ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್(Ola Electric) ಕಂಪನಿಯು ತನ್ನ ಬಹುನೀರಿಕ್ಷಿತ ಎಸ್1 ಮತ್ತು ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿ ವಿತರಣೆ ಸಿದ್ದವಾಗಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳ ಉತ್ಪಾದನಾ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣಗೊಂಡಿರುವ ಓಲಾ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದಲ್ಲಿ ಅಧಿಕೃತ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಸ್ಕೂಟರ್ ಉತ್ಪಾದನೆ ಮಾಡುವ ಗುರಿಹೊಂದಲಾಗಿದೆ. ಹೊಸ ವಾಹನ ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ಅಭಿವೃದ್ದಿಗೊಂಡಿದ್ದು, ಹೊಸ ಘಟಕವು ದೇಶದ ಅತ್ಯಾಧುನಿಕ ವಾಹನ ಉತ್ಪಾದನಾ ಘಟಕಗಳಲ್ಲಿ ಒಂದಾಗಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಹೊಸ ವಾಹನ ಉತ್ಪಾದನಾ ಘಟಕವು ಬರೋಬ್ಬರಿ 500 ಎಕರೆ ವ್ಯಾಪ್ತಿ ಹೊಂದಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳು ಉತ್ಪಾದನೆಯಾಗಲಿವೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

'ಮೇಕ್ ಇನ್ ಇಂಡಿಯಾ ಫಾರ್ ವರ್ಲ್ಡ್' ಅಭಿಯಾನದಡಿ ಭಾರತದಲ್ಲೇ ಉತ್ಪಾದಿಸಿ ಜಾಗತಿಕ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆಗೆ ಚಾಲನೆ ನೀಡಿರುವ ಓಲಾ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯನ್ನು ಭಾರತದಲ್ಲಿ ಮಾತ್ರವಲ್ಲ ಲ್ಯಾಟಿನ್ ಅಮೆರಿಕ, ಆಫ್ರಿಕಾ ರಾಷ್ಟ್ರಗಳಲ್ಲೂ ಮಾರಾಟ ಮಾಡಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಮತ್ತೊಂದು ವಿಶೇಷವೆಂದರೆ ಹೊಸ ಉತ್ಪಾದನಾ ಘಟಕದ ಉತ್ಪಾದನಾ ವಿಭಾಗದಲ್ಲಿ ಓಲಾ ಕಂಪನಿಯು ಮಹಿಳೆಯರಿಗೆ ಹೆಚ್ಚಿನ ಮಟ್ಟದ ಉದ್ಯೋಗ ಅವಕಾಶಗಳನ್ನು ಕಲ್ಪಿಸಿದ್ದು, ಸುಮಾರು 10 ಸಾವಿರ ಮಹಿಳಾ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಮಹಿಳಾ ಉದ್ಯೋಗಿಗಳು ಈಗಾಗಲೇ ಕಾರ್ಯನಿರ್ವಹಣೆ ಆರಂಭಿಸಿದ್ದು, ಕಂಪನಿಯ ಸಿಇಓ ಭಾವೀಶ್ ಅಗರ್‌ವಾಲ್ ಅವರು ಹೊಸ ವಾಹನ ಉತ್ಪಾದನಾ ಘಟಕದ ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಾಹನಗಳ ಅಸೆಂಬಲ್ ಪ್ರಕ್ರಿಯೆಯಲ್ಲಿ ಸುಮಾರು 5 ಸಾವಿರ ರೋಬೋಟ್‌ಗಳನ್ನು ಸಹ ಹೊಸ ಘಟಕದಲ್ಲಿ ನಿಯೋಜಿಸಲಾಗಿದ್ದು, ಓಲಾ ಕಂಪನಿಯು ಹೊಸ ಘಟಕದ ಮೇಲೆ ಆರಂಭಿಕವಾಗಿ ರೂ. 2,400 ಕೋಟಿ ಬಂಡವಾಳ ಹೂಡಿಕೆ ಮಾಡಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಇನ್ನು ಓಲಾ ಎಲೆಕ್ಟ್ರಿಕ್ ಕಂಪನಿಯು ಮುಂದಿನ ತಿಂಗಳು ನವೆಂಬರ್ 10ರಿಂದ ಹೊಸ ಎಸ್1 ಮತ್ತು ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್‌ಗಳ ಟೆಸ್ಟ್ ರೈಡ್ ಮತ್ತು ವಿತರಣೆ ಆರಂಭಿಸಲು ಸಿದ್ದವಾಗಿದ್ದು, ನವೆಂಬರ್ 10ರಿಂದ ಟೆಸ್ಟ್ ರೈಡ್ ಪಡೆದುಕೊಳ್ಳಲಿರುವ ಗ್ರಾಹಕರಿಗೆ ಡಿಸೆಂಬರ್ 1ರಿಂದ 31ರ ಒಳಗೆ ಹೊಸ ಸ್ಕೂಟರ್ ವಿತರಣೆಯಾಗುವುದು ಖಚಿತವಾಗಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಓಲಾ ಹೊಸ ಎಸ್1 ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಹೊಸ ಸ್ಕೂಟರ್‌ಗಳು ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಮೈಲೇಜ್ ಪ್ರೇರಣೆ ಪಡೆದುಕೊಂಡಿವೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಎಸ್1 ವೆರಿಯೆಂಟ್‌‌ನಲ್ಲಿ 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

Most Read Articles

Kannada
English summary
Ola most advanced electric scooter future factory production video
Story first published: Thursday, October 28, 2021, 0:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X