ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್ ಕಂಪನಿಯು ಹೊಸ ಸ್ಕೂಟರ್ ವಿತರಣೆಯನ್ನು ದೇಶಾದ್ಯಂತ ಅಧಿಕೃತ ಚಾಲನೆ ನೀಡಿದ್ದು, ಕಂಪನಿಯು ಎಸ್1 ಮತ್ತು ಎಸ್1 ಪ್ರೊ ಖರೀದಿ ಮಾಡಿದ ಮೊದಲ ನೂರು ಗ್ರಾಹಕರಿಗೆ ವಿಶೇಷ ಕಾರ್ಯಕ್ರಮದಲ್ಲಿ ಸ್ಕೂಟರ್ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿತು.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಬೆಂಗಳೂರಿನಲ್ಲಿರುವ ಓಲಾ ಎಲೆಕ್ಟ್ರಿಕ್ ಕೇಂದ್ರ ಕಚೇರಿಯಲ್ಲಿ ಮತ್ತು ಚೆನ್ನೈನಲ್ಲಿರುವ ಓಲಾ ಪ್ರಾದೇಶಿಕ ಕಚೇರಿಯಲ್ಲಿ ಮೊದಲ ನೂರು ಗ್ರಾಹಕರಿಗೆ ಹೊಸ ಇವಿ ಸ್ಕೂಟರ್‌ಗಳನ್ನು ವಿಶೇಷ ಕಾರ್ಯಕ್ರಮದೊಂದಿಗೆ ವಿತರಣೆ ಮಾಡಿದ್ದು, ಮುಂದಿನ ಎರಡು ತಿಂಗಳ ಅವಧಿಯಲ್ಲಿ ಕಂಪನಿಯು ಮೊದಲ ಹಂತದಲ್ಲಿ ದಾಖಲಾಗಿರುವ 1 ಲಕ್ಷ ಬುಕ್ಕಿಂಗ್‌ಗಳನ್ನು ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಓಲಾ ಕಂಪನಿಯು ಅಧಿಕೃತ ಚಾಲನೆ ನೀಡುವ ಉದ್ದೇಶದಿಂದ ಮೊದಲ ನೂರು ಗ್ರಾಹಕರಿಗೆ ಮಾತ್ರವೇ ತನ್ನ ಕೇಂದ್ರ ಕಚೇರಿ ಆವರಣದಲ್ಲಿ ಸ್ಕೂಟರ್ ವಿತರಣೆ ಮಾಡಿದ್ದು, ಇನ್ನುಳಿದ ಗ್ರಾಹಕರಿಗೆ ಬುಕ್ಕಿಂಗ್ ಪ್ರಮಾಣವನ್ನು ಆಧರಿಸಿ ಮನೆ ಬಾಗಿಲಿಗೆ ತಲುಪಿಸಲಿದೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳಿಗೆ ಆದ್ಯತೆ ನೀಡಿರುವುದರಿಂದ ಗ್ರಾಹಕರ ಸೇವೆಗಳನ್ನು ಮನೆ ಬಾಲಿಗೆಗೆ ತಲುಪಿಸುವುದಾಗಿ ಓಲಾ ಕಂಪನಿಯು ತನ್ನ ಗ್ರಾಹಕರಿಗೆ ಭರವಸೆ ನೀಡಿದ್ದು, ಹೊಸ ಸ್ಕೂಟರ್ ಪಡೆದುಕೊಂಡಿರುವ ಖುಷಿಯಲ್ಲಿರುವ ಗ್ರಾಹಕರು ಈಗಾಗಲೇ ಹೊಸ ಉತ್ಪನ್ನಗಳ ಬಗೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಓಲಾ ಹೊಸ ಎಸ್1 ಇವಿ ಸ್ಕೂಟರ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿವೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಕುರಿತಾದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಉಪಯಕ್ತ ಮಾಹಿತಿಯುಳ್ಳ Ola Electric App ಕೂಡಾ ಅಭಿವೃದ್ದಿಪಡಿಸಿದ್ದು, ಹೊಸ ಆ್ಯಪ್ ಮೂಲಕ ವಾಹನ ಖರೀದಿ, ವಿತರಣೆ, ಗ್ರಾಹಕ ಸೇವೆ, ಇನ್ಸುರೆನ್ಸ್, ಮೌಲ್ಯ ವರ್ಧಿತ ಸೇವೆಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಓಲಾ ಸ್ಕೂಟರ್‌ಗಳ ತಾಂತ್ರಿಕ ಸೌಲಭ್ಯಗಳ ಬಗೆಗೆ ಹೇಳುವುದಾದರೆ ಆರಂಭಿಕ ಮಾದರಿಯಾದ ಎಸ್1 ವೆರಿಯೆಂಟ್‌‌ನಲ್ಲಿ 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಇದರೊಂದಿಗೆ ಕಂಪನಿಯು ಡಿಸೆಂಬರ್ 16ರಿಂದಲೇ ಎರಡನೇ ಹಂತದ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಆರಂಭಗೊಳ್ಳುವುದಾಗಿ ಓಲಾ ಕಂಪನಿಯು ಮಾಹಿತಿ ನೀಡಿದ್ದು, ಎರಡನೇ ಹಂತದಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಮುಂದಿನ ಎಪ್ರಿಲ್‌ನಿಂದ ಸ್ಕೂಟರ್ ವಿತರಣೆಯಾಗಬಹುದಾಗಿದೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಸದ್ಯಕ್ಕೆ ಆಯ್ದ ನಗರಗಳಲ್ಲಿ ಮಾತ್ರ ಟೆಸ್ಟ್ ರೈಡ್ ನಡೆಸುತ್ತಿರುವ ಓಲಾ ಕಂಪನಿಯು ಡಿಸೆಂಬರ್ 16ರಿಂದ ದೇಶದ ಪ್ರಮುಖ ಒಂದು ಸಾವಿರ ನಗರಗಳಲ್ಲಿ ಹೊಸ ಎಸ್1 ಸ್ಕೂಟರ್ ಟೆಸ್ಟ್ ರೈಡ್ ಆರಂಭಗೊಳಿಸುತ್ತಿದ್ದು, ಚಾರ್ಜಿಂಗ್ ನಿಲ್ದಾಣ ಲಭ್ಯತೆ ಆಧರಿಸಿ ವಿವಿಧ ನಗರಗಳಲ್ಲಿ ಸ್ಕೂಟರ್ ವಿತರಣೆಗೆ ಆದ್ಯತೆ ನೀಡಲಿದೆ.

ವಿಶೇಷ ಕಾರ್ಯಕ್ರಮದೊಂದಿಗೆ ಮೊದಲ 100 ಗ್ರಾಹಕರಿಗೆ ಇವಿ ಸ್ಕೂಟರ್ ವಿತರಿಸಿದ ಓಲಾ ಎಲೆಕ್ಟ್ರಿಕ್

ಹೊಸ ಸ್ಕೂಟರ್‌ಗಳ ಖರೀದಿದಾಗಿ ಓಲಾ ಕಂಪನಿಯು ಪ್ರಮುಖ ಬ್ಯಾಂಕ್‌ಗಳ ಪಾಲುದಾರಿಕೆಯೊಂದಿಗೆ ಗರಿಷ್ಠ ಸಾಲ ಸೌಲಭ್ಯದೊಂದಿಗೆ ಆಕರ್ಷಕ ಇಎಂಐ ಆಯ್ಕೆಗಳನ್ನು ನೀಡಿದ್ದು, ಓಲಾ ಫೈನಾನ್ಸಿಲ್ ಸರ್ವಿಸ್ ಮೂಲಕವೂ ಗ್ರಾಹಕರು ಹೊಸ ಸ್ಕೂಟರ್ ಖರೀದಿ ಮಾಡಬಹುದಾಗಿದೆ.

More from DriveSpark

Article Published On: Thursday, December 16, 2021, 17:00 [IST]
English summary
Ola organises special delivery event for s1 s1 pro customers details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+