ಅತ್ಯಧಿಕ ಮೈಲೇಜ್ ಪ್ರೇರಿತ ಓಲಾ ಎಸ್1 ಪ್ರೊ ಫಸ್ಟ್ ರೈಡ್ ರಿವ್ಯೂ ವಿಡಿಯೋ

ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಅತಿ ಕಡಿಮೆ ಬೆಲೆಯೊಂದಿಗೆ ಅತ್ಯುತ್ತಮ ಮೈಲೇಜ್ ಪ್ರೇರಣೆ ಪಡೆದುಕೊಂಡಿದೆ. ಹೊಸ ಎಸ್1 ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಎರಡು ಇವಿ ಮಾದರಿಗಳಲ್ಲೂ ಕಂಪನಿಯು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಆಕರ್ಷಕ ಮೈಲೇಜ್ ರೇಂಜ್ ನೀಡಿದೆ.

ಓಲಾ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಎರಡು ವೆರಿಯೆಂಟ್ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಎಸ್1 ಮತ್ತು ಎಸ್1 ಪ್ರೋ ವೆರಿಯೆಂಟ್‌ಗಳನ್ನು ಖರೀದಿ ಮಾಡಬಹುದಾಗಿದೆ. ಇತ್ತೀಚೆಗೆ ನಾವು 3.97kWh ಲೀಥಿಯಂ ಅಯಾನ್ ಬ್ಯಾಟರಿ ಮತ್ತು 8.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಹೊಂದಿರುವ ಟಾಪ್ ಎಂಡ್ ಮಾದರಿಯಾದ ಎಸ್1 ಪ್ರೋ ವೆರಿಯೆಂಟ್‌ ಚಾಲನೆ ಮಾಡಿದೆವು.

ಓಲಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಎಸ್ ಸರಣಿಯಲ್ಲಿ ಎಸ್1 ಮತ್ತು ಎಸ್1 ಪ್ರೊ ಆವೃತ್ತಿಗಳನ್ನು ಪರಿಚಯಿಸಿದ್ದು, ಎರಡು ಮಾದರಿಗಳು ನೋಡುವುದಕ್ಕೆ ಒಂದೇ ರೀತಿಯಾಗಿದ್ದರೂ ತಾಂತ್ರಿಕವಾಗಿ ಎರಡು ಮಾದರಿಗಳಲ್ಲೂ ಹಲವಾರು ತಾಂತ್ರಿಕ ಸೌಲಭ್ಯಗಳ ಜೋಡಣೆಯಲ್ಲಿ ವ್ಯತ್ಯಾಸ ಹೊಂದಿವೆ.

ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಅತ್ಯುತ್ತಮ ಬ್ಯಾಟರಿ ಪ್ಯಾಕ್, ಅಧಿಕ ಮೈಲೇಜ್ ರೇಂಜ್ ಮತ್ತು ಕೈಗೆಟುಕುವ ಬೆಲೆಗಳಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಸ್ಕೂಟರ್‌ಗಳ ಬೆಲೆಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮವಾಗಿದೆ.

ಎಸ್1 ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ನೀಡಲಿದ್ದು, ಹೊಸ ಸ್ಕೂಟರ್ ಚಾರ್ಜಿಂಗ್ ಸಮಯವು ಹೋಂ ಚಾರ್ಜರ್ ಮೂಲಕ ಪೂರ್ತಿಯಾಗಿ ಚಾರ್ಜ್ ಆಗಲು 6.50 ಗಂಟೆ ತೆಗೆದುಕೊಂಡಲ್ಲಿ ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 18 ನಿಮಿಷಗಳಲ್ಲಿ 75 ಕಿ.ಮೀ ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದು.

Most Read Articles

Kannada
English summary
Ola s1 pro electric scooter kannada review video
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X