Just In
- 11 min ago ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- 1 hr ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 1 hr ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
- 3 hrs ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇವಿ ಸ್ಕೂಟರ್ ಖರೀದಿ ಪ್ರಕ್ರಿಯೆ ಆರಂಭಿಸಿದ ಮೊದಲ ದಿನವೇ ರೂ.600 ಕೋಟಿ ವಹಿವಾಟು ನಡೆಸಿದ Ola Electric
ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಓಲಾ ಎಲೆಕ್ಟ್ರಿಕ್(Ola Electric) ಕಂಪನಿಯು ತನ್ನ ಹೊಸ ಎಸ್1(S1) ಮತ್ತು ಎಸ್1 ಪ್ರೊ(S1 Pro) ಎಲೆಕ್ಟ್ರಿಕ್ ಸ್ಕೂಟರ್ಗಳ ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಮಾರಾಟ ಪ್ರಕ್ರಿಯೆ ಆರಂಭವಾದ ಮೊದಲ ದಿನವೇ ಸುಮಾರು ರೂ.600 ಕೋಟಿ ವಹಿವಾಟು ನಡೆಸಿದೆ.
ಅಗಸ್ಟ್ 15ರಂದು ಎಸ್1 ಮತ್ತು ಎಸ್1 ಪ್ರೊ ಹೊಸ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಬಿಡುಗಡೆ ಮಾಡಿದ್ದ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಬುಕ್ಕಿಂಗ್ ಆಧಾರದ ಮೇಲೆ ಆಸಕ್ತ ಗ್ರಾಹಕರೊಂದಿಗೆ ಖರೀದಿ ಪ್ರಕ್ರಿಯೆ ಆರಂಭಿಸಿದ್ದು, ಖರೀದಿ ಪ್ರಕ್ರಿಯೆ ಆರಂಭಿಸಿದ ಮೊದಲ ದಿನವೇ ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ಬಂದಿದೆ.
ಸೆಪ್ಟೆಂಬರ್ 8ರಿಂದಲೇ ಆರಂಭವಾಗಬೇಕಿದ್ದ ಖರೀದಿ ಪ್ರಕ್ರಿಯೆಯನ್ನು ಕಾರಣಾಂತರಗಳಿಂದ ಸೆಪ್ಟೆಂಬರ್ 15ರಿಂದ ಆರಂಭಿಸಿರುವ ಓಲಾ ಕಂಪನಿಯು ಸ್ಟಾಕ್ ಮುಕ್ತಾಯದ ತನಕ ಬುಕ್ಕಿಂಗ್ ಸ್ವಿಕರಿಸುತ್ತಿದ್ದು, ಮಾಹಿತಿಗಳ ಪ್ರಕಾರ ಇಂದು ಮಧ್ಯರಾತ್ರಿಯೊಳಗೆ ಖರೀದಿಗೆ ಪ್ರಕ್ರಿಯೆಯು ಸ್ಥಗಿತಗೊಳ್ಳಲಿದೆ.
ಓಲಾ ಸಿಇಓ ಭಾವೀಶ್ ಅಗರವಾಲ್ ನೀಡಿರುವ ಮಾಹಿತಿ ಪ್ರಕಾರ ಖರೀದಿ ಪ್ರಕ್ರಿಯೆ ಆರಂಭಿಸಿದ ನಂತರ ಇದುವರೆಗೆ ಪ್ರತಿ ಸೆಕೆಂಡ್ ನಾಲ್ಕು ಸ್ಕೂಟರ್ಗಳಿಗೆ ಬುಕ್ಕಿಂಗ್ ದಾಖಲಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಖರೀದಿ ಪ್ರಕ್ರಿಯೆಯಿಂದ ಮೊದಲ ದಿನವೇ ಸರಿ ಸುಮಾರು ರೂ.600 ಕೋಟಿ ಮೌಲ್ಯದ ಇವಿ ವಾಹನಗಳಿಗೆ ಬೇಡಿಕೆ ಸಲ್ಲಿಕೆಯಾಗಿದೆ.
ಹೊಸ ಇವಿ ಸ್ಕೂಟರ್ ಖರೀದಿ ಪ್ರಕ್ರಿಯೆಗಾಗಿ ಶೋರೂಂಗಳ ಬದಲಾಗಿ ಆನ್ಲೈನ್ ಪ್ಲ್ಯಾಟ್ಫಾರ್ಮ್ಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸ್ಕೂಟರ್ ಖರೀದಿ ಪ್ರಕ್ರಿಯೆ ಪ್ರಕ್ರಿಯೆ, ವಿತರಣೆ ಮತ್ತು ಮಾರಾಟ ನಂತರದ ಗ್ರಾಹಕರ ಸೇವೆಗಳು ಸಹ ಮನೆ ಬಾಗಿಲಿಗೆ ಒದಗಿಸುವ ಭರವಸೆ ನೀಡಿದೆ.
ಓಲಾ ಹೊಸ ಇವಿ ಸ್ಕೂಟರ್ಗಳ ಖರೀದಿಗಾಗಿ ದೇಶಾದ್ಯಂತ ಪ್ರಮುಖ ನಗರಗಳಿಂದ ಸುಮಾರು 1 ಲಕ್ಷಕ್ಕೂ ಅಧಿಕ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಸ್ಕೂಟರ್ ಖರೀದಿದಾಗಿ ಕಂಪನಿಯು ಪ್ರಮುಖ ಬ್ಯಾಂಕ್ಗಳ ಪಾಲುದಾರಿಕೆಯೊಂದಿಗೆ ಗರಿಷ್ಠ ಸಾಲ ಸೌಲಭ್ಯದೊಂದಿಗೆ ಆಕರ್ಷಕ ಇಎಂಐ ಆಯ್ಕೆಗಳನ್ನು ನೀಡುತ್ತಿದೆ.
ಜೊತೆಗೆ ಓಲಾ ಫೈನಾನ್ಸಿಲ್ ಸರ್ವಿಸ್ ಮೂಲಕವೂ ಗ್ರಾಹಕರು ಹೊಸ ಸ್ಕೂಟರ್ ಖರೀದಿ ಮಾಡಬಹುದಾಗಿದ್ದು, ಹೊಸ ಎಸ್1 ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದೆ.
ಹೊಸ ಸ್ಕೂಟರ್ ಬೆಲೆಯು ಕೆಲವು ರಾಜ್ಯಗಳಲ್ಲಿ ಹೆಚ್ಚುವರಿ ಸಬ್ಸಡಿ ನೀಡುತ್ತಿರುವ ಹಿನ್ನಲೆಯಲ್ಲಿ ಸಬ್ಸಡಿ ಹೊಂದಿರದ ರಾಜ್ಯಗಳಿಂತೂ ತುಸು ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದ್ದು, ಕೇಂದ್ರ ಸರ್ಕಾರವು ಪ್ರತಿ ರಾಜ್ಯಗಳಿಗೂ ಅನ್ವಯವಾಗುವಂತೆ ಫೇಮ್ 2 ಯೋಜನೆ ಅಡಿ ಸಬ್ಸಡಿ ನೀಡುತ್ತಿದೆ.
ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ತೀವ್ರವಾಗಿ ಹೆಚ್ಚಿಸುವ ಉದ್ದೇಶದಿಂದ ದೆಹಲಿ, ಮಹಾರಾಷ್ಟ್ರ, ರಾಜಸ್ತಾನ ಮತ್ತು ಗುಜರಾತ್ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ಇವಿ ವಾಹನ ಖರೀದಿಸುವ ಗ್ರಾಹಕರಿಗೆ ಕೇಂದ್ರದ ಫೇಮ್ 2 ಸಬ್ಸಡಿ ಜೊತೆಗೆ ರಾಜ್ಯ ಸರ್ಕಾರದಿಂದಲೂ ಹೆಚ್ಚುವರಿ ಸಬ್ಸಡಿ ನೀಡುತ್ತಿವೆ.
ಇನ್ನು ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಕುರಿತಾದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಉಪಯಕ್ತ ಮಾಹಿತಿಯುಳ್ಳ Ola Electric App ಅಭಿವೃದ್ದಿಪಡಿಸಿದ್ದು, ಹೊಸ ಆ್ಯಪ್ ಮೂಲಕ ವಾಹನ ಖರೀದಿ, ವಿತರಣೆ, ಗ್ರಾಹಕ ಸೇವೆ, ಇನ್ಸುರೆನ್ಸ್, ಮೌಲ್ಯ ವರ್ಧಿತ ಸೇವೆಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.
ಎಸ್1 ವೆರಿಯೆಂಟ್ನಲ್ಲಿ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್ಗೆ 181 ಕಿ.ಮೀ ಮೈಲೇಜ್ ನೀಡಲಿದೆ.
ಓಲಾ ಇವಿ ಸ್ಕೂಟರ್ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್ಎಲ್ಎಸ್, ಎಲ್ಇಡಿ ಟೈಲ್ಲ್ಯಾಂಪ್, ಕೌಂಟ್ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.
ಹೊಸ ಸ್ಕೂಟರ್ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.
ಜೊತೆಗೆ ಹೊಸ ಸ್ಕೂಟರ್ನಲ್ಲಿ 7-ಇಂಚಿನ ಟಿಎಫ್ಟಿ ಟಚ್ಸ್ಕ್ರೀನ್ ಮತ್ತು ಶಟರ್ಪ್ರೂಫ್ ಸ್ಕ್ರೀನ್ನೊಂದಿಗೆ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್ಗಾಗಿ ಇಸಿಮ್ ಇಂಟರ್ನೆಂಟ್ ಕನೆಕ್ಟಿವಿಟಿ, ಸ್ಮಾಟ್ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.