ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಆಟೋ ಉತ್ಪಾದನಾ ಕ್ಷೇತ್ರಕ್ಕೆ ಅಧಿಕೃತವಾಗಿ ಪ್ರವೇಶಿಸಿರುವ ಕ್ಯಾಬ್ ಸೇವಾ ಕಂಪನಿಯಾದ ಓಲಾ ಮೊದಲ ಬಾರಿಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆದಲ್ಲೂ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ವಿಶ್ವದಲ್ಲೇ ಅತಿ ದೊಡ್ಡ ಇವಿ ವಾಹನಗಳ ಉತ್ಪಾದನಾ ಘಟಕವನ್ನು ತೆರೆಯುತ್ತಿದೆ.

ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಇದೇ ವರ್ಷಾಂತ್ಯಕ್ಕೆ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿರುವ ಓಲಾ ಕಂಪನಿಯು ತಮಿಳುನಾಡಿನಲ್ಲಿ ಉತ್ಪಾದನಾ ಘಟಕ ನಿರ್ಮಾಣ ಮಾಡುತ್ತಿದ್ದು, ಹೊಸ ಯೋಜನೆಗಾಗಿ ನೇದರ್ಲ್ಯಾಂಡ್ ಮೂಲದ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಜೊತೆಗೂಡಿಸಿದೆ. ಹೊಸ ಯೋಜನೆ ಅಡಿಯಲ್ಲಿ ವಿವಿಧ ರೇಂಜ್ ಮಾದರಿಯ ಹಲವು ಎಲೆಕ್ಟ್ರಿಕ್ ಉತ್ಪಾದನೆ ಮಾಡಿರುವ ಓಲಾ ಕಂಪನಿಯು ಈಗಾಗಲೇ ಹೊಸ ವಾಹನಗಳ ಟೆಸ್ಟಿಂಗ್ ಪ್ರಕ್ರಿಯೆಗೂ ಚಾಲನೆ ನೀಡಿದೆ.

ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಓಲಾ ಜೊತೆಗೂಡಿರುವ ಎಟರ್ಗೋ ಕಂಪನಿಯು ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯೊಂದಿಗೆ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಆ್ಯಪ್‌ ಸ್ಕೂಟರ್ ಮಾದರಿಯನ್ನು ಭಾರತದಲ್ಲೂ ಬಿಡುಗಡೆ ಮಾಡಲು ಸಿದ್ದತೆ ನಡೆಸಲಾಗುತ್ತಿದೆ.

ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಎಟರ್ಗೋ ಆ್ಯಪ್‌ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ತೆಗೆದುಹಾಕಬಹುದಾದ ಬ್ಯಾಟರಿ ಸೌಲಭ್ಯದೊಂದಿಗೆ ಕೇವಲ 3 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಜೊತೆಗೆ ಸಿಟಿ ರೈಡಿಂಗ್‌ಗಾಗಿ ಅತ್ಯುತ್ತಮ ವಿನ್ಯಾಸ ಪಡೆದುಕೊಂಡಿರುವ ಎಟರ್ಗೋ ಆ್ಯಪ್‌ಸ್ಕೂಟರ್ ಮಾದರಿಯು ಕನೆಕ್ಟೆಡ್ ಫೀಚರ್ಸ್‌ನೊಂದಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದ್ದು, ಪ್ರತಿ ಗಂಟೆಗೆ 45 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಅತ್ಯುತ್ತಮ ರೈಡಿಂಗ್ ಅನುಭವ ಒದಗಿಸಲಿದೆ. ಇದೇ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನೇ ಇದೀಗ ಓಲಾ ಕಂಪನಿಯು ಸಹಭಾಗೀತ್ವದ ಯೋಜನೆ ಅಡಿ ಭಾರತದಲ್ಲೇ ನಿರ್ಮಾಣ ಮಾಡಿ ಮಾರಾಟ ಮಾಡಲಿದ್ದು, ಮಾಹಿತಿಗಳ ಓಲಾ ಹೊಸ ಸ್ಕೂಟರ್ ಮಾದರಿಯು ಈ ವರ್ಷದ ಮಧ್ಯಂತರದಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿವೆ.

ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಇದಲ್ಲದೆ ಓಲಾ ಕಂಪನಿಯು ಎಲೆಕ್ಟ್ರಿಕ್ ಸ್ಕೂಟರ್‌ಗಳೊಂದಿಗೆ ನಾಲ್ಕು ಚಕ್ರದ ಮಧ್ಯಮ ಕ್ರಮಾಂಕದ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳನ್ನು ಸಹ ಅಭಿವೃದ್ದಿಗೊಳಿಸುವ ಯೋಜನೆಯಲ್ಲಿದ್ದು, ಈ ಮೂಲಕ ಆಟೋ ಉದ್ಯಮದಲ್ಲಿ ಓಲಾ ಹೊಸ ನೀರಿಕ್ಷೆ ಹುಟ್ಟುಹಾಕಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಇನ್ನು ಓಲಾ ಕಂಪನಿಯು ತಮಿಳುನಾಡಿನಲ್ಲಿ ನಿರ್ಮಾಣಗೊಳ್ಳಲಿರುವ ಹೊಸ ಘಟಕದ ನಿರ್ಮಾಣಕ್ಕೆ ಆರಂಭಿಕವಾಗಿ 100 ಎಕರೆ ವ್ಯಾಪ್ತಿಯಲ್ಲಿ ಹೊಸ ಘಟಕ ತೆರೆಯುತ್ತಿದ್ದು, ಇದಕ್ಕಾಗಿ ಓಲಾ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 2,400 ಕೋಟಿ ಹೂಡಿಕೆ ಮಾಡುತ್ತಿದೆ.

ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಯೋಜನೆ ಆರಂಭದ ನಂತರ ಬಂಡವಾಳದ ಪ್ರಮಾಣವು ಮತ್ತಷ್ಟು ಹೆಚ್ಚಳವಾಗಲಿದ್ದು, ಹೊಸ ಘಟಕದ ಮೂಲಕ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನಿರ್ಮಾಣ ಮಾಡುವ ಗುರಿಹೊಂದಲಾಗಿದೆ. ಈ ಮೂಲಕ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶದೊಂದಿಗೆ ಸುಮಾರು 10 ಸಾವಿರ ಪ್ರತ್ಯೇಕ್ಷ ಮತ್ತು ಪರೋಕ್ಷವಾಗಿ ಉದ್ಯೋಗಾವಕಾಶಗಳು ತೆರೆದುಕೊಳ್ಳಲಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಉತ್ಪಾದನಾ ಘಟಕ ತೆರೆಯುವ ಕುರಿತಂತೆ ಈ ಮೊದಲು ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದ ಓಲಾ ಕಂಪನಿಯು ಅಂತಿಮವಾಗಿ ತಮಿಳುನಾಡು ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ಸ್ಕೂಟರ್ ಉತ್ಪಾದನೆ ಅಧಿಕೃತವಾಗಿ ಚಾಲನೆ ನೀಡುವ ಸಿದ್ದತೆಯಲ್ಲಿದೆ.

Most Read Articles

Kannada
Read more on ಓಲಾ ola
English summary
Ola Electric Scooter Spied Testing. Read in Kannada.
Story first published: Friday, January 29, 2021, 21:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X