ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ..

ಓಲಾ ಎಲೆಕ್ಟ್ರಿಕ್(Ola Electric) ಕಂಪನಿಯು ಎಸ್1(S1) ಮತ್ತು ಎಸ್1 ಪ್ರೊ(S1 Pro) ಎಲೆಕ್ಟ್ರಿಕ್ ಸ್ಕೂಟರ್‌ಗಳ ಟೆಸ್ಟ್ ರೈಡ್‌ಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಮೊದಲ ದಿನವೇ ಸಾವಿರಕ್ಕೂ ಅಧಿಕ ಗ್ರಾಹಕರು ಟೆಸ್ಟ್ ರೈಡ್ ಪಡೆದುಕೊಂಡಿದ್ದಾರೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಟೆಸ್ಟ್ ರೈಡ್ ಅನ್ನು ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಮಾತ್ರ ಆರಂಭಿಸಲಾಗಿದ್ದು, ಬುಕ್ಕಿಂಗ್ ಮಾಡಲಾದ ಗ್ರಾಹಕರಿಗೆ ನಿಗದಿತ ಅವಧಿಗಾಗಿ ಟೆಸ್ಟ್ ರೈಡಿಂಗ್‌ಗೆ ನೀಡಲಾಗುತ್ತಿದೆ. ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭಕ್ಕೂ ಮುನ್ನ ಸ್ಕೂಟರ್ ಫೀಚರ್ಸ್ ಮತ್ತು ರೈಡಿಂಗ್ ಶೈಲಿಯ ಕುರಿತಾಗಿ ಕಂಪನಿಯ ನುರಿತ ತಾಂತ್ರಿಕ ಪರಿಣಿತರು ಮಾಹಿತಿ ನೀಡಲಿದ್ದು, ಟೆಸ್ಟ್ ರೈಡ್ ನಂತರ ಸ್ಕೂಟರ್‌ನಲ್ಲಿ ಇಷ್ಟವಾದ ಗುಣಗಳು ಯಾವವು? ಮತ್ತು ಉತ್ತಮ ಸ್ಕೂಟರ್ ಸವಾರಿಗೆ ಇನ್ನು ಏನೆಲ್ಲಾ ಸುಧಾರಿತ ಸೌಲಭ್ಯಗಳು ಬೇಕಿತ್ತು ಎಂಬುವುದನ್ನು ಮುಕ್ತವಾಗಿ ಹಂಚಿಕೊಳ್ಳುವ ಅವಕಾಶ ನೀಡಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಟೆಸ್ಟ್ ರೈಡ್ ನಂತರ ಹೊಸ ಇವಿ ಸ್ಕೂಟರ್ ಇಷ್ಟವಾಗುವ ಆಸಕ್ತ ಗ್ರಾಹಕರು ಖರೀದಿ ಪ್ರಕ್ರಿಯೆಯನ್ನು ಮುಂದುವರಿಸುವ ಬಗೆಗೆ ಖಚಿತಗೊಳಿಸಬಹುದಾಗಿದ್ದು, ಇಷ್ಟವಾಗದೆ ಹೋದಲ್ಲಿ ನೀವು ಮುಂಗಡವಾಗಿ ಪಾವತಿ ಮಾಡಿರುವ ಒಟ್ಟು ಮೊತ್ತವನ್ನು ಹಿಂಪಡೆಯಬಹುದಾಗಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಟೆಸ್ಟ್ ರೈಡ್ ನಂತರ ಖರೀದಿ ಪ್ರಕ್ರಿಯೆ ಖಾತ್ರಿ ಪಡಿಸಿದ ನಂತರ ಕಂಪನಿಯು ವಿತರಣೆಯಾಗುವ ದಿನಾಂಕದ ಮಾಹಿತಿಯನ್ನು ಹಂಚಿಕೊಳ್ಳಲಿದ್ದು, ಸದ್ಯ ಟೆಸ್ಟ್ ರೈಡ್ ಪಡೆದುಕೊಳ್ಳುತ್ತಿರುವ ಗ್ರಾಹಕರಿಗೆ ಡಿಸೆಂಬರ್ 1ರಿಂದ 31ರ ಒಳಗಾಗಿ ಹೊಸ ಸ್ಕೂಟರ್ ವಿತರಣೆಯಾಗುವ ಭರವಸೆ ನೀಡಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಹೊಸ ಇವಿ ಸ್ಕೂಟರ್ ಖರೀದಿ ಪ್ರಕ್ರಿಯೆಗಾಗಿ ಓಲಾ ಕಂಪನಿಯು ಶೋರೂಂಗಳ ಬದಲಾಗಿ ಸಂಪೂರ್ಣವಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಸ್ಕೂಟರ್ ಖರೀದಿ ಪ್ರಕ್ರಿಯೆ ಪ್ರಕ್ರಿಯೆ, ವಿತರಣೆ ಮತ್ತು ಮಾರಾಟ ನಂತರದ ಗ್ರಾಹಕರ ಸೇವೆಗಳು ಸಹ ಮನೆ ಬಾಗಿಲಿಗೆ ಒದಗಿಸುವ ಭರವಸೆ ನೀಡಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಓಲಾ ಹೊಸ ಇವಿ ಸ್ಕೂಟರ್‌ಗಳ ಖರೀದಿಗಾಗಿ ದೇಶಾದ್ಯಂತ ಪ್ರಮುಖ ನಗರಗಳಿಂದ ಸುಮಾರು 1.50 ಲಕ್ಷಕ್ಕೂ ಅಧಿಕ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಸ್ಕೂಟರ್ ಖರೀದಿದಾಗಿ ಕಂಪನಿಯು ಪ್ರಮುಖ ಬ್ಯಾಂಕ್‌ಗಳ ಪಾಲುದಾರಿಕೆಯೊಂದಿಗೆ ಗರಿಷ್ಠ ಸಾಲ ಸೌಲಭ್ಯದೊಂದಿಗೆ ಆಕರ್ಷಕ ಇಎಂಐ ಆಯ್ಕೆಗಳನ್ನು ನೀಡಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಜೊತೆಗೆ ಓಲಾ ಫೈನಾನ್ಸಿಲ್ ಸರ್ವಿಸ್ ಮೂಲಕವೂ ಗ್ರಾಹಕರು ಹೊಸ ಸ್ಕೂಟರ್ ಖರೀದಿ ಮಾಡಬಹುದಾಗಿದ್ದು, ಹೊಸ ಎಸ್1 ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಹೊಸ ಸ್ಕೂಟರ್ ಬೆಲೆಯು ಕೆಲವು ರಾಜ್ಯಗಳಲ್ಲಿ ಹೆಚ್ಚುವರಿ ಸಬ್ಸಡಿ ನೀಡುತ್ತಿರುವ ಹಿನ್ನಲೆಯಲ್ಲಿ ಸಬ್ಸಡಿ ಹೊಂದಿರದ ರಾಜ್ಯಗಳಿಂತೂ ತುಸು ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದ್ದು, ಕೇಂದ್ರ ಸರ್ಕಾರವು ಪ್ರತಿ ರಾಜ್ಯಗಳಿಗೂ ಅನ್ವಯವಾಗುವಂತೆ ಫೇಮ್ 2 ಯೋಜನೆ ಅಡಿ ಸಬ್ಸಡಿ ನೀಡುತ್ತಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ತೀವ್ರವಾಗಿ ಹೆಚ್ಚಿಸುವ ಉದ್ದೇಶದಿಂದ ದೆಹಲಿ, ಮಹಾರಾಷ್ಟ್ರ, ರಾಜಸ್ತಾನ ಮತ್ತು ಗುಜರಾತ್ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ಇವಿ ವಾಹನ ಖರೀದಿಸುವ ಗ್ರಾಹಕರಿಗೆ ಕೇಂದ್ರದ ಫೇಮ್ 2 ಸಬ್ಸಡಿ ಜೊತೆಗೆ ರಾಜ್ಯ ಸರ್ಕಾರದಿಂದಲೂ ಹೆಚ್ಚುವರಿ ಸಬ್ಸಡಿ ನೀಡುತ್ತಿವೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಕುರಿತಾದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಉಪಯಕ್ತ ಮಾಹಿತಿಯುಳ್ಳ Ola Electric App ಅಭಿವೃದ್ದಿಪಡಿಸಿದ್ದು, ಹೊಸ ಆ್ಯಪ್ ಮೂಲಕ ವಾಹನ ಖರೀದಿ, ವಿತರಣೆ, ಗ್ರಾಹಕ ಸೇವೆ, ಇನ್ಸುರೆನ್ಸ್, ಮೌಲ್ಯ ವರ್ಧಿತ ಸೇವೆಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಇನ್ನು ಓಲಾ ಸ್ಕೂಟರ್‌ಗಳ ತಾಂತ್ರಿಕ ಸೌಲಭ್ಯಗಳ ಬಗೆಗೆ ಹೇಳುವುದಾದರೆ ಆರಂಭಿಕ ಮಾದರಿಯಾದ ಎಸ್1 ವೆರಿಯೆಂಟ್‌‌ನಲ್ಲಿ 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಓಲಾ ಇವಿ ಸ್ಕೂಟರ್ ಟೆಸ್ಟ್ ರೈಡ್ ಆರಂಭ- ಮೊದಲ ದಿನವೇ ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ರೈಡ್ ಅವಕಾಶ

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

Most Read Articles

Kannada
English summary
Ola s1 s1 pro electric scooters test ride begins
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X