ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಹೊಸ ವಾಹನಗಳ ಉತ್ಪಾದನಾ ವೆಚ್ಚವು ನಿರಂತರವಾಗಿ ಏರಿಕೆಯಾಗುತ್ತಿದ್ದು, ಉತ್ಪಾದನಾ ವೆಚ್ಚ ಹೆಚ್ಚಳ ಪರಿಣಾಮ ವಾಹನಗಳ ಬೆಲೆಗಳಲ್ಲಿ ಸಾಕಷ್ಟು ಏರಿಕೆಯಾಗಿದೆ. ಉತ್ಪಾದನಾ ವೆಚ್ಚ ಹೆಚ್ಚಳ ಪರಿಣಾಮ ಎಲೆಕ್ಟ್ರಿಕ್ ಬೈಕ್ ಉತ್ಪಾದನಾ ಕಂಪನಿಯಾಗಿರುವ ರೀವೋಲ್ಟ್ ಕೂಡಾ ತನ್ನ ಇವಿ ಬೈಕ್ ಬೆಲೆ ಹೆಚ್ಚಿಸಿದ್ದು, ಬ್ಯಾಟರಿ ಮೇಲೆ ವಾರಂಟಿ ಅವಧಿಯಲ್ಲೂ ಕಡಿತಗೊಳಿಸಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಪರಿಣಾಮ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತಮ ಬೇಡಿಕೆ ಸಲ್ಲಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಇವಿ ವಾಹನಗಳ ಖರೀದಿ ಮೇಲೆ ಈ ಹಿಂದೆ ನೀಡಲಾಗುತ್ತಿದ್ದ ಕೆಲವು ಆಫರ್‌ಗಳು ಇದೀಗ ನಿಧಾನವಾಗಿ ಕಡಿತಗೊಳಿಸಲಾಗುತ್ತಿದ್ದು, ರಿವೋಲ್ಟ್ ಕಂಪನಿಯು ಸಹ ಆರಂಭದಲ್ಲಿ ನೀಡಲಾಗಿದ್ದ ಕೆಲವು ಆಫರ್‌ಗಳನ್ನು ಕಡಿತಗೊಳಿಸಿ ಬೆಲೆ ಹೆಚ್ಚಳ ನಿರ್ಧಾರ ಕೈಗೊಂಡಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ರಿವೋಲ್ಟ್ ಕಂಪನಿಯು ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮೂಲಕ ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಇಷ್ಟು ದಿನಗಳ ಕಾಲ ಎಕ್ಸ್‌ಶೋರೂಂ ದರದಂತೆ ರೂ. 1.07 ಲಕ್ಷಕ್ಕೆ ಖರೀದಿಗೆ ಲಭ್ಯವಿದ್ದ ಇವಿ ಬೈಕ್ ಮಾದರಿಯು ಇದೀಗ ರೂ. 1.25 ಲಕ್ಷಕ್ಕೆ ಏರಿಕೆಯಾಗಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಹೊಸ ವಾಹನಗಳ ಉತ್ಪಾದನಾ ವೆಚ್ಚವು ಹೆಚ್ಚುತ್ತಿರುವ ಕಾರಣಕ್ಕೆ ಆರ್‌ವಿ400 ಬೈಕ್ ಬೆಲೆಯಲ್ಲಿ ಎಕ್ಸ್‌ಶೋರೂಂ ದರದಂತೆ ರೂ. 18 ಸಾವಿರ ಹೆಚ್ಚಳ ಮಾಡಲಾಗಿದ್ದು, ಆನ್ ರೋಡ್ ದರ ಪ್ರಕಾರ ಇದು ರೂ. 1.40 ಲಕ್ಷದಷ್ಟು ದುಬಾರಿಯಾಗಿರಲಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಇದರ ಜೊತೆಗೆ ಕಂಪನಿಯು ಹೊಸ ಬೈಕಿನ ಬ್ಯಾಟರಿ ಮೇಲೆ ನೀಡಲಾಗುತ್ತಿದ್ದ 8 ವರ್ಷ ಅಥವಾ 1.50 ಲಕ್ಷ ಕಿ.ಮೀ ಮೇಲೆ ವಾರಂಟಿ ಅವಧಿಯನ್ನು ಇದೀಗ 6 ವರ್ಷ ಅಥವಾ 1 ಲಕ್ಷ ಕಿ.ಮೀ ಗೆ ವಾರಂಟಿ ಅವಧಿ ಇಳಿಕೆ ಮಾಡಿದ್ದು, ಬೇಡಿಕೆ ಹೆಚ್ಚಿದ್ದಂತೆ ಕೆಲವು ವಿನಾಯ್ತಿಗಳನ್ನು ಹಿಂಪಡೆಯುತ್ತಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಇನ್ನು ರಿವೋಲ್ಟ್ ಮೋಟಾರ್ಸ್ ಕಂಪನಿಯು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮಾರಾಟ ಮಳಿಗೆಗಳನ್ನು ಪ್ರಮುಖ ನಗರಗಳಿಗೆ ವಿಸ್ತರಿಸುತ್ತಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ರಿವೋಲ್ಟ್ ಕಂಪನಿಯು ಕಳೆದ ತಿಂಗಳ ಹಿಂದಷ್ಟೇ ದೇಶದ ಪ್ರಮುಖ 70 ನಗರಗಳಲ್ಲಿ ಹೊಸದಾಗಿ ವಾಹನ ಮಾರಾಟ ಆರಂಭಿಸುವುದಾಗಿ ಘೋಷಣೆ ಮಾಡಿದ್ದು, ಹೊಸ ಯೋಜನೆಯ ಭಾಗವಾಗಿ ಕಂಪನಿಯು ಇವಿ ಬೈಕ್ ಶೋರೂಂಗಳನ್ನು ವಿಸ್ತರಿಸುತ್ತಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮಾರಾಟ ಪ್ರಕ್ರಿಯೆಯನ್ನು ವಿಸ್ತರಿಸುತ್ತಿರುವ ರಿವೋಲ್ಟ್ ಕಂಪನಿಯು ಈಗಾಗಲೇ ಹೊಸ ಯುನಿಟ್‌ಗಳಿಗಾಗಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಬಜೆಟ್ ಬೆಲೆಯ ಅತ್ಯುತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ಬೈಕ್‌ ಮಾದರಿಗಳನ್ನು ಮಾರಾಟ ಮಾಡುತ್ತಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಅಕ್ಟೋಬರ್ ಅವಧಿಯಲ್ಲಿ ನಮ್ಮ ಬೆಂಗಳೂರಿನಲ್ಲಿ ಮೊದಲ ಇವಿ ಬೈಕ್ ಶೋರೂಂ ಆರಂಭಿಸಿದ ನಂತರ ಗುಜರಾತಿನ ಸೂರತ್ ನಗರದಲ್ಲೂ ಪರಿಸರ ಸ್ನೇಹಿ ವಾಹನ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಿದ್ದು, ಶೀಘ್ರದಲ್ಲೇ ಮತ್ತೆ ಐದು ರಾಜ್ಯಗಳಲ್ಲಿ ಇವಿ ಬೈಕ್ ಮಾರಾಟ ಆರಂಭಿಸುತ್ತಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಅಕ್ಟೋಬರ್ 21ರಂದು 70 ನಗರಗಳಿಗೆ ಬುಕ್ಕಿಂಗ್ ಪ್ರಾರಂಭಿಸಿರುವ ರಿವೋಲ್ಟ್ ಕಂಪನಿಯು ಈ ಹೊಸ ಬ್ಯಾಚ್‌ನ ವಿತರಣೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಪ್ರಾರಂಭಿಸಬಹುದಾಗಿದ್ದು, ರಿವೋಲ್ಟ್ ಕಂಪನಿಯು ಹೊಸ ಬೈಕ್ ಖರೀದಿಗಾಗಿ ರೂ. 19,999 ಮುಂಗಡ ಹಣ ನಿಗದಿಪಡಿಸಿದೆ. ಆರಂಭದಲ್ಲಿ ಆರ್‌ವಿ300 ಮತ್ತು ಆರ್‌ವಿ400 ಮಾದರಿಗಳನ್ನು ಮಾರಾಟ ಮಾಡುತ್ತಿದ್ದ ಕಂಪನಿಯು ಗ್ರಾಹಕರ ಬೇಡಿಕೆಯನ್ನು ಆಧರಿಸಿ ಆರ್‌ವಿ300 ಮಾದರಿಯನ್ನು ಸ್ಥಗಿತಗೊಳಿಸಿ ಆರ್‌ವಿ400 ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಹೊಸ ಆರ್‌ವಿ400 ಮಾದರಿಯು ರೆಬಲ್ ರೆಡ್, ಮಿಸ್ಟ್ ಗ್ರೆ ಮತ್ತು ಕಾಸ್ಮಿಕ್ ಬ್ಲ್ಯಾಕ್ ಬಣ್ಣಗಳ ಆಯ್ಕೆ ಹೊಂದಿದ್ದು, ಹೊಸ ಬೈಕಿನಲ್ಲಿ 3.24kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 3kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಲಾಗಿದೆ. ಆರ್‌ವಿ400 ಮಾದರಿಯು ಪ್ರತಿ ಗಂಟೆಗೆ 85 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 156ಕಿ.ಮಿ ಮೈಲೇಜ್ ನೀಡಲಿದ್ದು, ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಈ ಬೈಕಿನಲ್ಲಿವೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಸಿಟಿ, ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ಹೊಸ ಇವಿ ಬೈಕ್‌ನಲ್ಲಿ ನೀಡಲಾಗಿದ್ದು, ಜೀಯೋ ಫೆನ್ಸಿಂಗ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟರ್ನ್ ಬೈ ಟರ್ನ್ ನೆವಿಗೆಷನ್, ರಿಯಲ್ ಟೈಮ್ ವೆಹಿಕಲ್ ಮತ್ತು ಬ್ಯಾಟರಿ ನಿರ್ವಹಣಾ ಸೌಲಭ್ಯಗಳು ಕೂಡಾ ಪ್ರಮುಖವಾಗಿವೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಬೈಕಿನ ತಾಂತ್ರಿಕ ಸೌಲಭ್ಯಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಆ್ಯಪ್ ಕೂಡಾ ನೀಡಲಾಗಿದ್ದು, ಆ್ಯಪ್ ಮೂಲಕವೇ ಹೊಸ ಬೈಕಿನ ವೇಗ, ಶಬ್ದ, ಬ್ಯಾಟರಿ ಲಭ್ಯತೆ ಸೇರಿದಂತೆ ಸಂಪೂರ್ಣ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ಇದಲ್ಲದೆ ರಿವೋಲ್ಟ್ ಕಂಪನಿಯು ಹೊಸ ಬೈಕಿನಲ್ಲಿ ಮೊದಲ ಬಾರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಅಳವಡಿಸಿದ್ದು, ಹೊಸ ಕೀ ಲೆಸ್ ಎಂಟ್ರಿ ಫೀಚರ್ಸ್ ಮೂಲಕ ಬೈಕ್ ಮಾಲೀಕರು ಕೀ ಇಲ್ಲದೆಯೇ ರಿವೋಲ್ಟ್ ಮೊಬೈಲ್ ಅಪ್ಲಿಕೇಷಶನ್‌ನಲ್ಲಿ 'ಸ್ವೈಪ್ ಟು ಸ್ಮಾರ್ಟ್' ಬಳಸಿ ಬೈಕ್ ಚಾಲನೆ ಮಾಡಬಹುದಾಗಿದೆ.

ದುಬಾರಿಯಾದ ಉತ್ಪಾದನಾ ವೆಚ್ಚ: ಎಲೆಕ್ಟ್ರಿಕ್ ಬೈಕ್ ಬೆಲೆ ಹೆಚ್ಚಿಸಿದ ರಿವೋಲ್ಟ್..

ರಿವೋಲ್ಟ್ ಮೊಬೈಲ್ ಅಪ್ಲಿಕೇಷಶನ್ ಮೂಲಕ 'ಸ್ವೈಪ್ ಟು ಸ್ಮಾರ್ಟ್' ಮಾತ್ರವಲ್ಲದೇ ಲಾಕ್/ಅನ್‌ಲಾಕ್, ಬ್ಯಾಟರಿ ಲಭ್ಯತೆ, ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ ಸೇರಿದಂತೆ ಹಲವು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.

Most Read Articles

Kannada
English summary
Revolt motors increased rv 400 ev bike price details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X