ಬುಕ್ಕಿಂಗ್ ಆರಂಭ- ರೂ.499 ಮುಂಗಡ ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಓಲಾ ಎಲೆಕ್ಟ್ರಿಕ್ ಕಂಪನಿಯು ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಕಂಪನಿಯು ಹೊಸ ಸ್ಕೂಟರ್ ಅಧಿಕೃತ ಬಿಡುಗಡೆಗೂ ಮುನ್ನ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಬುಕ್ಕಿಂಗ್ ಪ್ರಕ್ರಿಯೆಗಾಗಿ ಓಲಾ ಕಂಪನಿಯು ಅಚ್ಚರಿ ಎಂಬಂತೆ ರೂ. 499 ಮುಂಗಡ ಹಣ ಪಾವತಿ ನಿಗದಿಪಡಿಸಿದ್ದು, ಹೊಸ ಸ್ಕೂಟರ್ ಮಾದರಿಯು ಮುಂದಿನ ಕೆಲವೇ ತಿಂಗಳಿನಲ್ಲಿ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಹೊಸ ಸಂಚಲನ ಮೂಡಿಸಲು ಸಜ್ಜಾಗುತ್ತಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಹೊಸ ಸ್ಕೂಟರ್ ಉತ್ಪಾದನಾ ಮಾದರಿಯನ್ನು ಈಗಾಗಲೇ ವಿವಿಧ ಹಂತದಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ್ದು, ಇತ್ತೀಚೆಗೆ ನಮ್ಮ ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿತ್ತು.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸೀರಿಸ್ ಎಸ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿಗಳಿದ್ದು, ಪ್ರಮುಖ ಎರಡು ವೆರಿಯೆಂಟ್‌ಗಳೊಂದಿಗೆ ಪ್ರತಿ ಚಾರ್ಜ್‌ಗೆ 150 ಕಿ.ಮೀ 240 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾದ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಹೀಗಾಗಿ ಓಲಾ ಹೊಸ ಸ್ಕೂಟರ್ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ ಹೆಚ್ಚಿನ ಸಂಖ್ಯೆಯಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಹೊಸ ವಾಹನ ಉತ್ಪಾದನಾ ಯೋಜನೆಗಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 2,400 ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಸದ್ಯ ಇವಿ ಸ್ಕೂಟರ್ ಮಾತ್ರ ಉತ್ಪಾದನೆ ಮಾಡಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ತ್ರಿ ಚಕ್ರ ವಾಹನಗಳು ಮತ್ತು ಇವಿ ಕಾರುಗಳನ್ನು ಸಹ ಅಭಿವೃದ್ದಿಪಡಿಸಲಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ವಾಹನ ಉತ್ಪಾದನೆಗಾಗಿ ಓಲಾ ಕಂಪನಿಯು ತಮಿಳುನಾಡಿನ ಹೊಸರಿನಲ್ಲಿ ಬೃಹತ್ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡುತ್ತಿದ್ದು, ಹೊಸ ಉತ್ಪಾದನಾ ಘಟಕವು ಬರೋಬ್ಬರಿ 500 ಎಕರೆ ವ್ಯಾಪ್ತಿಯಲ್ಲಿ ಅಭಿವೃದ್ದಿಗೊಳ್ಳುತ್ತಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಓಲಾ ಹೊಸ ವಾಹನ ಉತ್ಪದನಾ ಘಟಕವು ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉತ್ಪಾದನೆ ಮಾಡಬಹುದಾದ ಸಾಮರ್ಥ್ಯ ಹೊಂದಿದ್ದು, ಹೊಸ ಘಟಕವು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಲಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಏಷ್ಯಾದಲ್ಲಿಯೇ ಅತಿದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಘಟಕವಾಗಿರುವ ಓಲಾ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದಲ್ಲಿ ಪ್ರತಿ 2 ಸೆಕೆಂಡುಗಳಲ್ಲಿ 1 ಎಲೆಕ್ಟ್ರಿಕ್ ಸ್ಕೂಟರ್ ಅಸ್ಲೆಂಬಿಗೊಳ್ಳಲಿದ್ದು, ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವಜ್ಞಾನದ ಆಧಾರದ ಮೇಲೆ ನಿರ್ಮಾಣ ಮಾಡಲಾಗುತ್ತಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಓಲಾ ಕಂಪನಿಯು ಹೊಸ ಸ್ಕೂಟರ್ ಮಾದರಿಯನ್ನು ಕೇವಲ ಭಾರತದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೂ ರಫ್ತು ಮಾಡುವ ಬೃಹತ್ ಯೋಜನೆ ಹೊಂದಿದ್ದು, ಬೃಹತ್ ಪ್ರಮಾಣದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಯೋಜನೆಗಾಗಿ ನೇದರ್ಲ್ಯಾಂಡ್ ಮೂಲದ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಜೊತೆಗೂಡಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಅತ್ಯಾಧುನಿಕ ಓಲಾ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಿವಿಧ ತಾಂತ್ರಿಕ ಕಾರ್ಯಗಳಿಗಾಗಿ ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲಾಗುತ್ತಿದ್ದು, ವರ್ಷಕ್ಕೆ 20 ಲಕ್ಷ ಸ್ಕೂಟರ್‌ಗಳನ್ನು ನಿರ್ಮಾಣ ಮಾಡುವ ಯೋಜನೆ ಸಿದ್ದಪಡಿಸಲಾಗಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೂ ಮುನ್ನ ಓಲಾ ಕಂಪನಿಯು ದೇಶಾದ್ಯಂತ ಪ್ರಮುಖ 400 ನಗರಗಳಲ್ಲಿ 1 ಲಕ್ಷ ಫಾಸ್ಟ್ ಚಾರ್ಜರ್ ನಿಲ್ದಾಣಗಳನ್ನು ಮತ್ತು ಆಯ್ದ ಮೆಟ್ರೊ ನಗರಗಳಲ್ಲಿ ಅತಿ ಕಡಿಮೆ ಅವಧಿಯಲ್ಲಿ ನೂರಾರು ಸ್ಕೂಟರ್‌ಗಳನ್ನು ಏಕಕಾಲಕ್ಕೆ ಚಾರ್ಜ್ ಮಾಡಬಹುದಾದ ಹೈಪರ್ ಚಾರ್ಜಿಂಗ್ ಪಾರ್ಕ್‌ಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಿದೆ.

ಬುಕ್ಕಿಂಗ್ ಆರಂಭ- ರೂ.499 ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿ!

ಈ ಮೂಲಕ ಓಲಾ ಹೊಸ ಸ್ಕೂಟರ್ ಮಾದರಿಯು ಮಾರುಕಟ್ಟೆಯಲ್ಲಿರುವ ಹಲವು ಎಲೆಕ್ಟ್ರಿಕ್ ಮಾದರಿಗಳಿಗೆ ಬೆಲೆ ವಿಚಾರವಾಗಿ ಮತ್ತು ಮೈಲೇಜ್ ವಿಚಾರದಲ್ಲಿ ಭಾರೀ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಪೆಟ್ರೋಲ್ ಬೆಲೆ ಹೆಚ್ಚಳದಿಂದಾಗಿ ಓಲಾ ಇವಿ ಸ್ಕೂಟರ್‌ ಮಾರಾಟ ಹೊಸ ದಾಖಲೆ ಸೃಷ್ಠಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

More from DriveSpark

Article Published On: Thursday, July 15, 2021, 20:01 [IST]
English summary
Ola Electric Scooter Bookings Open In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+