ಉತ್ಪಾದನಾ ಮಾದರಿಯೊಂದಿಗೆ ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಸ್ಕೂಟರ್ ಬಿಡುಗಡೆಯ ಹಂತದಲ್ಲಿರುವಾಗ ನಮ್ಮ ಬೆಂಗಳೂರಿನ ರಸ್ತೆಗಳಲ್ಲಿ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ಓಲಾ ಎಲೆಕ್ಟ್ರಿಕ್ ಕಂಪನಿಯು ಹೊಸ ಸ್ಕೂಟರ್ ಖರೀದಿಗಾಗಿ ಈಗಾಗಲೇ ರೂ.499 ಮುಂಗಡದೊಂದಿಗೆ ಬುಕ್ಕಿಂಗ್ ಸಹ ಆರಂಭಿಸಿದ್ದು, ಹೊಸ ಸ್ಕೂಟರಿನ ಅಧಿಕೃತ ಬಣ್ಣಗಳ ಮಾಹಿತಿಯನ್ನು ಸಹ ಹಂಚಿಕೊಂಡಿದೆ. ಇದೀಗ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಸಿದ್ದತೆಯಲ್ಲಿದ್ದು, ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ರೋಡ್ ಟೆಸ್ಟಿಂಗ್ ನಡೆಸಲಾದ ಹೊಸ ಓಲಾ ಎಲೆಕ್ಟ್ರಿಕ್ ಸ್ಕೂಟರಿನ ವಿನ್ಯಾಸವನ್ನು ಮರೆಮಾಚಲು ಕಲರ್ ಕೋಟಿಂಗ್ ನೀಡಲಾಗಿದ್ದು, ಶೀಘ್ರದಲ್ಲೇ ಹೊಸ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆ ಆರಂಭವಾಗಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ಈಗಾಗಲೇ ಒಂದನೇ ಹಂತದ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವ ಓಲಾ ಎಲೆಕ್ಟ್ರಿಕ್ ಉತ್ಪಾದನಾ ಘಟಕವು ಈ ತಿಂಗಳಾಂತ್ಯಕ್ಕೆ ಉತ್ಪಾದನೆಯನ್ನು ಆರಂಭಿಸಲಿದ್ದು, ವಾಹನ ಉತ್ಪಾದನೆ ಆರಂಭಕ್ಕೂ ಓಲಾ ಕಂಪನಿಯು ಇವಿ ಸ್ಕೂಟರ್ ಅನ್ನು ಅಧಿಕೃತವಾಗಿ ಅನಾವರಣಗೊಳಿಸುವ ಮೂಲಕ ಭಾರತೀಯ ಆಟೋ ಉದ್ಯಮಕ್ಕೆ ಅಧಿಕೃತ ಪ್ರವೇಶವನ್ನು ಘೋಷಣೆ ಮಾಡಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ಇನ್ನು ಹೊಸ ಸ್ಕೂಟರಿನಲ್ಲಿ ಓಲಾ ಕಂಪನಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಹೊಸ ಸ್ಕೂಟರ್‌ನಲ್ಲಿ ಕಂಪನಿಯು ಎರಡು ಮಾದರಿಯಲ್ಲಿ ಬ್ಯಾಟರಿ ಪ್ಯಾಕ್ ನೀಡುವ ಸಾಧ್ಯತೆಗಳಿವೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ಸಿಂಗಲ್ ಬ್ಯಾಟರಿ ಪ್ಯಾಕ್ ಹೊಂದಿರುವ ಓಲಾ ಇವಿ ಮಾದರಿಯು ಪ್ರತಿ ಚಾರ್ಜ್‌ಗೆ 140 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ ಡ್ಯುಯಲ್ ಬ್ಯಾಟರಿ ಬ್ಯಾಕ್ಅಪ್ ಹೊಂದಿರುವ ಮಾದರಿಯಿಂದ ಗರಿಷ್ಠ 240 ಕಿ.ಮೀ ಮೈಲೇಜ್ ಪಡೆಯಬಹುದಾಗಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ಈ ಮೂಲಕ ಓಲಾ ಹೊಸ ಸ್ಕೂಟರ್ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ ಹೆಚ್ಚಿನ ಸಂಖ್ಯೆಯಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ಹೊಸ ವಾಹನ ಉತ್ಪಾದನಾ ಯೋಜನೆಗಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 2,400 ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಸದ್ಯ ಇವಿ ಸ್ಕೂಟರ್ ಮಾತ್ರ ಉತ್ಪಾದನೆ ಮಾಡಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ತ್ರಿ ಚಕ್ರ ವಾಹನಗಳು ಮತ್ತು ಇವಿ ಕಾರುಗಳನ್ನು ಸಹ ಅಭಿವೃದ್ದಿಪಡಿಸಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ವಾಹನ ಉತ್ಪಾದನೆಗಾಗಿ ಓಲಾ ಕಂಪನಿಯು ತಮಿಳುನಾಡಿನ ಹೊಸರಿನಲ್ಲಿ ಬೃಹತ್ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡುತ್ತಿದ್ದು, ಹೊಸ ಉತ್ಪಾದನಾ ಘಟಕವು ಬರೋಬ್ಬರಿ 500 ಎಕರೆ ವ್ಯಾಪ್ತಿಯಲ್ಲಿ ಅಭಿವೃದ್ದಿಗೊಳ್ಳುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಓಲಾ ಇವಿ ಸ್ಕೂಟರ್

ಓಲಾ ಹೊಸ ವಾಹನ ಉತ್ಪಾದನಾ ಘಟಕವು ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉತ್ಪಾದನೆ ಮಾಡಬಹುದಾದ ಸಾಮರ್ಥ್ಯ ಹೊಂದಿದ್ದು, ಹೊಸ ಸ್ಕೂಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1 ಲಕ್ಷದಿಂದ ರೂ. 1.20 ಲಕ್ಷದ ತನಕ ಬೆಲೆ ಹೊಂದಬಹುದಾಗಿದೆ.

More from DriveSpark

Article Published On: Monday, August 2, 2021, 20:40 [IST]
English summary
Ola Electric Scooter Spied Testing. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+