ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಎಸ್1(S1) ಮತ್ತು ಎಸ್1 ಪ್ರೊ(S1 Pro) ಸ್ಕೂಟರ್‌ಗಳ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಕಂಪನಿಯು ಹೊಸ ಇವಿ ಸ್ಕೂಟರ್‌ಗಳನ್ನು ಮುಂಬರುವ ಅಕ್ಟೋಬರ್‌ನಿಂದ ವಿತರಣೆ ಆರಂಭಿಸಲಿದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಓಲಾ ಎಲೆಕ್ಟ್ರಿಕ್(Ola Electric) ಕಂಪನಿಯು ಎಸ್ ಸರಣಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್1(S1) ಮತ್ತು ಎಸ್1 ಪ್ರೊ(S1 Pro) ಮಾದರಿಗಳನ್ನು ಮಾರಾಟ ಮಾಡಲಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್ ಮತ್ತು ಬ್ಯಾಟರಿ ರೇಂಜ್‌ ಪಡೆದುಕೊಂಡಿವೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ವಿಶ್ವಾದ್ಯಂತ ಇವಿ ವಾಹನಗಳ ಮಾರಾಟವು ಸಾಕಷ್ಟು ಬೆಳವಣಿಗೆ ಕಾಣುತ್ತಿದ್ದು, ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಇವಿ ಸ್ಕೂಟರ್‌ಗಳನ್ನು ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ಪರಿಚಯಿಸುವ ಯೋಜನೆ ಹೊಂದಿದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

'ಮೇಕ್ ಇನ್ ಇಂಡಿಯಾ ಫಾರ್ ವರ್ಲ್ಡ್' ಅಭಿಯಾನದಡಿ ಭಾರತದಲ್ಲೇ ಉತ್ಪಾದಿಸಿ ಜಾಗತಿಕ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆಗೆ ಚಾಲನೆ ನೀಡಿರುವ ಓಲಾ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಗಳನ್ನು ಆಫ್ರಿಕಾ, ಯುರೋಪ್ ಮತ್ತು ಅಮೆರಿಕದಲ್ಲೂ ಬಿಡುಗೆಡೆ ಮಾಡುವ ಸಿದ್ದತೆಯಲ್ಲಿದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಅಮೆರಿಕದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಪರಿಚಯಿಸುತ್ತಿರುವ ಕುರಿತು ಓಲಾ ಕಂಪನಿಯ ಸಿಇಒ ಭಾವೀಶ್ ಅಗರ್‌ವಾಲ್ ಮಾಹಿತಿ ಹಂಚಿಕೊಂಡಿದ್ದು,2022ರಿಂದ ಇವಿ ಸ್ಕೂಟರ್ ರಫ್ತು ಮಾಡುವ ಸುಳಿವು ನೀಡಿದ್ದಾರೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಇವಿ ವಾಹನ ಪೂರೈಸುವ ಯೋಜನೆಗೆ ಪೂರಕವಾಗಿ ಹೊಸ ವಾಹನ ಉತ್ಪದನಾ ಘಟಕವನ್ನು ಅಭಿವೃದ್ದಿಗೊಳಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಸದ್ಯಕ್ಕೆ ದ್ವಿಚಕ್ರ ವಾಹನ ಮಾತ್ರ ಉತ್ಪಾದನೆ ಮಾಡಲಿದ್ದು, ಮುಂಬರುವ ಕೆಲ ವರ್ಷಗಳಲ್ಲಿ ಎಲೆಕ್ಟ್ರಿಕ್ ತ್ರಿ ಚಕ್ರ ವಾಹನಗಳನ್ನು ಮತ್ತು ಸಣ್ಣ ಗಾತ್ರ ಬಜೆಟ್ ಇವಿ ಕಾರುಗಳನ್ನು ಉತ್ಪಾದನೆ ಮಾಡುವ ಯೋಜನೆ ಹೊಂದಿದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣಗೊಂಡಿರುವ ಓಲಾ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಈಗಾಗಲೇ ಉತ್ಪಾದನಾ ಪ್ರಕ್ರಿಯೆ ಆರಂಭವಾಗಿದ್ದು, ಹೊಸ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಇವಿ ಸ್ಕೂಟರ್‌ಗಳು ಉತ್ಪಾದನೆಗೊಳ್ಳಲಿವೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಓಲಾ ಹೊಸ ವಾಹನ ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ನಿರ್ಮಾಣ ಮಾಡಿದ್ದು, ಹೊಸ ಘಟಕವು ಏಷ್ಯಾ ಖಂಡದಲ್ಲೇ ಎರಡನೇ ಅತಿ ದೊಡ್ಡ ಅತ್ಯಾಧುನಿಕ ಸೌಲಭ್ಯವುಳ್ಳ ವಾಹನ ಉತ್ಪಾದನಾ ಘಟಕವಾಗಿದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಾಹನಗಳ ಬಿಡಿಭಾಗಗಳನ್ನು ಜೋಡಣೆ ಮಾಡಲು ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲಾಗಿದ್ದು, ಬರೋಬ್ಬರಿ 500 ಎಕರೆ ವ್ಯಾಪ್ತಿ ಹೊಂದಿರುವ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳು ನಿರ್ಮಾಣವಾಗಲಿವೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಇನ್ನು ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಅತ್ಯುತ್ತಮ ಬ್ಯಾಟರಿ ಪ್ಯಾಕ್, ಅಧಿಕ ಮೈಲೇಜ್ ರೇಂಜ್ ಮತ್ತು ಕೈಗೆಟುಕುವ ಬೆಲೆಗಳಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಎಸ್1 ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಎಸ್1 ವೆರಿಯೆಂಟ್‌ನಲ್ಲಿ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, 8.5kW ಎಲೆಕ್ಟ್ರಿಕ್ ಮೋಟಾರ್ ಮೂಲಕ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಈ ಮೂಲಕ ಎಸ್1 ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ನೀಡಲಿದ್ದು, ಹೋಂ ಚಾರ್ಜರ್ ಮೂಲಕ ಪೂರ್ತಿಯಾಗಿ ಚಾರ್ಜ್ ಆಗಲು 7 ಗಂಟೆ ತೆಗೆದುಕೊಳ್ಳುತ್ತದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡಿದರೆ ಕೇವಲ 18 ನಿಮಿಷಗಳಲ್ಲಿ ಶೇ. 50 ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ದೇಶಾದ್ಯಂತ ಪ್ರಮುಖ 400 ನಗರಗಳಲ್ಲಿ 1 ಲಕ್ಷ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಯುಎಸ್ಎ ನಲ್ಲೂ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ Ola EV ಸ್ಕೂಟರ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

More from DriveSpark

Article Published On: Saturday, September 4, 2021, 16:13 [IST]
English summary
Ola electric scooter to be exported to usa soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+