ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಓಲಾ ಎಲೆಕ್ಟ್ರಿಕ್ ಕಂಪನಿಯು(Ola Electric) ಮುಂದಿನ ತಿಂಗಳು ನವೆಂಬರ್ 10 ಹೊಸ ಎಸ್1 ಮತ್ತು ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್‌ಗಳ ಟೆಸ್ಟ್ ರೈಡ್ ಮತ್ತು ವಿತರಣೆ ಆರಂಭಿಸಲು ಸಿದ್ದವಾಗಿದ್ದು, ಹೊಸ ಸ್ಕೂಟರ್ ವಿತರಣೆಗೂ ಮುನ್ನ ಕಂಪನಿಯು ಹೈಪರ್ ಚಾರ್ಜರ್ ಕೇಂದ್ರಗಳನ್ನು ತೆರೆಯುತ್ತಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಪೂರಕವಾಗಿ ಓಲಾ ಕಂಪನಿಯು ದೇಶಾದ್ಯಂತ ಹಂತ-ಹಂತವಾಗಿ ಪ್ರಮುಖ 400 ನಗರಗಳಲ್ಲಿ 1 ಲಕ್ಷ ಫಾಸ್ಟ್ ಚಾರ್ಜರ್‌ಗಳನ್ನು ಮತ್ತು ಆಯ್ದ ಮೆಟ್ರೊ ನಗರಗಳಲ್ಲಿ ಹೈಪರ್ ಚಾರ್ಜಿಂಗ್ ಪಾರ್ಕ್‌ಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಎಲೆಕ್ಟ್ರಿಕ್ ವಾಹನಗಳಿಗೆ ಹೋಂ ಚಾರ್ಜರ್ ಸೌಲಭ್ಯ ಹೊರತುಪಡಿಸಿ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗುತ್ತಿದ್ದು, ಹೈಪರ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಪ್ರತಿ ಗಂಟೆಗೆ ಹತ್ತಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಒಂದೇ ಅವಧಿಯಲ್ಲೇ ಚಾರ್ಜ್ ಮಾಡಬಹುದಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಹೈಪರ್‌ ಚಾರ್ಜರ್‌ಗಳ ಕೇವಲ 18 ನಿಮಿಷಗಳಲ್ಲಿ ಸೊನ್ನೆಯಿಂದ ರಿಂದ ಶೇ. 50 ಪ್ರತಿಶತದಷ್ಟು ಇ-ಸ್ಕೂಟರ್ ಬ್ಯಾಟರಿಗಳನ್ನು ಚಾರ್ಜ್ ಮಾಡಬಹುದ್ದು, ಇದು ಕನಿಷ್ಠ 75 ಕಿಮೀ ವರೆಗೆ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಕಂಪನಿಯು ಸದ್ಯ ಬೆಂಗಳೂರಿನ ಆಯ್ದ ಐಟಿ ಪಾರ್ಕ್‌ಗಳಲ್ಲಿ ಹೈಪರ್‌ ಚಾರ್ಜಿಂಗ್ ಪಾಯಿಂಟ್‌ಗಳಿಗೆ ಚಾಲನೆ ನೀಡಿದ್ದು, ಶೀಘ್ರದಲ್ಲೇ ಯಾವೆಲ್ಲಾ ನಗರಗಳಲ್ಲಿ ಹೊಸ ಚಾರ್ಜಿಂಗ್ ಲಭ್ಯವಿರಲಿದೆ ಎಂಬುವುದನ್ನು ಕಂಪನಿಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದಾಗಿ ಕಂಪನಿಯ ಸಿಇಓ ಭಾವೀಶ್ ಅಗರ್‌ವಾಲ್ ಮಾಹಿತಿ ನೀಡಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಇನ್ನು ನವೆಂಬರ್ 10ರಿಂದ ಬುಕ್ಕಿಂಗ್ ದಾಖಲಿಸಿರುವ ಗ್ರಾಹಕರಿಗೆ ಟೆಸ್ಟ್ ರೈಡ್ ಆರಂಭಿಸಲಿದ್ದು, ಟೆಸ್ಟ್ ರೈಡ್ ನಂತರ ಖರೀದಿ ಪ್ರಕ್ರಿಯೆಯನ್ನು ಮುಂದುವರಿಸುವ ಬಗೆಗೆ ಖಚಿತಗೊಳಿಸಬೇಕಾಗುತ್ತದೆ. ಟೆಸ್ಟ್ ರೈಡ್ ನಂತರ ವಿತರಣೆಯ ಮಾಹಿತಿಯನ್ನು ಖಚಿತಪಡಿಸಲಿದ್ದು, ನವೆಂಬರ್ 10ರಿಂದ ಟೆಸ್ಟ್ ರೈಡ್ ಪಡೆದುಕೊಳ್ಳಲಿರುವ ಗ್ರಾಹಕರಿಗೆ ಡಿಸೆಂಬರ್ 1ರಿಂದ 31ರ ಒಳಗೆ ಹೊಸ ಸ್ಕೂಟರ್ ವಿತರಣೆಯಾಗುವುದು ಖಚಿತವಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಮತ್ತೊಂದು ಗಮನಿಸಬೇಕಾದ ಅಂಶವೆಂದರೆ ಬುಕ್ಕಿಂಗ್ ದಾಖಲಿಸಿರುವ ಗ್ರಾಹಕರು ಟೆಸ್ಟ್ ರೈಡ್ ವೇಳೆ ಇಷ್ಟವಾದರೆ ಮಾತ್ರ ಮಾರಾಟ ಪ್ರಕ್ರಿಯೆಯನ್ನು ಮುಂದುವರಿಸಬಹುದಾಗಿದ್ದು, ಇಷ್ಟವಾಗದೆ ಹೋದಲ್ಲಿ ನೀವು ಮುಂಗಡವಾಗಿ ಪಾವತಿ ಮಾಡಿರುವ ಒಟ್ಟು ಮೊತ್ತವನ್ನು ಹಿಂಪಡೆಯಬಹುದಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಓಲಾ ಕಂಪನಿಯು ಹೊಸ ಇವಿ ಸ್ಕೂಟರ್ ಖರೀದಿ ಪ್ರಕ್ರಿಯೆಗಾಗಿ ಶೋರೂಂಗಳ ಬದಲಾಗಿ ಸಂಪೂರ್ಣವಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಸ್ಕೂಟರ್ ಖರೀದಿ ಪ್ರಕ್ರಿಯೆ ಪ್ರಕ್ರಿಯೆ, ವಿತರಣೆ ಮತ್ತು ಮಾರಾಟ ನಂತರದ ಗ್ರಾಹಕರ ಸೇವೆಗಳು ಸಹ ಮನೆ ಬಾಗಿಲಿಗೆ ಒದಗಿಸುವ ಭರವಸೆ ನೀಡಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಓಲಾ ಹೊಸ ಇವಿ ಸ್ಕೂಟರ್‌ಗಳ ಖರೀದಿಗಾಗಿ ದೇಶಾದ್ಯಂತ ಪ್ರಮುಖ ನಗರಗಳಿಂದ ಸುಮಾರು 1.50 ಲಕ್ಷಕ್ಕೂ ಅಧಿಕ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಸ್ಕೂಟರ್ ಖರೀದಿದಾಗಿ ಕಂಪನಿಯು ಪ್ರಮುಖ ಬ್ಯಾಂಕ್‌ಗಳ ಪಾಲುದಾರಿಕೆಯೊಂದಿಗೆ ಗರಿಷ್ಠ ಸಾಲ ಸೌಲಭ್ಯದೊಂದಿಗೆ ಆಕರ್ಷಕ ಇಎಂಐ ಆಯ್ಕೆಗಳನ್ನು ನೀಡಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಜೊತೆಗೆ ಓಲಾ ಫೈನಾನ್ಸಿಲ್ ಸರ್ವಿಸ್ ಮೂಲಕವೂ ಗ್ರಾಹಕರು ಹೊಸ ಸ್ಕೂಟರ್ ಖರೀದಿ ಮಾಡಬಹುದಾಗಿದ್ದು, ಹೊಸ ಎಸ್1 ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಎಸ್1 ವೆರಿಯೆಂಟ್‌‌ನಲ್ಲಿ 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೂ ಮುನ್ನ ಹೈಪರ್ ಚಾರ್ಜರ್‌ಗಳಿಗೆ ಚಾಲನೆ ನೀಡಿದ Ola Electric

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

Most Read Articles

Kannada
English summary
Ola introduced first electric hypercharger in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X