Just In
- 8 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 8 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 10 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 10 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇವಿ ಬೈಕ್ಗಳಿಗೆ ಹೆಚ್ಚಿದ ಬೇಡಿಕೆ- 20ನೇ ಮಾರಾಟ ಮಳಿಗೆಗೆ ಚಾಲನೆ ನೀಡಿದ ರಿವೋಲ್ಟ್..
ರಿವೋಲ್ಟ್ ಮೋಟಾರ್ಸ್ ಕಂಪನಿಯು ಇವಿ ಬೈಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ತನ್ನ ಮಾರಾಟ ಮಳಿಗೆಗಳನ್ನು ಹೆಚ್ಚಿಸುತ್ತಿದೆ. ರಿವೋಲ್ಟ್ ಕಂಪನಿಯು ಇದುವರೆಗೆ ದೇಶಾದ್ಯಂತ 20 ಮಾರಾಟ ಮಳಿಗೆಗಳ ಸ್ಥಾಪನೆ ಗುರಿಸಾಧಿಸಿದ್ದು, ಮುಂಬರುವ ದಿನಗಳಲ್ಲಿ ದೇಶಾದ್ಯಂತ ಮತ್ತಷ್ಟು ಮಾರಾಟ ಮಳಿಗೆ ತೆರೆಯಲಿದೆ.
ಎಲೆಕ್ಟ್ರಿಕ್ ಮೋಟಾರ್ಸೈಕಲ್ ವಿಭಾಗದಲ್ಲಿ ಸದ್ಯ ರಿವೋಲ್ಟ್ ಮೋಟಾರ್ಸ್(Revolt Motors) ಕಂಪನಿಯು ಅಗ್ರಸ್ಥಾನದಲ್ಲಿದ್ದು, ಕಂಪನಿಯು ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಮಾರಾಟ ಮಳಿಗೆಗಳ ಸಂಖ್ಯೆಯನ್ನು ಹೆಚ್ಚಿಸುತ್ತಿರುವುದು ಮತ್ತಷ್ಟು ಬೇಡಿಕೆ ಪಡೆದುಕೊಳ್ಳಲು ಸಹಕಾರಿಯಾಗಿದೆ. ಕಂಪನಿಯು ಸದ್ಯ ದೇಶದ ಪ್ರಮುಖ ಮೆಟ್ರೊ ನಗರಗಳಲ್ಲಿ ಇವಿ ಬೈಕ್ ಮಾರಾಟ ಸೌಲಭ್ಯವನ್ನು ತೆರೆಯುತ್ತಿದ್ದು, ಇತ್ತೀಚೆಗೆ ಕಂಪನಿಯು ವಿಜಯವಾಡದಲ್ಲಿ ತನ್ನ 20ನೇ ಮಾರಾಟ ಮಳಿಗೆಯನ್ನು ಅಧಿಕೃತವಾಗಿ ಆರಂಭಿಸಿದೆ.
ರಿವೋಲ್ಟ್ ಕಂಪನಿಯು 2022ರ ಕೊನೆಯಲ್ಲಿ ಒಟ್ಟು 59 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಬೆಂಗಳೂರಿನಲ್ಲೂ ರಿವೋಲ್ಟ್ ಹೊಸ ಶೋರೂಂ ಆರಂಭಗೊಂಡಿದೆ.
ಕಂಪನಿಯು ಆರಂಭದಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಮಳಿಗೆಗಳನ್ನು ತೆರೆದಿದ್ದು, ಇದೀಗ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಾರಾಟ ಸಂಖ್ಯೆಯನ್ನು ಹೆಚ್ಚಿಸುತ್ತಿದೆ. ಬಜೆಟ್ ಬೆಲೆಯೊಂದಿಗೆ ಅತ್ಯುತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ಬೈಕ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ರಿವೋಲ್ಟ್ ಕಂಪನಿಯು ಆರ್ವಿ400 ಇವಿ ಬೈಕ್ ಮಾದರಿಯನ್ನು ಮಾರಾಟ ಮಾಡುತ್ತಿದ್ದು, ಹೊಸ ಮಾರಾಟ ಮಳಿಗೆಗಳೊಂದಿಗೆ ಕಂಪನಿಯು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.
ಫೇಮ್ 2 ಯೋಜನೆಯಡಿ ಗರಿಷ್ಠ ಸಬ್ಸಡಿಯೊಂದಿಗೆ ರಿವೋಲ್ಟ್ ಬೈಕ್ ಮಾದರಿಗಳು ಮಾರಾಟಗೊಳ್ಳುತ್ತಿದ್ದು, ಆರಂಭದಲ್ಲಿ ಆರ್ವಿ300 ಮತ್ತು ಆರ್ವಿ400 ಮಾದರಿಗಳನ್ನು ಮಾರಾಟ ಮಾಡುತ್ತಿದ್ದ ಕಂಪನಿಯು ಗ್ರಾಹಕರ ಬೇಡಿಕೆಯನ್ನು ಆಧರಿಸಿ ಆರ್ವಿ300 ಮಾದರಿಯನ್ನು ಸ್ಥಗಿತಗೊಳಿಸಿ ಆರ್ವಿ400 ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿದೆ.
ಕೇಂದ್ರ ಸರ್ಕಾರ ಫೇಮ್ 2 ಸಬ್ಸಡಿ ಒಳಗೊಂಡು ಹೊಸ ಬೈಕ್ ಮಾದರಿಯು ರೂ. 1.25 ಲಕ್ಷ ಬೆಲೆ ಹೊಂದಿದ್ದು, ಕೇಂದ್ರದ ಫೇಮ್ 2 ಸಬ್ಸಡಿ ಜೊತೆಗೆ ಕೆಲವು ರಾಜ್ಯಗಳು ತಮ್ಮ ರಾಜ್ಯದ ವಾಹನ ಖರೀದಿದಾರರಿಗಾಗಿ ಹೆಚ್ಚಿನ ಮಟ್ಟದ ಸಬ್ಸಡಿ ಒದಗಿಸುತ್ತವೆ.
ಹೊಸ ಆರ್ವಿ400 ಮಾದರಿಯು ರೆಬಲ್ ರೆಡ್, ಮಿಸ್ಟ್ ಗ್ರೆ ಮತ್ತು ಕಾಸ್ಮಿಕ್ ಬ್ಲ್ಯಾಕ್ ಬಣ್ಣಗಳ ಆಯ್ಕೆ ಹೊಂದಿದ್ದು, ಹೊಸ ಬೈಕಿನಲ್ಲಿ 3.24kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 3kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಲಾಗಿದೆ.
ಆರ್ವಿ400 ಮಾದರಿಯು ಪ್ರತಿ ಗಂಟೆಗೆ 85 ಕಿ.ಮಿ ಟಾಪ್ ಸ್ಪೀಡ್ನೊಂದಿಗೆ ಸಿಂಗಲ್ ಚಾರ್ಜ್ನಲ್ಲಿ ಗರಿಷ್ಠ 156ಕಿ.ಮಿ ಮೈಲೇಜ್ ನೀಡಲಿದ್ದು, ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಈ ಬೈಕಿನಲ್ಲಿವೆ.
ಸಿಟಿ, ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್ಗಳನ್ನು ಹೊಸ ಇವಿ ಬೈಕ್ನಲ್ಲಿ ನೀಡಲಾಗಿದ್ದು, ಜೀಯೋ ಫೆನ್ಸಿಂಗ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟರ್ನ್ ಬೈ ಟರ್ನ್ ನೆವಿಗೆಷನ್, ರಿಯಲ್ ಟೈಮ್ ವೆಹಿಕಲ್ ಮತ್ತು ಬ್ಯಾಟರಿ ನಿರ್ವಹಣಾ ಸೌಲಭ್ಯಗಳು ಕೂಡಾ ಪ್ರಮುಖವಾಗಿವೆ.
ಬೈಕಿನ ತಾಂತ್ರಿಕ ಸೌಲಭ್ಯಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಆ್ಯಪ್ ಕೂಡಾ ನೀಡಲಾಗಿದ್ದು, ಆ್ಯಪ್ ಮೂಲಕವೇ ಹೊಸ ಬೈಕಿನ ವೇಗ, ಶಬ್ದ, ಬ್ಯಾಟರಿ ಲಭ್ಯತೆ ಸೇರಿದಂತೆ ಸಂಪೂರ್ಣ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ.
ಇದಲ್ಲದೆ ರಿವೋಲ್ಟ್ ಕಂಪನಿಯು ಹೊಸ ಬೈಕಿನಲ್ಲಿ ಮೊದಲ ಬಾರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಅಳವಡಿಸಿದ್ದು, ಹೊಸ ಕೀ ಲೆಸ್ ಎಂಟ್ರಿ ಫೀಚರ್ಸ್ ಮೂಲಕ ಬೈಕ್ ಮಾಲೀಕರು ಕೀ ಇಲ್ಲದೆಯೇ ರಿವೋಲ್ಟ್ ಮೊಬೈಲ್ ಅಪ್ಲಿಕೇಷಶನ್ನಲ್ಲಿ 'ಸ್ವೈಪ್ ಟು ಸ್ಮಾರ್ಟ್' ಬಳಸಿ ಬೈಕ್ ಚಾಲನೆ ಮಾಡಬಹುದಾಗಿದೆ.
ರಿವೋಲ್ಟ್ ಮೊಬೈಲ್ ಅಪ್ಲಿಕೇಷಶನ್ ಮೂಲಕ 'ಸ್ವೈಪ್ ಟು ಸ್ಮಾರ್ಟ್' ಮಾತ್ರವಲ್ಲದೇ ಲಾಕ್/ಅನ್ಲಾಕ್, ಬ್ಯಾಟರಿ ಲಭ್ಯತೆ, ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ ಸೇರಿದಂತೆ ಹಲವು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಪರಿಣಾಮ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತಮ ಬೇಡಿಕೆ ಸಲ್ಲಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಇವಿ ವಾಹನಗಳ ಖರೀದಿ ಮೇಲೆ ಈ ಹಿಂದೆ ನೀಡಲಾಗುತ್ತಿದ್ದ ಕೆಲವು ಆಫರ್ಗಳು ಇದೀಗ ನಿಧಾನವಾಗಿ ಕಡಿತಗೊಳಿಸಲಾಗುತ್ತಿದ್ದು, ರಿವೋಲ್ಟ್ ಕಂಪನಿಯು ಸಹ ಆರಂಭದಲ್ಲಿ ನೀಡಲಾಗಿದ್ದ ಕೆಲವು ಆಫರ್ಗಳನ್ನು ಕಡಿತಗೊಳಿಸಿ ಬೆಲೆ ಹೆಚ್ಚಳ ನಿರ್ಧಾರ ಕೈಗೊಂಡಿದೆ.
ಜೊತೆಗೆ ಕಂಪನಿಯು ಹೊಸ ಬೈಕಿನ ಬ್ಯಾಟರಿ ಮೇಲೆ ನೀಡಲಾಗುತ್ತಿದ್ದ 8 ವರ್ಷ ಅಥವಾ 1.50 ಲಕ್ಷ ಕಿ.ಮೀ ಮೇಲೆ ವಾರಂಟಿ ಅವಧಿಯನ್ನು ಇದೀಗ 6 ವರ್ಷ ಅಥವಾ 1 ಲಕ್ಷ ಕಿ.ಮೀ ಗೆ ವಾರಂಟಿ ಅವಧಿ ಇಳಿಕೆ ಮಾಡಿದ್ದು, ಬೇಡಿಕೆ ಹೆಚ್ಚಿದ್ದಂತೆ ಕೆಲವು ವಿನಾಯ್ತಿಗಳನ್ನು ಹಿಂಪಡೆದಿದೆ.