Just In
- 1 hr ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 2 hrs ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 4 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 17 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
Don't Miss!
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರತಿ ಚಾರ್ಜ್ಗೆ 240 ಕಿ.ಮೀ ಮೈಲೇಜ್ ನೀಡುವ ಓಲಾ ಇವಿ ಸ್ಕೂಟರ್ ಬಿಡುಗಡೆ ಮಾಹಿತಿ ಬಹಿರಂಗ
ಓಲಾ ಕಂಪನಿಯು ತನ್ನ ಅಂಗಸಂಸ್ಥೆಯಾದ ಓಲಾ ಎಲೆಕ್ಟ್ರಿಕ್ ಕಂಪನಿಯ ಮೂಲಕ ಜಾಗತಿಕ ಆಟೋ ಉದ್ಯಮಕ್ಕೆ ಅಧಿಕೃತವಾಗಿ ಪ್ರವೇಶಿಸುತ್ತಿದ್ದು, ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಇವಿ ವಾಹನ ಉತ್ಪಾದನೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.
ಓಲಾ ಎಲೆಕ್ಟ್ರಿಕ್ ಕಂಪನಿಯು ಭಾರತದಲ್ಲಿ ವಿಶ್ವದ ಅತಿ ದೊಡ್ಡ ಇವಿ ವಾಹನಗಳ ಉತ್ಪಾದನಾ ಘಟಕವನ್ನು ಆರಂಭಿಸುತ್ತಿದ್ದು, ಈಗಾಗಲೇ ಹೊಸ ವಾಹನ ಉತ್ಪಾದನಾ ಘಟಕ ನಿರ್ಮಾಣ ಪ್ರಕ್ರಿಯೆಗೂ ಚಾಲನೆ ನೀಡಿದೆ. ತಮಿಳುನಾಡಿನ ಹೊಸೂರಿನಲ್ಲಿ ಹೊಸ ವಾಹನ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗುತ್ತಿದ್ದು, ಹೊಸ ಯೋಜನೆಗಾಗಿ ಡಚ್ ಕಂಪನಿ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಕೈಜೋಡಿಸಿದೆ.
ಓಲಾ ಎಲೆಕ್ಟ್ರಿಕ್ ಜೊತೆಗೂಡಿರುವ ಎಟರ್ಗೋ ಕಂಪನಿಯು ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯೊಂದಿಗೆ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಯುರೋಪಿನ್ ಶೈಲಿಯ ಇವಿ ಸ್ಕೂಟರ್ಗಳನ್ನೇ ಇದೀಗ ಭಾರತದಲ್ಲೂ ಕೆಲವು ಬದಲಾವಣೆಗಳೊಂದಿಗೆ ಅಭಿವೃದ್ದಿಗೊಳಿಸಲಾಗುತ್ತಿದೆ.
ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಎಟರ್ಗೋ ಆ್ಯಪ್ ಸ್ಕೂಟರ್ ಮಾದರಿಯನ್ನೇ ಓಲಾ ಎಲೆಕ್ಟ್ರಿಕ್ ಕಂಪನಿಯು ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಭಾರತದಲ್ಲೂ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಸ್ಕೂಟರಿನ ಮೊದಲ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.
ಎಟರ್ಗೋ ಆ್ಯಪ್ಸ್ಕೂಟರ್ ಮಾದರಿಯಲ್ಲೇ ಅಭಿವೃದ್ದಿಗೊಂಡಿರುವ ಓಲಾ ಹೊಸ ಇವಿ ಸ್ಕೂಟರ್ ಮಾದರಿಯು ಪ್ರೀಮಿಯಂ ಫೀಚರ್ಸ್ ಜೊತೆಗೆ ಸುಧಾರಿತ ಬ್ಯಾಟರಿ ಪ್ಯಾಕ್ನೊಂದಿಗೆ ಪ್ರತಿ ಚಾರ್ಜ್ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ತೆಗೆದು ಹಾಕಬಹುದಾದ 1.15kWh ಬ್ಯಾಟರಿ ಸೌಲಭ್ಯದೊಂದಿಗೆ ಕೇವಲ 2.50 ಗಂಟೆಯಿಂದ 3 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.
ಜೊತೆಗೆ ದೇಶಿಯ ಮಾರುಕಟ್ಟೆಯಲ್ಲಿ ಬೇಡಿಕೆಯೆಂತೆ ಆಕರ್ಷಕ ಬೆಲೆಯೊಂದಿಗೆ ಗರಿಷ್ಠ ಮಟ್ಟದ ಫೀಚರ್ಸ್ ಹೊಂದಿರಲಿದ್ದು, ಹೊಸ ಸ್ಕೂಟರ್ ಅನ್ನು ಪ್ರತಿಸ್ಪರ್ಧಿ ಸ್ಕೂಟರ್ಗಳ ಬೆಲೆ ಅಂತರದಲ್ಲಿ ಉತ್ತಮ ಫೀಚರ್ಸ್ ನೀಡಲು ಯೋಜಿಸಲಾಗುತ್ತಿದೆ.
ಜೊತೆಗೆ ಸಿಟಿ ರೈಡಿಂಗ್ಗಾಗಿ ಅತ್ಯುತ್ತಮ ವಿನ್ಯಾಸ ಪಡೆದುಕೊಂಡಿರುವ ಎಟರ್ಗೋ ಆ್ಯಪ್ಸ್ಕೂಟರ್ ಮಾದರಿಯು ಕನೆಕ್ಟೆಡ್ ಫೀಚರ್ಸ್ನೊಂದಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದ್ದು, ಪ್ರತಿ ಗಂಟೆಗೆ 60 ಕಿ.ಮೀ ಟಾಪ್ ಸ್ಪೀಡ್ನೊಂದಿಗೆ ಅತ್ಯುತ್ತಮ ರೈಡಿಂಗ್ ಅನುಭವ ಒದಗಿಸಲಿದೆ.
ವಿವಿಧ ರೈಡಿಂಗ್ ಮೋಡ್ಗಳ ಆಧಾರದ ಮೈಲೇಜ್ ಪ್ರಮಾಣವು ನಿರ್ಧಾರವಾಗಲಿದ್ದು, ಸ್ಪೋರ್ಟ್ ಮೋಡ್ನಲ್ಲಿ ಕಡಿಮೆ ಮೈಲೇಜ್ ಹೊಂದಿದ್ದರೆ ಇಕೋ ಮೋಡ್ನಲ್ಲಿ ಗರಿಷ್ಠ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.
ಮಾಹಿತಿಗಳ ಪ್ರಕಾರ, ಓಲಾ ಹೊಸ ಸ್ಕೂಟರ್ ಮಾದರಿಯು ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಸ್ಕೂಟರ್ ಅನ್ನು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 1 ಲಕ್ಷದಿಂದ ರೂ. 1.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆ ಮಾಡಬಹುದಾಗಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್
ಸದ್ಯ ಮಾರುಕಟ್ಟೆಯಲ್ಲಿರುವ ಪ್ರಮುಖ ಪ್ರೀಮಿಯಂ ಇವಿ ಸ್ಕೂಟರ್ಗಳು ರೂ. 90 ಸಾವಿರದಿಂದ ರೂ.1.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಬಹುತೇಕ ಸ್ಕೂಟರ್ಗಳ ಮೈಲೇಜ್ ಪ್ರಮಾಣವು ವಿವಿಧ ರೈಡ್ ಮೋಡ್ ಆಧರಿಸಿದ 60ಕಿ.ಮೀ ನಿಂದ 110 ಕಿ.ಮೀ ವರಗೆ ಗರಿಷ್ಠ ಮೈಲೇಜ್ ಹೊಂದಿವೆ.
ಆದರೆ ಓಲಾ ಸ್ಕೂಟರ್ ಮಾದರಿಯು ಉತ್ತಮ ಬೆಲೆಯೊಂದಿಗೆ ಅಧಿಕ ಮಟ್ಟದ ಮೈಲೇಜ್ ಪಡೆದುಕೊಂಡಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದ್ದು, ಓಲಾ ಕಂಪನಿಯು ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಆರಂಭಿಕ ಯೋಜನೆಯೆಂತೆ ವಾರ್ಷಿಕವಾಗಿ 10 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್ಗಳ ನಿರ್ಮಾಣದ ಗುರಿಹೊಂದಲಾಗಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!
ಹೊಸ ಇವಿ ವಾಹನ ಉತ್ಪಾದನಾ ಘಟಕದೊಂದಿಗೆ ಓಲಾ ಎಲೆಕ್ಟ್ರಿಕ್ ಕಂಪನಿಯು ಜಾಗತಿಕ ಮಾರುಕಟ್ಟೆಗೆ ಪ್ರವೇಶ ಪಡೆಯಲಿದ್ದು, ಓಲಾ ಕಂಪನಿಯು ಘಟಕದಲ್ಲಿ ಉತ್ಪಾದಿಸುವ ಸ್ಕೂಟರ್ಗಳನ್ನು ಭಾರತದಲ್ಲಿ ಮಾತ್ರವಲ್ಲದೇ ಯುರೋಪ್, ಇಂಗ್ಲೆಂಡ್, ಲ್ಯಾಟಿನ್ ಅಮೆರಿಕಾದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟವಾಗಲಿವೆ.