ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬಿಡುಗಡೆಯಾಗಲಿದೆ ಓಲಾ ಎಲೆಕ್ಟ್ರಿಕ್ ಸ್ಕೂಟರ್
ಓಲಾ ಕಂಪನಿಯು ಇನ್ನು ಕೆಲವೇ ವಾರಗಳಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲಿದೆ. ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ನಂತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಗಾಗಿ ಓಲಾ ಕಂಪನಿಯು ತಮಿಳುನಾಡಿನಲ್ಲಿ ಉತ್ಪಾದನಾ ಘಟಕವನ್ನು ಆರಂಭಿಸುತ್ತಿದೆ. ಈ ಘಟಕವು ಜುಲೈ ತಿಂಗಳಿನಲ್ಲಿ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆಗಳಿವೆ. ಓಲಾ ಕಂಪನಿಯು ದೇಶಿಯ ಮಾರುಕಟ್ಟೆಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದುವ ಗುರಿಯನ್ನು ಹೊಂದಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದರೂ ಸಹ ಬೆಳವಣಿಗೆ ವೇಗ ನಿಧಾನವಾಗಿದೆ. ಈ ಸನ್ನಿವೇಶದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಸೆಗ್ ಮೆಂಟಿನಲ್ಲಿ ಸರಿಯಾದ ಹೆಜ್ಜೆ ಇಡಬೇಕಾದ ಅವಶ್ಯಕತೆಯಿದೆ.
MOSTREAD: ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು

ಓಲಾ ಕಂಪನಿಯು ಇದೇ ಹಾದಿಯಲ್ಲಿ ಮುನ್ನಡೆಯಲು ನಿರ್ಧರಿಸಿದೆ. ಕಂಪನಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಜುಲೈ ತಿಂಗಳಿನಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯ ಜೊತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಮಾರಾಟ ಮಾಡಲಾಗುವುದು.

ಓಲಾ ಕಂಪನಿಯು ಇತ್ತೀಚೆಗೆ ಹೈಪರ್‌ಚಾರ್ಜ್ ನೆಟ್‌ವರ್ಕ್ ಆರಂಭಿಸುವುದಾಗಿ ಘೋಷಿಸಿದೆ. ಇದರ ಅಡಿಯಲ್ಲಿ ಓಲಾ 400 ನಗರಗಳಲ್ಲಿ 1 ಲಕ್ಷ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲಿದೆ. ಈ ಪಾಯಿಂಟ್‌ಗಳು ವಿಶ್ವದ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಚಾರ್ಜಿಂಗ್ ನೆಟ್‌ವರ್ಕ್ ಆಗಿರಲಿವೆ.
MOSTREAD: ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್

ಕಂಪನಿಯು ಮೊದಲ ವರ್ಷ 100 ನಗರಗಳಲ್ಲಿ 5000 ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲಿದೆ. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೇವಲ 18 ನಿಮಿಷಗಳಲ್ಲಿ 50%ನಷ್ಟು ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಹೀಗೆ ಚಾರ್ಜ್ ಆದ ಈ ಎಲೆಕ್ಟ್ರಿಕ್ ಸ್ಕೂಟರ್ 75 ಕಿ.ಮೀಗಳವರೆಗೆ ಚಲಿಸುತ್ತದೆ. ಇನ್ನು ಕಂಪನಿಯ ಉತ್ಪಾದನಾ ಘಟಕದ ಬಗ್ಗೆ ಹೇಳುವುದಾದರೆ, ಈ ಘಟಕವು ಕಾರ್ಯಾಚರಣೆ ಆರಂಭಿಸಿದ ನಂತರ ಸುಮಾರು 10,000 ಜನರಿಗೆ ಉದ್ಯೋಗ ನೀಡಲಿದೆ.
MOSTREAD: ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು

ಈ ಘಟಕವು ಭಾರತದ ಅತಿ ದೊಡ್ಡ ಆಟೋಮ್ಯಾಟಿಕ್ ಘಟಕವಾಗಿರಲಿದೆ ಎಂದು ಹೇಳಲಾಗಿದೆ. ಒಪಿಎಸ್ ಪೂರ್ಣ ಸಾಮರ್ಥ್ಯದಲ್ಲಿರುವಾಗ ಈ ಘಟಕದಲ್ಲಿ 5,000 ರೋಬೋಟ್ ಹಾಗೂ ಆಟೋಮ್ಯಾಟಿಕ್ ಗೈಡೆಡ್ ವಾಹನಗಳನ್ನು ನಿಯೋಜಿಸಲಾಗುವುದು.

ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಹೇಳುವುದಾದರೆ, ಓಲಾ ಕಂಪನಿಯು ಈಗಾಗಲೇ ಅಟಾರ್ಗೊ ಆಪ್ ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ.
MOSTREAD: ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ

ಈ ಆಪ್‌ಸ್ಕೂಟರ್‌ನಲ್ಲಿ ಪೋರ್ಟಬಲ್ ಬ್ಯಾಟರಿಯನ್ನು ಅಳವಡಿಸಲಾಗುತ್ತದೆ. ಈ ಬ್ಯಾಟರಿಯನ್ನು 2.30 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಮಾಡಬಹುದು. ಈ ಬ್ಯಾಟರಿ ಪ್ಯಾಕ್‌ನಲ್ಲಿ ಮೂರು ಮಾಡ್ಯೂಲ್‌ಗಳನ್ನು ನೀಡಲಾಗುತ್ತದೆ.

ಪ್ರತಿ ಮಾಡ್ಯೂಲ್ 80 ಕಿ.ಮೀಗಳ ವ್ಯಾಪ್ತಿ ಹೊಂದಿರುತ್ತದೆ. ಮೂರು ಮಾಡ್ಯೂಲ್‌ಗಳನ್ನು ಒಂದುಗೂಡಿಸಿ ಗ್ರಾಹಕರು ಹೆಚ್ಚು ವ್ಯಾಪ್ತಿಯನ್ನು ಪಡೆಯಬಹುದು. ಈ ಸ್ಕೂಟರ್ 50 ಲೀಟರ್ ಸ್ಟೋರೇಜ್ ಸ್ಪೇಸ್ ಹೊಂದಿರಲಿದೆ.


Click it and Unblock the Notifications