ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಭಾರತದಲ್ಲಿ ಕೇಂದ್ರ ಸರ್ಕಾರ ಹಾಗೂ ಹಲವು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿವೆ. ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಸಬ್ಸಿಡಿ ನೀಡುತ್ತದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಇನ್ನೂ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮ ಎಲೆಕ್ಟ್ರಿಕ್ ವಾಹನ ನೀತಿಯಡಿ ಸಬ್ಸಿಡಿ ನೀಡುತ್ತವೆ. ದೆಹಲಿ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣ ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿರುವ ಎಲೆಕ್ಟ್ರಿಕ್ ವಾಹನ ನೀತಿಗಳನ್ವಯ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಬ್ಸಿಡಿ ನೀಡುತ್ತವೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಈಗ ಈ ಸಾಲಿಗೆ ರಾಜಸ್ಥಾನ ರಾಜ್ಯ ಸರ್ಕಾರವು ಸಹ ಸೇರಿದೆ. ರಾಜಸ್ಥಾನ ರಾಜ್ಯ ಸರ್ಕಾರವು ಹೊಸ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೊಳಿಸಿದೆ. ಈ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಮಾರಾಟವನ್ನು ಹೆಚ್ಚಿಸಲು ಮುಂದಾಗಿದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಇತರ ರಾಜ್ಯಗಳಿಗೆ ಹೋಲಿಸಿದರೆ, ರಾಜಸ್ಥಾನದ ಎಲೆಕ್ಟ್ರಿಕ್ ವಾಹನ ನೀತಿ ವಿಭಿನ್ನವಾಗಿದೆ. ಈ ನೀತಿಯ ಮೂಲಕ ರಾಜಸ್ಥಾನ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಎಸ್‌ಜಿಎಸ್‌ಟಿ (ರಾಜ್ಯ ಸರಕು ಮತ್ತು ಸೇವಾ ತೆರಿಗೆ) ಮೊತ್ತವನ್ನು ಹಿಂದಿರುಗಿಸುತ್ತದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಇದರ ಜೊತೆಗೆ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ ಸಬ್ಸಿಡಿ ನೀಡುತ್ತದೆ. ಈ ಸಬ್ಸಿಡಿ ಮೊತ್ತವು ಬ್ಯಾಟರಿ ಸಾಮರ್ಥ್ಯವನ್ನು ಆಧರಿಸಿರುತ್ತದೆ. 2021 ರ ಏಪ್ರಿಲ್ 1 ರಿಂದ 2022 ರ ಮಾರ್ಚ್ 31 ರವರೆಗೆ ಖರೀದಿಸಲಾಗುವ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ ಬ್ಯಾಟರಿ ಸಾಮರ್ಥ್ಯ ಹಾಗೂ ಕಿ.ವ್ಯಾ ಆಧಾರದ ಮೇಲೆ ರೂ.5,000 ರಿಂದ ರೂ. 20,000 ಗಳವರೆಗೆ ಸಬ್ಸಿಡಿ ನೀಡಲಾಗುತ್ತದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಕನಿಷ್ಠ 2 ಕಿ.ವ್ಯಾ ಬ್ಯಾಟರಿ ಸಾಮರ್ಥ್ಯ ಹೊಂದಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ರೂ. 5,000 ಸಬ್ಸಿಡಿ ನೀಡಲಾಗುತ್ತದೆ. ಗರಿಷ್ಠ 5 ಕಿ.ವ್ಯಾಗಿಂತ ಹೆಚ್ಚಿನ ಬ್ಯಾಟರಿ ಸಾಮರ್ಥ್ಯ ಹೊಂದಿರುವ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ ರೂ. 20,000 ಗಳ ಸಬ್ಸಿಡಿ ನೀಡಲಾಗುತ್ತದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ರಾಜಸ್ಥಾನ ರಾಜ್ಯ ಸರ್ಕಾರ ನೀಡುವ ಈ ಸೌಲಭ್ಯಗಳ ಜೊತೆಗೆ ಜನರು ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯಡಿಯಲ್ಲಿ ನೀಡುವ ಪ್ರಯೋಜನಗಳನ್ನು ಸಹ ಪಡೆಯಬಹುದು. ಈ ಎರಡೂ ಯೋಜನೆಗಳ ಅಡಿಯಲ್ಲಿ ಪ್ರಯೋಜನಗಳು ದೊರೆಯುವುದರಿಂದ ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾಗಲಿದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಎಲೆಕ್ಟ್ರಿಕ್ ವಾಹನಗಳು ದುಬಾರಿ ಬೆಲೆಯನ್ನು ಹೊಂದಿರುವುದರಿಂದ ಜನರು ಅವುಗಳನ್ನು ಖರೀದಿಸಲು ಹಿಂದೇಟು ಹಾಕುತ್ತಾರೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡುತ್ತಿರುವ ಸಬ್ಸಿಡಿಗಳಿಂದ ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾಗಲಿದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾಗುವುದರಿಂದ ಹೆಚ್ಚು ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುವ ನಿರೀಕ್ಷೆಗಳಿವೆ. ಈಗ ಭಾರತದಲ್ಲಿಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

ಪೆಟ್ರೋಲ್, ಡೀಸೆಲ್ ಏರಿಕೆಯಿಂದ ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ. ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಹೊಲಿಸಿದರೆ ಎಲೆಕ್ಟ್ರಿಕ್ ವಾಹನಗಳ ಚಾಲನಾ ವೆಚ್ಚ ತುಂಬಾ ಕಡಿಮೆ. ಈ ಕಾರಣಕ್ಕೆ ಜನರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Rajasthan government announces new electric vehicle policy. Read in Kannada.
Story first published: Tuesday, July 20, 2021, 10:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X