Just In
- 30 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ವಿಜಯನಗರ ಜಿಲ್ಲೆ; ಮೇಲುಸ್ತುವಾರಿಗೆ ಐಎಎಸ್ ಅಧಿಕಾರಿ ನೇಮಕ
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿ ಚಾರ್ಜ್‌ಗೆ 120ಕಿ.ಮೀ ರೇಂಜ್ ಹೊಂದಿರುವ ಹೊಸ ಇವಿ ಬೈಕ್ ಬಿಡುಗಡೆ ಮಾಡಲಿದೆ ಪ್ಯೂರ್ ಇವಿ
ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಉತ್ತಮ ಬೇಡಿಕೆಯೊಂದಿಗೆ ಹೊಸ ಬದಲಾವಣೆಗೆ ಕಾರಣವಾಗುತ್ತಿದ್ದು, ಹಲವಾರು ಸ್ಟಾರ್ಟ್ ಅಪ್ ಕಂಪನಿಗಳು ಗ್ರಾಹಕರ ಬೇಡಿಕೆ ಅನುಸಾರವಾಗಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡುತ್ತಿವೆ.

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗುತ್ತಿದೆ. ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸಾಂಪ್ರಾದಾಯಿಕ ವಾಹನ ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳೇ ಸದ್ಯ ಮಾರುಕಟ್ಟೆಯಲ್ಲಿ ಹೆಚ್ಚು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿವೆ.

ಹೈದ್ರಾಬಾದ್ ಮೂಲದ ಪ್ಯೂರ್ ಇವಿ ಕಂಪನಿಯು ಕೂಡಾ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಹಲವು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಕೆಲವು ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದೆ.

ಹೊಸ ಉತ್ಪನ್ನಗಳೊಂದಿಗೆ ರಾಷ್ಟ್ರ ವ್ಯಾಪಿ ಮಾರಾಟ ಸೌಲಭ್ಯವನ್ನು ವಿಸ್ತರಿಸುವ ಯೋಜನೆಯಲ್ಲಿರುವ ಪ್ಯೂರ್ ಇವಿ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಇವಿ ಮೋಟಾರ್‌ಸೈಕಲ್ ಮಾದರಿಯೊಂದನ್ನು ಬಿಡುಗಡೆ ಮಾಡುತ್ತಿದೆ.

ಪ್ಯೂರ್ ಇವಿ ಕಂಪನಿಯು ಹೈದ್ರಾಬಾದ್‌ನ ಐಐಟಿಯೊಂದಿಗಿನ ಸಹಭಾಗಿತ್ವ ಹೊಂದಿದ್ದು, ಐಐಟಿಯೊಂದಿಗೆ ಇದೀಗ ಮಾರುಕಟ್ಟೆ ವಿಸ್ತರಣೆಗೆ ಮುಂದಾಗಿದೆ. ಸದ್ಯ ಐಐಟಿ ಕ್ಯಾಂಪಸ್‌ನಲ್ಲಿಯೇ ತಾತ್ಕಾಲಿಕವಾಗಿ ಸ್ಕೂಟರ್ ಉತ್ಪಾದನಾ ಘಟಕವನ್ನು ತೆರೆದಿರುವ ಫ್ಯೂರ್ ಇವಿ ಕಂಪನಿಯು 2022ರ ವೇಳೆಗೆ ಪ್ರತ್ಯೇಕ ಉತ್ಪಾದನಾ ಘಟಕ ಹೊಂದುವ ಯೋಜನೆಯಲ್ಲಿದ್ದು, ವಾರ್ಷಿಕವಾಗಿ 2 ಲಕ್ಷ ಇವಿ ದ್ವಿಚಕ್ರ ವಾಹನಗಳನ್ನು ಉತ್ಪಾದನಾ ಗುರಿಹೊಂದಿದೆ.

2018ರಿಂದಲೇ ವಿವಿಧ ಮಾದರಿಯ ಇವಿ ಸ್ಕೂಟರ್ ಉತ್ಪಾದನೆ ಮಾಡಿರುವ ಪ್ಯೂರ್ ಇವಿ ಕಂಪನಿಯು ಇಟ್ರಾನ್ಸ್ ಪ್ಲಸ್, ಇಪ್ಯೂಟೊ 7ಜಿ, ಇಟ್ರಾನ್ಸ್, ಇಟ್ರಾನ್ ಪ್ಲಸ್ ಸ್ಕೂಟರ್‌ಗಳನ್ನು ಉತ್ಪಾದನೆ ಮಾಡುತ್ತಿದ್ದು, ಸೀಮಿತ ಮಾರುಕಟ್ಟೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ.

2021ರ ಮಧ್ಯಂತರದಲ್ಲಿ ಮತ್ತೊಂದು ಹೊಸ ಎಲೆಕ್ಟ್ರಿಕ್ ಬೈಕ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿರುವ ಪ್ಯೂರ್ ಇವಿ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಇಟ್ರಿಸ್ಟ್ 350 ಎನ್ನುವ ಇವಿ ಬೈಕ್ ಬಿಡುಗಡೆ ಮಾಡುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೊಸ ಬೈಕ್ ಉತ್ಪಾದನಾ ಆವೃತ್ತಿಯ ಚಿತ್ರವನ್ನು ಹೊರತುಪಡಿಸಿ ಯಾವುದೇ ಹಂಚಿಕೊಳ್ಳದ ಪ್ಯೂರ್ ಕಂಪನಿಯು ಮುಂಬರುವ ಅಗಸ್ಟ್ ಹೊತ್ತಿಗೆ ಹೊಸ ಬೈಕ್ ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಇಟ್ರಿಸ್ಟ್ 350 ಮಾದರಿಯು ಉತ್ತಮ ಬೆಲೆಯೊಂದಿಗೆ ಅತ್ಯುತ್ತಮ ಬ್ಯಾಟರಿ ಪ್ಯಾಕ್ ಹೊಂದಿರಲಿದೆ ಎನ್ನಲಾಗಿದೆ.

ಹೊಸ ಇಟ್ರಿಸ್ಟ್ 350 ಇವಿ ಬೈಕ್ ಮಾದರಿಯಲ್ಲಿ 3.5 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಜೋಡಿಸುವ ಸಾಧ್ಯತೆಗಳಿದ್ದು, ಹೊಸ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ 85 ಕಿ.ಮೀ ಟಾಪ್ ಸ್ಪೀಡ್ ಚಾಲನೆಯೊಂದಿಗೆ 125 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಆದರೆ ಹೊಸ ಬೈಕಿನ ಉತ್ಪಾದನಾ ಮಾದರಿಯ ಚಿತ್ರದ ಹೊರತಾಗಿ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಳ್ಳದ ಪ್ಯೂರ್ ಇವಿ ಕಂಪನಿಯು ಮುಂಬರುವ ಅಗಸ್ಟ್ ಹೊತ್ತಿಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಇವಿ ಬೈಕ್ ಮಾದರಿಯು ಪ್ರತಿಸ್ಪರ್ಧಿ ಬೈಕ್ ಮಾದರಿಯಾದ ರಿವೊಲ್ಟ್ 400 ಮಾದರಿಗೆ ಸಮನಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 1.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.
ಸೂಚನೆ: 6 ಮತ್ತು 7 ಚಿತ್ರಗಳನ್ನು ಹೊರತುಪಡಿಸಿ ಉಳಿದ ಚಿತ್ರಗಳನ್ನು ಸಾಂದರ್ಭಿಕವಾಗಿ ಬಳಕೆ ಮಾಡಲಾಗಿದೆ.