ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ಬಜಾಜ್ ಕಂಪನಿಯ ಕಾರ್ಯನಿರ್ವಾಹಕೇತರ (ನಾನ್ ಎಕ್ಸಿಕ್ಯೂಟಿವ್) ನಿರ್ದೇಶಕ ಹಾಗೂ ಅಧ್ಯಕ್ಷರಾದ ರಾಹುಲ್ ಬಜಾಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಬಜಾಜ್ ಆಟೋ ಲಿಮಿಟೆಡ್ ಕಂಪನಿ ಏಪ್ರಿಲ್ 29ರಂದು ತಿಳಿಸಿದೆ.

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ರಾಹುಲ್ ಬಜಾಜ್ 1972ರಿಂದ ಕಂಪನಿಯನ್ನು ಮುನ್ನಡೆಸುತ್ತಿದ್ದರು. ಕಳೆದ 50 ವರ್ಷಗಳಿಂದ ಅವರು ಬಜಾಜ್ ಗ್ರೂಪ್ ಆಫ್ ಕಂಪನಿಗಳೊಂದಿಗೆ ಸಂಬಂಧ ಹೊಂದಿದ್ದಾರೆ. ವಯಸ್ಸಾಗುತ್ತಿರುವ ಹಿನ್ನೆಲೆಯಲ್ಲಿ ಈಗ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ಏಪ್ರಿಲ್ 30ರಂದು ರಾಹುಲ್ ಬಜಾಜ್ ಅವರನ್ನು ಬಜಾಜ್ ಕಂಪನಿಯ ಕಾರ್ಯನಿರ್ವಾಹಕೇತರ ನಿರ್ದೇಶಕ ಹಾಗೂ ಅಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸಲಾಗುವುದು ಎಂದು ಬಜಾಜ್ ಆಟೋ ಕಂಪನಿ ತಿಳಿಸಿದೆ.

MOSTREAD: ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ಕಳೆದ 5 ದಶಕಗಳಲ್ಲಿ ಬಜಾಜ್ ಕಂಪನಿಯ ಹಾಗೂ ಬಜಾಜ್ ಗ್ರೂಪ್'ನ ಯಶಸ್ಸಿಗೆ ರಾಹುಲ್ ಬಜಾಜ್ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕಂಪನಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ರಾಹುಲ್ ಬಜಾಜ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈಗ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ನೀರಜ್ ಬಜಾಜ್ ಅವರು ಬಜಾಜ್ ಆಟೋದ ಹೊಸ ಅಧ್ಯಕ್ಷರಾಗಲಿದ್ದಾರೆ.

MOSTREAD: ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ರಾಹುಲ್ ಬಜಾಜ್ 1968ರಲ್ಲಿ ತಮ್ಮ 30ನೇ ವಯಸ್ಸಿನಲ್ಲಿ ಬಜಾಜ್ ಆಟೋ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಅಧಿಕಾರ ವಹಿಸಿಕೊಂಡರು. ಆ ಸಮಯದಲ್ಲಿ ಅವರು ಅತ್ಯಂತ ಕಿರಿಯ ವಯಸ್ಸಿನ ಭಾರತೀಯ ಸಿಇಒ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದರು.

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ರಾಹುಲ್ ಬಜಾಜ್, ಭಾರತದ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಾಜ ಸೇವಕ ಜಮ್ನಾಲಾಲ್ ಬಜಾಜ್ ಅವರ ಮೊಮ್ಮಗ. ರಾಹುಲ್ ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಅಧ್ಯಯನ ಮಾಡಿದ್ದಾರೆ.

MOSTREAD: ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ರಾಹುಲ್ ಬಜಾಜ್ ಮುಂಬೈನ ಕಾನೂನು ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದಾರೆ. ಕಂಪನಿಗಳು ಸರ್ಕಾರದಿಂದ ಉತ್ಪಾದನೆಯನ್ನು ಮುಕ್ತವಾಗಿ ಹಿಡಿಯದಿರುವ ಸಮಯದಲ್ಲಿ ರಾಹುಲ್ ಬಜಾಜ್ ಬಜಾಜ್ ಆಟೋ ಕಂಪನಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದರು.

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ಆ ಸಮಯದಲ್ಲಿ ಬಜಾಜ್ ಚೇತಕ್ ಸ್ಕೂಟರ್ ಬಹಳ ಜನಪ್ರಿಯವಾಗಿತ್ತು. ಎಷ್ಟು ಜನಪ್ರಿಯವಾಗಿತ್ತು ಈ ಸ್ಕೂಟರಿನ ವಿತರಣೆ ಪಡೆಯಲು ಎರಡರಿಂದ ಮೂರು ವರ್ಷಗಳವರೆಗೆ ಕಾಯಬೇಕಾಗಿತ್ತು.

MOSTREAD: ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ಬಜಾಜ್ ಆಟೋ ದೇಶಿಯ ಮಾರುಕಟ್ಟೆಯಲ್ಲಿರುವ ಪ್ರಮುಖ ದ್ವಿಚಕ್ರ ವಾಹನ ತಯಾರಿಕಾ ಕಂಪನಿಗಳಲ್ಲಿ ಒಂದಾಗಿದೆ. ಬಜಾಜ್ ಆಟೋ ಕಂಪನಿಯು ತನ್ನ ತ್ರೈಮಾಸಿಕ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ.

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

ಈ ವರದಿಯ ಪ್ರಕಾರ ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯ ಲಾಭವು ವರ್ಷದಿಂದ ವರ್ಷಕ್ಕೆ 1.7%ನಷ್ಟು ಏರಿಕೆಯಾಗಿ ರೂ.1,332.1 ಕೋಟಿಗಳಿಗೆ ಮುಟ್ಟಿದೆ. 2020ರಲ್ಲಿ ಇದೇ ತ್ರೈಮಾಸಿಕದಲ್ಲಿ ಕಂಪನಿಯ ಲಾಭವು ರೂ.1,310.3 ಕೋಟಿಗಳಾಗಿತ್ತು.

MOSTREAD: ಜೀವದ ಹಂಗು ತೊರೆದು ಮಗುವಿನ ಪ್ರಾಣ ಉಳಿಸಿದ ರಿಯಲ್ ಹೀರೋಗೆ ಬೈಕ್ ಉಡುಗೊರೆ ನೀಡಿದ ಜಾವಾ ಕಂಪನಿ

ಬಜಾಜ್ ಆಟೋ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಬಜಾಜ್

2021ರ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯ ಆದಾಯದಲ್ಲಿ ಏರಿಕೆ ಕಂಡುಬಂದಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯವು26.1%ನಷ್ಟು ಏರಿಕೆ ಕಂಡು ರೂ.8,596.1 ಕೋಟಿಗಳಿಗೆ ತಲುಪಿದೆ. ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ ಈ ಪ್ರಮಾಣವು ರೂ.6,815.9 ಕೋಟಿಗಳಾಗಿತ್ತು.

Most Read Articles

Kannada
English summary
Rahul Bajaj resigns for the post of Bajaj Auto chairman. Read in Kannada.
Story first published: Friday, April 30, 2021, 12:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X