ಹೊಸ ಘಟಕವು ಏಷ್ಯಾದಲ್ಲೇ ಅತಿ ದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಘಟಕ ಎನ್ನುವ ಹೆಗ್ಗಳಿಕೆಯೊಂದಿಗೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಲಿದೆ.


Click it and Unblock the Notifications








