ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಜೊತಗೆ ರಾಜ್ಯ ಸರ್ಕಾರಗಳು ಸಹ ಇವಿ ವಾಹನ ಬಳಕೆ ಹೆಚ್ಚಳಕ್ಕೆ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ದೆಹಲಿ ಸರ್ಕಾರವು ಇತರೆ ರಾಜ್ಯಗಳಿಗಳಿಂತಲೂ ಹೊಸ ಇವಿ ನೀತಿ ಅಡಿಯಲ್ಲಿ ಪರಿಸರಕ್ಕೆ ಪೂರಕವಾದ ವಾಹನಗಳ ನೋಂದಣಿಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿದಾರರನ್ನು ಉತ್ತೇಜಿಸಲು ಗರಿಷ್ಠ ಸಬ್ಸಡಿ ಮತ್ತು ನೋಂದಣಿ ಶುಲ್ಕ ಮನ್ನಾದಂತಹ ಯೋಜನೆಗಳನ್ನು ಪ್ರಕಟಿಸಿ ಇವಿ ವಾಹನ ಬಳಕೆಯನ್ನು ಉತ್ತೇಜಿಸುತ್ತಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಹೊಸ ಸಬ್ಸಡಿ ಯೋಜನೆಯ ಪರಿಣಾಮ ದೆಹಲಿಯಲ್ಲಿ ಮಾತ್ರವಲ್ಲ ಇತರೆ ರಾಜ್ಯಗಳಲ್ಲೂ ಇವಿ ವಾಹನಗಳ ನೋಂದಣಿ ತಿಂಗಳಿನಿಂದ ತಿಂಗಳಿಗೆ ದ್ವಿಗುಣಗೊಳ್ಳುತ್ತಿದ್ದು, ಕಳೆದ ಒಂದೂವರೆ ವರ್ಷದಲ್ಲಿ ಎಲೆಕ್ಟ್ರಿಕ್ ವಾಹನ ಮಾರಾಟವು ಸಾಕಷ್ಟು ಏರಿಕೆಯಾಗಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಹೈದ್ರಾಬಾದ್ ಮೂಲದ ಪ್ಯೂರ್ ಇವಿ ಕಂಪನಿಯು ತನ್ನ ಎಲೆಕ್ಟ್ರಿಕ್ ವಾಹನಗಳ ವಾರಂಟಿ ಹೆಚ್ಚಿಸುವ ಮೂಲಕ ಇವಿ ವಾಹನ ಖರೀದಿಗೆ ಉತ್ತೇಜಿಸುತ್ತಿದ್ದು, ಬ್ಯಾಟರಿ ಮತ್ತು ಮೋಟಾರ್ ಮೇಲಿನ ಸ್ಟ್ಯಾಂಡರ್ಡ್ ವಾರಂಟಿಯನ್ನು 2 ವರ್ಷಗಳಿಂದ 5 ವರ್ಷಗಳಿಗೆ ಹೆಚ್ಚಿಸುವ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಂಡಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಪ್ಯೂರ್ ಇವಿ ಕಂಪನಿಯ ಹೇಳಿಕೆಯ ಪ್ರಕಾರ ಕಳೆದ ಒಂದೂವರೆ ವರ್ಷದಲ್ಲಿ ಸುಮಾರು 25 ಸಾವಿರ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿರುವುದಾಗಿ ಹೇಳಿಕೊಂಡಿದ್ದು, ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಬೇಡಿಕೆ ದಾಖಲಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಪ್ಯೂರ್ ಇವಿ ಕಂಪನಿಯು ಇಪ್ಯೂಟೊ 7ಜಿ, ಇಟ್ರಾನ್ ನಿಯೋ, ಇಪ್ಯೂಟೊ ಮತ್ತು ಇಟ್ರಾನ್ಸ್ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಸ್ಕೂಟರ್‌ಗಳ ಸ್ಟ್ಯಾಂಡರ್ಡ್ ವಾರಂಟಿಯನ್ನು ಬ್ಯಾಟರಿ ಮೇಲೆ 5 ವರ್ಷ, ಮೋಟಾರ್ ಮೇಲೆ 3 ವರ್ಷ ಮತ್ತು ಕಂಟ್ರೊಲರ್ ಸಿಸ್ಟಂ ಮೇಲೆ 2 ವರ್ಷ ವಾರಂಟಿ ಹೆಚ್ಚಿಸಿರುವುದು ಕೂಡಾ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಎಲೆಕ್ಟ್ರಿಕ್ ವಾಹನಗಳು ಬಾಳಿಕೆ ಕಡಿಮೆ, ಬ್ಯಾಟರಿ ದಕ್ಷತೆ ಕಡಿಮೆ ಎನ್ನುವ ಗ್ರಾಹಕರ ತಪ್ಪು ತಿಳುವಳಿಕೆಗಳನ್ನು ಹೊಗಲಾಡಿಸಲು ಗರಿಷ್ಠ ವಾರಂಟಿ ಘೋಷಣೆ ಮಾಡಿರುವ ಪ್ಯೂರ್ ಇವಿ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ವಾಹನಗಳ ಬಿಡುಗಡೆ ಸಿದ್ದವಾಗಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಸದ್ಯಕ್ಕೆ ಸೀಮಿತ ಮಾರುಕಟ್ಟೆಯಲ್ಲಿ ಮಾತ್ರ ಮಾರಾಟ ಸೌಲಭ್ಯ ಹೊಂದಿರುವ ಪ್ಯೂರ್ ಇವಿ ಕಂಪನಿಯು ಮುಂದಿನ ಕೆಲವೇ ತಿಂಗಳುಗಳಲ್ಲಿ 20ಕ್ಕೂ ರಾಜ್ಯಗಳಲ್ಲಿ 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯುತ್ತಿದ್ದು, ಹೊಸದಾಗಿ ಬಿಡುಗಡೆಯಾಗಿರುವ ಇಟ್ರಿಸ್ಟ್ 350 ಬೈಕ್ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಮುಂದಿನ ಕೆಲವೇ ತಿಂಗಳಿನಲ್ಲಿ ಹೊಸ ಎಲೆಕ್ಟ್ರಿಕ್ ಬೈಕ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿರುವ ಪ್ಯೂರ್ ಇವಿ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಇಟ್ರಿಸ್ಟ್ 350 ಎನ್ನುವ ಇವಿ ಬೈಕ್ ಬಿಡುಗಡೆ ಮಾಡುತ್ತಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಹೊಸ ಬೈಕ್ ಉತ್ಪಾದನಾ ಆವೃತ್ತಿಯ ಚಿತ್ರವನ್ನು ಹೊರತುಪಡಿಸಿ ಯಾವುದೇ ಹಂಚಿಕೊಳ್ಳದ ಪ್ಯೂರ್ ಕಂಪನಿಯು ಮುಂಬರುವ ಸೆಪ್ಟೆಂಬರ್ಹೊಸ ಇಟ್ರಿಸ್ಟ್ 350 ಇವಿ ಬೈಕ್ ಮಾದರಿಯಲ್ಲಿ 3.5 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಜೋಡಿಸುವ ಸಾಧ್ಯತೆಗಳಿದ್ದು, ಹೊಸ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ 85 ಕಿ.ಮೀ ಟಾಪ್ ಸ್ಪೀಡ್ ಚಾಲನೆಯೊಂದಿಗೆ 125 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ Pure EV ಕಂಪನಿ

ಹೊಸ ಇಟ್ರಿಸ್ಟ್ 350 ಇವಿ ಬೈಕ್ ಮಾದರಿಯಲ್ಲಿ 3.5 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಜೋಡಿಸುವ ಸಾಧ್ಯತೆಗಳಿದ್ದು, ಹೊಸ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ 85 ಕಿ.ಮೀ ಟಾಪ್ ಸ್ಪೀಡ್ ಚಾಲನೆಯೊಂದಿಗೆ 125 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ.

Most Read Articles

Kannada
English summary
Pure ev sold 25000 units electric scooters in 18 months
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X