Just In
Don't Miss!
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇನ್ನೆರಡು ತಿಂಗಳಲ್ಲಿ ಬಿಡುಗಡೆಯಾಗಲಿದೆ ಓಲಾ ಕಂಪನಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್
ಹೊಸ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಇನ್ನು ಎರಡು ತಿಂಗಳಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಈ ಮಾಹಿತಿಯನ್ನು ಓಲಾ ಕಂಪನಿಯ ಸಂಸ್ಥಾಪಕರಾದ ಪವಿಶ್ ಅಗರ್ವಾಲ್ ಖಚಿತಪಡಿಸಿದ್ದಾರೆ.

ಕೈಗೆಟಕುವ ದರದಲ್ಲಿ ಈ ಸ್ಕೂಟರ್ ಅನ್ನು ಮಾರಾಟ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಓಲಾ ಕಂಪನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಜನರು ಕಾತುರದಿಂದ ಕಾಯುತ್ತಿದ್ದಾರೆ. ಹಲವಾರು ಟೆಕ್ನಿಕಲ್ ಫೀಚರ್'ಗಳನ್ನು ಹೊಂದಿರುವುದರಿಂದ ಈ ಸ್ಕೂಟರ್ ಜನರಲ್ಲಿ ಹೆಚ್ಚು ನಿರೀಕ್ಷೆಯನ್ನು ಹುಟ್ಟು ಹಾಕಿದೆ.

ಹೊಸೂರಿನ ಓಲಾ ಕಂಪನಿಯ ಸಂಕೀರ್ಣದಲ್ಲಿ ವಿಶ್ವದ ಅತಿದೊಡ್ಡ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ. ಈ ಸಂದರ್ಭದಲ್ಲಿಯೇ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಜೂನ್ ತಿಂಗಳಿನಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಕಂಪನಿಯ ಸಂಸ್ಥಾಪಕ ಪವಿಶ್ ಅಗರ್ವಾಲ್ ಹೇಳಿದ್ದಾರೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಎಕನಾಮಿಕ್ ಟೈಮ್ಸ್ ಆಟೋ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ಯೋಜನೆಯು ಪರಿಸರ ಸ್ನೇಹಿ ವ್ಯವಸ್ಥೆಯ ಭಾಗವಾಗಿರಲಿದೆ. ನಮ್ಮ ಹೊಸೂರು ಉತ್ಪಾದನಾ ಘಟಕದ ಮೊದಲ ಹಂತದ ನಿರ್ಮಾಣ ಕಾರ್ಯವು ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ.

ಉತ್ಪಾದನಾ ಘಟಕದ ಕಾಮಗಾರಿ ಪೂರ್ಣಗೊಂಡ ನಂತರ ನಮ್ಮ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲಾಗುವುದು. ನಮ್ಮ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಈಗಾಗಲೇ ಅಸೆಂಬಲ್ ಮಾಡಿ ಪರೀಕ್ಷಿಸಲಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಕಂಪನಿಯ ಉತ್ಪಾದನಾ ಘಟಕವು ಕಾರ್ಯಾಚರಣೆ ಆರಂಭಿಸಿದ ತಕ್ಷಣವೇ ನಾವು ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲಿದ್ದೇವೆ. ನಾವು ನಮ್ಮದೇ ಸ್ಕೂಟರ್ ಬ್ಯಾಟರಿ, ಎಲೆಕ್ಟ್ರಿಕ್ ಮೋಟರ್, ಬ್ಯಾಟರಿ ನಿರ್ವಹಣೆಗಾಗಿ ಸಾಫ್ಟ್‌ವೇರ್, ಇತರ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಟೆಕ್ನಾಲಜಿಯನ್ನು ಅಭಿವೃದ್ಧಿಪಡಿಸಿದ್ದೇವೆ.

ಈ ಕಾರಣಕ್ಕೆ ಉತ್ಪಾದನಾ ವೆಚ್ಚವು ಕಡಿಮೆಯಾಗಲಿದೆ. ಇದರಿಂದಾಗಿ ನಮ್ಮ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೈಗೆಟಕುವ ದರದಲ್ಲಿ ಮಾರಾಟ ಮಾಡಲು ಸಾಧ್ಯವಾಗಲಿದೆ. ನಮ್ಮ ಕಂಪನಿಯ ಸ್ಕೂಟರ್ ಉನ್ನತ ದರ್ಜೆಯ ಫೀಚರ್'ಗಳನ್ನು ಹೊಂದಿರಲಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ನಾವು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ನಿರ್ಧರಿಸಿದ್ದೇವೆ. ಇದರಿಂದ ಖಂಡಿತವಾಗಿಯೂ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ ಎಂಬುದು ನಮ್ಮ ಅಭಿಪ್ರಾಯ. ನಮ್ಮ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಮಾರಾಟ ಮಾಡಲಿದ್ದೇವೆ.

ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ ಒಂದೆರಡು ತಿಂಗಳ ನಂತರ ವಿದೇಶಗಳಿಗೆ ರಫ್ತು ಮಾಡಲಾಗುವುದು. ಮುಂದಿನ ವರ್ಷದ ಮಧ್ಯ ಭಾಗದಿಂದ ಹೊಸೂರು ಉತ್ಪಾದನಾ ಘಟಕದಲ್ಲಿ ಪೂರ್ಣ ಪ್ರಮಾಣದ ಉತ್ಪಾದನೆ ನಡೆಯಲಿದೆ ಎಂದು ಹೇಳಿದರು.