Just In
- 1 hr ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 1 hr ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 3 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 3 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- News
ಸರ್ಕಾರಗಳಿಗೆ ವರದಾನವಾಗುತ್ತಿದೆ ಫೇಸ್ಬುಕ್ ನೀತಿಯಲ್ಲಿನ ಲೋಪ
- Sports
ಐಪಿಎಲ್ 2021: ಕಣಕ್ಕಿಳಿಯಲು ಪಡಿಕ್ಕಲ್ ಸಜ್ಜು, ಆರ್ಸಿಬಿ ಸಂಭಾವ್ಯ ತಂಡ ಹೀಗಿದೆ
- Movies
'ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ': ಯಶ್ಗೆ ಪತ್ರ ಬರೆದ ಸಾರಿಗೆ ನೌಕರರು?
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
ಕ್ಯಾಬ್ ಸೇವಾ ಕಂಪನಿಯಾಗಿರುವ ಓಲಾ ಕಂಪನಿಯು ತನ್ನ ಅಂಗಸಂಸ್ಥೆಯಾದ ಓಲಾ ಎಲೆಕ್ಟ್ರಿಕ್ ಕಂಪನಿಯ ಮೂಲಕ ಆಟೋ ಉದ್ಯಮಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದು, ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಇವಿ ವಾಹನ ಉತ್ಪಾದನೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಹೊಸ ಯೋಜನೆಗಳಿಗೆ ಪೂರಕವಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ಭಾರತದಲ್ಲಿ ವಿಶ್ವದ ಅತಿ ದೊಡ್ಡ ಇವಿ ವಾಹನಗಳ ಉತ್ಪಾದನಾ ಘಟಕವನ್ನು ಆರಂಭಿಸುತ್ತಿದ್ದು, ಈಗಾಗಲೇ ಹೊಸ ವಾಹನ ಉತ್ಪಾದನಾ ಘಟಕ ನಿರ್ಮಾಣ ಪ್ರಕ್ರಿಯೆಗೂ ಚಾಲನೆ ನೀಡಿದೆ. ತಮಿಳುನಾಡಿನ ಹೊಸೂರಿನಲ್ಲಿ ಹೊಸ ವಾಹನ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗುತ್ತಿದ್ದು, ಹೊಸ ಯೋಜನೆಗಾಗಿ ನೇದರ್ಲ್ಯಾಂಡ್ ಮೂಲದ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಜೊತೆಗೂಡಿಸಿದೆ.

ಓಲಾ ಎಲೆಕ್ಟ್ರಿಕ್ ಜೊತೆಗೂಡಿರುವ ಎಟರ್ಗೋ ಕಂಪನಿಯು ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯೊಂದಿಗೆ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಯುರೋಪಿನ್ ಶೈಲಿಯ ಇವಿ ಸ್ಕೂಟರ್ಗಳನ್ನೇ ಇದೀಗ ಭಾರತದಲ್ಲೂ ಕೆಲವು ಬದಲಾವಣೆಗಳೊಂದಿಗೆ ಅಭಿವೃದ್ದಿಗೊಳಿಸಲಾಗುತ್ತಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಎಟರ್ಗೋ ಆ್ಯಪ್ ಸ್ಕೂಟರ್ ಮಾದರಿಯನ್ನೇ ಓಲಾ ಎಲೆಕ್ಟ್ರಿಕ್ ಕಂಪನಿಯು ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಭಾರತದಲ್ಲೂ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಯುರೋಪಿನ್ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಭಾರತದಲ್ಲಿ ಮಾರಾಟವಾಗುವ ಸ್ಕೂಟರಿನ ಮೈಲೇಜ್ ಪ್ರಮಾಣವು ವ್ಯತ್ಯಾಸವಾಗಬಹುದಾಗಿದೆ.

ಎಟರ್ಗೋ ಆ್ಯಪ್ಸ್ಕೂಟರ್ ಮಾದರಿಯು ಸದ್ಯ ಹಲವಾರು ಪ್ರೀಮಿಯಂ ಫೀಚರ್ಸ್ ಜೊತೆಗೆ ಸುಧಾರಿತ ಬ್ಯಾಟರಿ ಪ್ಯಾಕ್ನೊಂದಿಗೆ ಪ್ರತಿ ಚಾರ್ಜ್ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ತೆಗೆದು ಹಾಕಬಹುದಾದ ಬ್ಯಾಟರಿ ಸೌಲಭ್ಯದೊಂದಿಗೆ ಕೇವಲ 2.50 ಗಂಟೆಯಿಂದ 3 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ. ಆದರೆ ಭಾರತದಲ್ಲಿ ಇಷ್ಟೆಲ್ಲಾ ಫೀಚರ್ಸ್ಗಳೊಂದಿಗೆ ಸ್ಕೂಟರ್ ಮಾರಾಟವು ದುಬಾರಿಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಬೇಡಿಕೆಯೆಂತೆ ಆಕರ್ಷಕ ಬೆಲೆಯೊಂದಿಗೆ ಗರಿಷ್ಠ ಮಟ್ಟದ ಫೀಚರ್ಸ್ ನೀಡುವ ಸಾಧ್ಯತೆಗಳಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಆ್ಯಪ್ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್ಗೆ 240 ಕಿ.ಮೀ ಮೈಲೇಜ್ ಹೊಂದಿರುವುದಿಲ್ಲವಾದರೂ 150 ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಬ್ಯಾಟರಿ ಪ್ಯಾಕ್ ಹೊಂದಬಹುದಾಗಿದ್ದು, ಹೊಸ ಸ್ಕೂಟರ್ ಅನ್ನು ಪ್ರತಿಸ್ಪರ್ಧಿ ಸ್ಕೂಟರ್ಗಳ ಬೆಲೆ ಅಂತರದಲ್ಲಿ ಉತ್ತಮ ಫೀಚರ್ಸ್ ನೀಡಲು ಯೋಜಿಸಲಾಗುತ್ತಿದೆ.

ಜೊತೆಗೆ ಸಿಟಿ ರೈಡಿಂಗ್ಗಾಗಿ ಅತ್ಯುತ್ತಮ ವಿನ್ಯಾಸ ಪಡೆದುಕೊಂಡಿರುವ ಎಟರ್ಗೋ ಆ್ಯಪ್ಸ್ಕೂಟರ್ ಮಾದರಿಯು ಕನೆಕ್ಟೆಡ್ ಫೀಚರ್ಸ್ನೊಂದಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದ್ದು, ಪ್ರತಿ ಗಂಟೆಗೆ 60 ಕಿ.ಮೀ ಟಾಪ್ ಸ್ಪೀಡ್ನೊಂದಿಗೆ ಅತ್ಯುತ್ತಮ ರೈಡಿಂಗ್ ಅನುಭವ ಒದಗಿಸಲಿದ್ದು, ವಿವಿಧ ರೈಡಿಂಗ್ ಮೋಡ್ಗಳ ಮೇಲೆ ಮೈಲೇಜ್ ಪ್ರಮಾಣವು ನಿರ್ಧಾರವಾಗಲಿದೆ.

ಇನ್ನು ಮಾಹಿತಿಗಳ ಪ್ರಕಾರ ಓಲಾ ಹೊಸ ಸ್ಕೂಟರ್ ಮಾದರಿಯು ಈ ವರ್ಷದ ಕೊನೆಯಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಹೊಸ ಸ್ಕೂಟರ್ ಅನ್ನು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 1 ಲಕ್ಷದಿಂದ ರೂ. 1.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆ ಮಾಡಬಹುದಾಗಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಸದ್ಯ ಮಾರುಕಟ್ಟೆಯಲ್ಲಿರುವ ಪ್ರಮುಖ ಪ್ರೀಮಿಯಂ ಇವಿ ಸ್ಕೂಟರ್ಗಳು ರೂ. 90 ಸಾವಿರದಿಂದ ರೂ.1.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಬಹುತೇಕ ಸ್ಕೂಟರ್ಗಳ ಮೈಲೇಜ್ ಪ್ರಮಾಣವು ವಿವಿಧ ರೈಡ್ ಮೋಡ್ ಆಧರಿಸಿದ 60ಕಿ.ಮೀ ನಿಂದ 110 ಕಿ.ಮೀ ವರಗೆ ಗರಿಷ್ಠ ಮೈಲೇಜ್ ಹೊಂದಿವೆ.

ಆದರೆ ಓಲಾ ಸ್ಕೂಟರ್ ಮಾದರಿಯು ಉತ್ತಮ ಬೆಲೆಯೊಂದಿಗೆ ಅಧಿಕ ಮಟ್ಟದ ಮೈಲೇಜ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಓಲಾ ಕಂಪನಿಯು ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್ಗಳ ನಿರ್ಮಾಣದ ಗುರಿಹೊಂದಲಾಗಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಇವಿ ವಾಹನ ಉತ್ಪಾದನಾ ಘಟಕದೊಂದಿಗೆ ಓಲಾ ಕಂಪನಿಯು ಜಾಗತಿಕ ಮಾರುಕಟ್ಟೆಗೆ ಪ್ರವೇಶ ಪಡೆಯಲಿದ್ದು, ಓಲಾ ಕಂಪನಿಯು ಘಟಕದಲ್ಲಿ ಉತ್ಪಾದಿಸುವ ಸ್ಕೂಟರ್ಗಳನ್ನು ಭಾರತದಲ್ಲಿ ಮಾತ್ರವಲ್ಲದೇ ಯುರೋಪ್, ಇಂಗ್ಲೆಂಡ್, ಲ್ಯಾಟಿನ್ ಅಮೆರಿಕಾದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಮಾಡುವ ಯೋಜನೆಯಿದೆ.