ಎರಡು ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅನಾವರಣಗೊಳಿಸಿದ ಒಮೆಗಾ ಸೈಕ್ ಮೊಬಿಲಿಟಿ
ವಾಣಿಜ್ಯ ವಾಹನಗಳ ಉತ್ಪಾದನಾ ಕಂಪನಿಯಾಗಿರುವ ಒಮೆಗಾ ಸೈಕ್ ಮೊಬಿಲಿಟಿ ಪ್ರೈವೆಟ್ ಲಿಮಿಟೆಡ್ ಕಂಪನಿಯು ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದ ಮೇಲೆ ಬೃಹತ್ ಪ್ರಮಾಣ ಹೂಡಿಕೆ ಮಾಡುತ್ತಿದ್ದು, ಕಂಪನಿಯು ಇವಿ ಮೊಬಿಲಿಟಿಯಲ್ಲಿ ಹೊಸ ನೀರಿಕ್ಷೆಯೊಂದಿಗೆ ಎರಡು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಸಿದ್ದವಾಗಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಸಬ್ಸಡಿ ಯೋಜನೆಗಳ ಪರಿಣಾಮ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಹಲವಾರು ಹೊಸ ಮಾದರಿಯ ಇವಿ ವಾಹನಗಳನ್ನು ಬಿಡುಗಡೆ ಮಾಡುತ್ತಿದ್ದು, ಪುಣೆ ಮೂಲದ ಒಮೆಗಾ ಸೈಕ್ ಮೊಬಿಲಿಟಿ ಕೂಡಾ ಎರಡು ಹೊಸ ವಿನ್ಯಾಸದ ಇವಿ ಸ್ಕೂಟರ್‌ಗಳನ್ನು ಅನಾವರಣಗೊಳಿಸಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಒಮೆಗಾ ಸೈಕ್ ಮೊಬಿಲಿಟಿ ಅನಾವರಣಗೊಳಿಸಿರುವ ಜೊರೊ ಮತ್ತು ಫಿಯಾರೆ ಇವಿ ಸ್ಕೂಟರ್‌ಗಳು ಪ್ರತಿ ಗಂಟೆಗೆ 45 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಪ್ರತಿ ಚಾರ್ಜ್‌ಗೆ ವಿವಿಧ ರೈಡ್ ಮೋಡ್‌ಗಳಿಗೆ ಅನುಗುಣವಾಗಿ 80 ಕಿ.ಮೀ ನಿಂದ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

ಬಜೆಟ್ ಬೆಲೆಯಲ್ಲಿ ಹೊಸ ಇವಿ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿರುವ ಒಮೆಗಾ ಸೈಕಿ ಮೊಬಿಲಿಟಿ ಕಂಪನಿಯು ಆರಂಭಿಕವಾಗಿ ವಾಣಿಜ್ಯ ಬಳಕೆಗೆ ಪೂರೈಕೆ ಮಾಡಲು ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಸ್ಕೂಟರ್‌ಗಳೊಂದಿಗೆ ಪ್ರಯಾಣಿಕ ಬಳಕೆಯ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
ಸದ್ಯ ಅನಾವರಣಗೊಂಡಿರುವ ಜೊರೊ ಮತ್ತು ಫಿಯಾರೆ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷವಾಗಿ ಡೆಲಿವರಿ ಉದ್ದೇಶಗಳಿಗಾಗಿ ಪೂರೈಕೆ ಮಾಡಲು ನಿರ್ಧರಿಸಲಾಗಿದ್ದು, ಇ-ಕಾಮರ್ಸ್, ಫುಡ್ ಡೆಲಿವರಿ ಮಾದರಿಗಳಿಗಾಗಿ ವಿವಿಧ ಕಂಪನಿಗಳು ಈ ಸ್ಕೂಟರ್‌ಗಳನ್ನು ಖರೀದಿ ಮಾಡಲಿವೆ.

ಡೆಲಿವರಿ ವಾಹನಗಳ ನಿರ್ವಹಣಾ ವೆಚ್ಚ ತಗ್ಗಿಸಲು ಬಿಟುಬಿ(ಬ್ಯುಸಿನೆಸ್ ಟು ಬ್ಯುಸಿನೆಸ್) ಮಾದರಿಗಳಾಗಿ ಎಲೆಕ್ಟ್ರಿಕ್ ಮಾದರಿಗಳಿಗೆ ಹೆಚ್ಚಿನ ಬೇಡಿಕೆ ಸಲ್ಲಿಕೆಯಾಗುತ್ತಿದ್ದು, ಈಗಾಗಲೇ ಹಲವಾರು ವಾಹನ ಕಂಪನಿಗಳು ಬಿಟುಬಿ ಉದ್ದೇಶಕ್ಕಾಗಿ ಇವಿ ವಾಹನಗಳನ್ನು ಬಿಡುಗಡೆಗೊಳಿಸಿದ್ದಾರೆ.

ಎಲೆಕ್ಟ್ರಿಕ್ ತ್ರಿ ಚಕ್ರ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಒಮೆಗಾ ಸೈಕ್ ಮೊಬಿಲಿಟಿ ಕೂಡಾ ಇದೀಗ ಹಂತ ಹಂತವಾಗಿ ವಿವಿಧ ಎಲೆಕ್ಟ್ರಿಕ್ ವಾಹನ ಬಿಡುಗಡೆ ಮಾಡುತ್ತಿದ್ದು, ಜೊರೊ ಮತ್ತು ಫಿಯಾರೆ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆ ಈ ತಿಂಗಳಾಂತ್ಯಕ್ಕೆ ಆರಂಭವಾಗಿದೆ.

ಹೊಸ ಸ್ಕೂಟರ್‌ಗಳಲ್ಲಿ ಎಲ್‌ಇಡಿ ಲೈಟಿಂಗ್ಸ್, ಎಲ್‌ಸಿಡಿ ಡಿಸ್‌ಪ್ಲೇ, ಯುಎಸ್‌ಬಿ ಸಾಕೆಟ್, ಫೋನ್ ಚಾರ್ಜಿಂಗ್, ಆ್ಯಂಟಿ ಥೆಪ್ಟ್ ಅಲಾರಂ, ರಿಮೋಟ್ ಲಾಕ್/ಅನ್‌ಲಾಕ್‌ನಂತಹ ವೈಶಿಷ್ಟ್ಯಗಳನ್ನು ಜೋಡಣೆ ಮಾಡಲಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ.
ಒಮೆಗಾ ಸೈಕ್ ಮೊಬಿಲಿಟಿ ಕಂಪನಿಯು ಸದ್ಯ ದೇಶಾದ್ಯಂತ ಪ್ರಮುಖ ನಗರಗಳಲ್ಲಿ 15 ಶೋರೂಂಗಳನ್ನು ಹೊಂದಿದ್ದು, ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳಿಗಾಗಿ ಈ ವರ್ಷಾಂತ್ಯಕ್ಕೆ 115 ಡೀಲರ್‌ಶಿಪ್ ತೆರೆಯುವ ಯೋಜನೆಯಲ್ಲಿದೆ.

ಇನ್ನು ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲಿ ದೆಹಲಿ ಸರ್ಕಾರವು ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ದೆಹಲಿ ನಂತರ ಇತರೆ ರಾಜ್ಯ ಸರ್ಕಾರಗಳು ಸಹ ಇವಿ ವಾಹನಗಳಿಗಾಗಿ ರಾಜ್ಯದ ಮಟ್ಟದ ಇವಿ ವಾಹನಗಳನ್ನು ಪ್ರೊತ್ಸಾಹಿಸಲು ಸಬ್ಸಡಿ ಯೋಜನೆಗಳನ್ನು ಜಾರಿಗೆ ತರುತ್ತಿವೆ.


Click it and Unblock the Notifications