ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಅತಿ ಕಡಿಮೆ ಬೆಲೆಯೊಂದಿಗೆ ಅತ್ಯುತ್ತಮ ಮೈಲೇಜ್ ಪ್ರೇರಣೆ ಪಡೆದುಕೊಂಡಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ದೇಶಾದ್ಯಂತ ಹೆಚ್ಚುತ್ತಿರುವ ದುಬಾರಿ ಇಂಧನದಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಓಲಾ ಎಲೆಕ್ಟ್ರಿಕ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಅತ್ಯುತ್ತಮ ಬ್ಯಾಟರಿ ಪ್ಯಾಕ್, ಅಧಿಕ ಮೈಲೇಜ್ ರೇಂಜ್ ಮತ್ತು ಕೈಗೆಟುಕುವ ಬೆಲೆಗಳಲ್ಲಿ ಬಿಡುಗಡೆಗೊಳಿಸಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಓಲಾ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಎರಡು ವೆರಿಯೆಂಟ್ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಎಸ್1 ಮತ್ತು ಎಸ್1 ಪ್ರೋ ವೆರಿಯೆಂಟ್‌ಗಳನ್ನು ಖರೀದಿ ಮಾಡಬಹುದಾಗಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಎಸ್1 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ದೆಹಲಿ, ಮಹಾರಾಷ್ಟ್ರ, ರಾಜಸ್ತಾನ ಮತ್ತು ಗುಜರಾತ್ ರಾಜ್ಯಗಳಲ್ಲಿ ಹೊಸ ಸ್ಕೂಟರ್‌ಗಳ ಬೆಲೆ ತುಸು ಕಡಿಮೆಯಾಗಲಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ದೆಹಲಿ, ಮುಂಬೈ, ರಾಜಸ್ತಾನ ಮತ್ತು ಗುಜರಾತ್ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯ ಸಬ್ಸಡಿ ಜೊತೆ ರಾಜ್ಯ ಸರ್ಕಾರದಿಂದ ಇವಿ ವಾಹನಗಳಿಗೆ ಹೆಚ್ಚುವರಿ ಸಬ್ಸಡಿ ನೀಡುತ್ತಿದ್ದು, ಇದರಿಂದ ಓಲಾ ಸ್ಕೂಟರ್‌ಗಳ ಬೆಲೆ ಈ ನಾಲ್ಕು ರಾಜ್ಯಗಳಲ್ಲಿ ಇತರೆ ರಾಜ್ಯಗಳಿಗಳಿಂತ ರೂ.10 ಸಾವಿರರಿಂದ ರೂ. 30 ಸಾವಿರದಷ್ಟು ಕಡಿಮೆಯಾಗಲಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ದೆಹಲಿಯಲ್ಲಿ ಎಸ್1 ಬೆಲೆ ರೂ. 85,0099 ಮತ್ತು ಎಸ್1 ಪ್ರೋ ಬೆಲೆ ರೂ. 1,10,149 ಇದ್ದಲ್ಲಿ ಗುಜರಾತ್‌ನಲ್ಲಿ ಎಸ್1 ಬೆಲೆ ರೂ. 79,999 ಮತ್ತು ಎಸ್1 ಪ್ರೋ ಬೆಲೆ ರೂ. 1,09,99 ಬೆಲೆ ಹೊಂದಿದೆ. ಹಾಗೆಯೇ ಮಹಾರಾಷ್ಟ್ರದಲ್ಲಿ ಎಸ್1 ಬೆಲೆ ರೂ. 94,999 ಮತ್ತು ಎಸ್1 ಪ್ರೋ ಬೆಲೆ ರೂ. 1,24,999 ಬೆಲೆ ಹೊಂದಿದ್ದು, ರಾಜಸ್ತಾನದಲ್ಲಿ ಎಸ್1 ಬೆಲೆ ರೂ. 89,968 ಮತ್ತು ಎಸ್1 ಪ್ರೋ ಬೆಲೆ ರೂ. 1,19,138 ಬೆಲೆ ಹೊಂದಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗಾಗಿ ಈಗಾಗಲೇ ರೂ.499 ಮುಂಗಡದೊಂದಿಗೆ ಅಧಿಕೃತ ಬುಕ್ಕಿಂಗ್ ಆರಂಭಿಸಿರುವ ಓಲಾ ಎಲೆಕ್ಟಿಕ್ ಕಂಪನಿಯು ಸುಮಾರು 1.50 ಲಕ್ಷಕ್ಕೂ ಹೆಚ್ಚು ಗ್ರಾಹಕರಿಂದ ಬುಕ್ಕಿಂಗ್ ಸ್ವಿಕರಿಸಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಬುಕ್ಕಿಂಗ್ ಆಧಾರದ ಮೇಲೆ ಹೊಸ ಸ್ಕೂಟರ್ ವಿತರಣೆ ಆರಂಭವಾಗಲಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಬ್ಯಾಟರಿ ರೇಂಜ್ ಮತ್ತು ಪರ್ಫಾಮೆನ್ಸ್

ಎಸ್ 1 ವೆರಿಯೆಂಟ್

ಆರಂಭಿಕ ಮಾದರಿಯಾಗಿರುವ ಎಸ್1 ವೆರಿಯೆಂಟ್‌ನಲ್ಲಿ ಓಲಾ ಕಂಪನಿಯು 2.98kWh ಲೀಥಿಯಂ ಅಯಾನ್ ಬ್ಯಾಟರಿ ಮತ್ತು 8.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಇದು ಪ್ರತಿ ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ಎನ್ನುವ ಎರಡು ರೈಡಿಂಗ್ ಮೋಡ್ ನೀಡಲಾಗಿದ್ದು, 3.6 ಸೆಕೆಂಡುಗಳಲ್ಲಿ ಸೊನ್ನೆಯಿಂದ 40 ಕಿ.ಮೀ ಸ್ಪೀಡ್‌ ಪಡೆದುಕೊಳ್ಳಬಹುದು.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಎಸ್1 ಪ್ರೋ ವೆರಿಯೆಂಟ್

ಟಾಪ್ ಎಂಡ್ ಮಾದರಿಯಾದ ಎಸ್1 ಪ್ರೋ ವೆರಿಯೆಂಟ್‌ನಲ್ಲಿ ಓಲಾ ಕಂಪನಿಯು 3.97kWh ಲೀಥಿಯಂ ಅಯಾನ್ ಬ್ಯಾಟರಿ ಮತ್ತು 8.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಇದು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ನೀಡುತ್ತದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಎಸ್1 ಪ್ರೋ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ಎನ್ನುವ ಮೂರು ರೈಡ್ ಮೋಡ್‌ಗಳಿದ್ದು, ಕೇವಲ 3 ಸೆಕೆಂಡುಗಳಲ್ಲಿ ಸೊನ್ನೆಯಿಂದ 40 ಕಿ.ಮೀ ಸ್ಪೀಡ್ ಪಡೆದುಕೊಳ್ಳಬಹುದು.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಎರಡು ಮಾದರಿಗಳಲ್ಲೂ ಓಲಾ ಕಂಪನಿಯು 750 ವೊಲ್ಟ್ ಆನ್ ಬೋರ್ಡ್ ಚಾರ್ಜರ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಪೂರ್ತಿಯಾಗಿ ಚಾರ್ಜ್ ಮಾಡಲು 7 ಗಂಟೆ ಕಾಲಾವಕಾಶ ತೆಗೆದುಕೊಳ್ಳುತ್ತದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಒಂದು ವೇಳೆ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡಿದರೆ ಕೇವಲ 18 ನಿಮಿಷಗಳಲ್ಲಿ ಶೇ. 50 ಬ್ಯಾಟರಿ ಚಾರ್ಜ್ ಮೂಲಕ ಸುಮಾರು 75 ಕಿ.ಮೀ ಪ್ರಯಾಣಿಸಬಹುದೆಂದು ಮಾಹಿತಿ ನೀಡಿದ್ದು, ಓಲಾ ಕಂಪನಿಯೇ ದೇಶಾದ್ಯಂತ 400 ನಗರಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಾಗಿರುವ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯದ ಮೇಲೆ ವಿಶೇಷ ಆಸಕ್ತಿ ವಹಿಸಿರುವ ಓಲಾ ಕಂಪನಿಯು ದೇಶದ ಪ್ರಮುಖ 400 ನಗರಗಳಲ್ಲಿ 1 ಲಕ್ಷ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದ್ದು, ದೇಶದ ಪ್ರಮುಖ ಮಹಾನಗರಗಳಲ್ಲಿ ಹೈಪರ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇನ್ನು ಓಲಾ ಇವಿ ಸ್ಕೂಟರ್‌ಗಳ ಡಿಸೈನ್ ಮತ್ತು ಫೀಚರ್ಸ್ ಬಗೆಗೆ ಹೇಳುವುದಾದರೆ ಅತ್ಯುತ್ತಮ ಡಿಸೈನ್‌ನೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಈ ಮೂಲಕ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೊಸ ಕ್ರಾಂತಿ ಆರಂಭಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಈ ವರ್ಷಾಂತ್ಯದೊಳಗೆ 1 ಸಾವಿರ ಪ್ರಮುಖ ನಗರಗಳಲ್ಲಿ ಹೊಸ ಸ್ಕೂಟರ್ ಮಾರಾಟ ಮಾಡುವ ಯೋಜನೆ ಹೊಂದಿದ್ದು, ಭಾರತದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಿಗೂ ರಫ್ತು ಗುರಿ ಹೊಂದಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಓಲಾ ಕಂಪನಿಯು ಹೊಸ ವಾಹನ ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣ ಮಾಡಿದ್ದು, ಹೊಸ ಘಟಕವು ದೇಶದ ಅತ್ಯಾಧುನಿಕ ವಾಹನ ಉತ್ಪಾದನಾ ಘಟಕಗಳಲ್ಲಿ ಒಂದಾಗಿದೆ.

ಆಕರ್ಷಕ ಬೆಲೆಯಲ್ಲಿ ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಪ್ರೇರಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಾಹನಗಳನ್ನು ಅಸೆಂಬಲ್ ಮಾಡಲು ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲಾಗಿದ್ದು, ಬರೋಬ್ಬರಿ 500 ಎಕರೆ ವ್ಯಾಪ್ತಿ ಹೊಂದಿರುವ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆ ಮಾಡಲು ಯೋಜಿಸಲಾಗಿದೆ.

Most Read Articles

Kannada
English summary
Ola s1 electric scooter launched in india details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X