'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಎಲೆಕ್ಟ್ರಿಕ್ ವಾಹನ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಓಲಾ ನಿರ್ಮಾಣದ ಹೊಸ ಇವಿ ಸ್ಕೂಟರ್ ಮಾದರಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಇವಿ ಸ್ಕೂಟರ್ ಮಾದರಿಯು ಭಾರತದಲ್ಲಿ ಸೀರಿಸ್ ಎಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎನ್ನಲಾಗಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಬಿಡುಗಡೆಗೂ ಮುನ್ನವೇ ಮೈಲೇಜ್ ವಿಚಾರವಾಗಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಹೆಚ್ಚಿನ ಮಟ್ಟದ ಮೈಲೇಜ್, ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಮುಖ ಎರಡು ವೆರಿಯೆಂಟ್‌ನಲ್ಲಿ ಬಿಡುಗಡೆಯಾಗಲಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಕೇಂದ್ರ ಸಾರಿಗೆ ಇಲಾಖೆಗೆ ಸಲ್ಲಿಸಲಾಗಿರುವ ಟ್ರೇಡ್ ಮಾರ್ಕ್ ಅರ್ಜಿಯಲ್ಲಿ ಓಲಾ ಕಂಪನಿಯು ಹೊಸ ಸ್ಕೂಟರ್ ಹೆಸರನ್ನು ಸೀರಿಸ್ ಎಸ್ ನಮೂದಿಸಿದ್ದು, ಸೀರಿಸ್ ಎಸ್‌ನಲ್ಲಿಯೇ ಮತ್ತೆ ಎಸ್1 ಮತ್ತು ಎಸ್1 ಪ್ರೊ ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಓಲಾ ಸೀರಿಸ್ ಎಸ್ ಸ್ಕೂಟರ್‌ನಲ್ಲಿ ಎಸ್1 ಮಾದರಿಯನ್ನು ವಾಣಿಜ್ಯ ಬಳಕೆದಾರರಿಗೆ ಮಾರಾಟ ಮಾಡುವ ಸಾಧ್ಯತೆಗಳಿದ್ದು, ಎಸ್1 ಪ್ರೊ ಮಾದರಿಯ ಆರಂಭಿಕ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ವ್ಯಯಕ್ತಿಕ ಬಳಕೆದಾರರಿಗೆ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಇನ್ನು ಹೊಸ ಸ್ಕೂಟರ್ ಪ್ರತಿ ಚಾರ್ಜ್‌ಗೆ 150 ಕಿ.ಮೀ ನಿಂದ 240 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾದ ವಿವಿಧ ಮಾದರಿಯ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿದೆ ಎನ್ನಲಾಗಿದ್ದು, ಹೊಸ ಸ್ಕೂಟರ್‌ನಲ್ಲಿ ಹೆಚ್ಚಿನ ಮಟ್ಟದ ಮೈಲೇಜ್ ಖಾತ್ರಿಪಡಿಸುವ ಬ್ಯಾಟರಿ ಪ್ಯಾಕ್, ಸ್ಕೂಟರ್‌ಗೆ ಗರಿಷ್ಠ ಸುರಕ್ಷತೆಗಾಗಿ ಒದಗಿಸುವ ಆ್ಯಪ್ ಆಧರಿತ ಕನೆಕ್ಟೆಡ್ ಟೆಕ್ನಾಲಜಿ ನೀಡಿರುವುದು ಬಹುತೇಕ ಖಚಿತವಾಗಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಸದ್ಯಕ್ಕೆ ಇವಿ ಸ್ಕೂಟರ್ ಮಾತ್ರ ಉತ್ಪಾದನೆ ಮಾಡಲಿರುವ ಓಲಾ ಕಂಪನಿಯು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಇವಿ ವಾಹನಗಳನ್ನು ಸಹ ಅಭಿವೃದ್ದಿಪಡಿಸುವ ಯೋಜನೆಯಲ್ಲಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಯೋಜನೆಗಾಗಿ ಓಲಾ ಕಂಪನಿಯು ತಮಿಳುನಾಡಿನ ಹೊಸರಿನಲ್ಲಿ ಅತ್ಯಾಧುನಿಕ ವಾಹನ ಉತ್ಪಾದನಾ ಘಟಕವನ್ನು ಸಹ ನಿರ್ಮಾಣ ಮಾಡಿದ್ದು, ಹೊಸ ಘಟಕವು ಬರೋಬ್ಬರಿ 500 ಎಕರೆ ವ್ಯಾಪ್ತಿಯಲ್ಲಿ ತಲೆಎತ್ತಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಓಲಾ ಕಂಪನಿಯು ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನಿರ್ಮಾಣದ ಗುರಿ ಹೊಂದಿದ್ದು, ಹೊಸ ಇವಿ ಮಾದರಿಗಳ ಮೂಲಕ ಅಂತರ್‌ರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಲಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಹೊಸೂರಿನಲ್ಲಿ ನಿರ್ಮಾಣವಾಗಿ ಓಲಾ ವಾಹನ ಉತ್ಪಾದನಾ ಘಟಕವು ಏಷ್ಯಾದಲ್ಲಿಯೇ ಅತಿದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಘಟಕವಾಗಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಕಂಪನಿಯು ಪ್ರತಿ 2 ಸೆಕೆಂಡುಗಳಲ್ಲಿ 1 ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣಗೊಳ್ಳಬಹುದಾಷ್ಟು ಬೃಹತ್ ಪ್ರಮಾಣದಲ್ಲಿ ವಾಹನ ಅಭಿವೃದ್ದಿಯ ಸೌಲಭ್ಯ ಹೊಂದಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಓಲಾ ಕಂಪನಿಯು ಹೊಸ ಸ್ಕೂಟರ್ ಮಾದರಿಯನ್ನು ಕೇವಲ ಭಾರತದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೂ ರಫ್ತು ಮಾಡುವ ಬೃಹತ್ ಯೋಜನೆ ಹೊಂದಿದ್ದು, ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ನಿರ್ಮಾಣ ಮಾಡಲಾಗುತ್ತಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಿವಿಧ ತಾಂತ್ರಿಕ ಕಾರ್ಯಗಳಿಗಾಗಿ ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲಾಗುತ್ತಿದ್ದು, ಬೃಹತ್ ಪ್ರಮಾಣದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಯೋಜನೆಗಾಗಿ ನೇದರ್ಲ್ಯಾಂಡ್ ಮೂಲದ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಜೊತೆಗೂಡಿಸಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಹಲವಾರು ಎಲೆಕ್ಟ್ರಿಕ್ ಮಾದರಿಗಳಿಗೆ ಬೆಲೆ ವಿಚಾರದಲ್ಲಿ ಮೈಲೇಜ್ ವಿಚಾರದಲ್ಲಿ ಭಾರೀ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಪೆಟ್ರೋಲ್ ಬೆಲೆ ಹೆಚ್ಚಳದಿಂದಾಗಿ ಓಲಾ ಇವಿ ಸ್ಕೂಟರ್‌ಗೆ ಭರ್ಜರಿ ಬೇಡಿಕೆ ಹರಿದುಬರಲಿದೆ ಎನ್ನಲಾಗಿದೆ.

'ಸೀರಿಸ್ ಎಸ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಇದಕ್ಕಾಗಿಯೇ ಈ ವರ್ಷಾಂತ್ಯದೊಳಗೆ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲು ಯೋಜಿಸುತ್ತಿರುವ ಓಲಾ ಕಂಪನಿಯು ದೇಶಾದ್ಯಂತ ಪ್ರಮುಖ 400 ನಗರಗಳಲ್ಲಿ 1 ಲಕ್ಷ ಫಾಸ್ಟ್ ಚಾರ್ಜರ್‌ಗಳನ್ನು ಮತ್ತು ಆಯ್ದ ಮೆಟ್ರೊ ನಗರಗಳಲ್ಲಿ ಹೈಪರ್ ಚಾರ್ಜಿಂಗ್ ಪಾರ್ಕ್‌ಗಳನ್ನು ನಿರ್ಮಾಣ ಮಾಡುತ್ತಿದೆ.

Most Read Articles

Kannada
English summary
Ola Series S, S1 & S1 Pro Electric Scooter Names Registered Ahead Of India Launch. Read in Kannada.
Story first published: Wednesday, July 14, 2021, 17:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X