ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ನೀಡಿದ ರಿವೋಲ್ಟ್

ಎಲೆಕ್ಟ್ರಿಕ್ ಬೈಕ್ ಮಾರಾಟದಲ್ಲಿ ಸದ್ಯ ಮುಂಚೂಣಿಯಲ್ಲಿರುವ ರಿವೋಲ್ಟ್ ಕಂಪನಿಯು ತನ್ನ ಜನಪ್ರಿಯ ಆರ್‌ವಿ400 ಇವಿ ಬೈಕ್ ಮಾದರಿಗಾಗಿ ಹೊಸ ಫೀಚರ್ಸ್‌‌ಗಗಗಳನ್ನು ಉನ್ನತೀಕರಿಸುತ್ತಿದ್ದು, ಹೊಸ ಫೀಚರ್ಸ್ ಹೊಂದಿರುವ ಆರ್‌ವಿ400 ಬೈಕ್ ಶೀಘ್ರದಲ್ಲೇ ಗ್ರಾಹಕರ ಕೈಸೇರಲಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ಉತ್ಪಾದನಾ ಸಾಮರ್ಥ್ಯದ ಮೇಲೆ ಎಲೆಕ್ಟ್ರಿಕ್ ಬೈಕ್ ವಿತರಣೆಯನ್ನು ಹಂತ-ಹಂತವಾಗಿ ಹೆಚ್ಚಿಸುತ್ತಿರುವ ರಿವೋಲ್ಟ್ ಕಂಪನಿಯು ಕಳೆದ ಜೂನ್‌ ಮತ್ತು ಜುಲೈ ಮಧ್ಯಂತರದಲ್ಲಿ ಸುಮಾರು 10 ಸಾವಿರ ಇವಿ ಬೈಕ್‌ಗಳಿಗೆ ಬುಕ್ಕಿಂಗ್ ಸ್ವಿಕರಿಸಿದ್ದು, ಇದೀಗ ಹೊಸ ಸ್ಟಾಕ್ ವಿತರಣೆಗೆ ಸಿದ್ದವಾಗುತ್ತಿರುವ ರಿವೋಲ್ಟ್ ಕಂಪನಿಯು ಹೊಸ ಬೈಕಿನಲ್ಲಿ ಮೊದಲ ಬಾರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಅಳವಡಿಸಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ಹೊಸ ಕೀ ಲೆಸ್ ಎಂಟ್ರಿ ಫೀಚರ್ಸ್ ಮೂಲಕ ಬೈಕ್ ಮಾಲೀಕರು ಕೀ ಇಲ್ಲದೆಯೇ ರಿವೋಲ್ಟ್ ಮೊಬೈಲ್ ಅಪ್ಲಿಕೇಷಶನ್‌ನಲ್ಲಿ 'ಸ್ವೈಪ್ ಟು ಸ್ಮಾರ್ಟ್' ಬಳಸಿ ಬೈಕ್ ಚಾಲನೆ ಮಾಡಬಹುದಾಗಿದ್ದು, ಹೊಸ ಫೀಚರ್ಸ್ ಹೊಂದಿರುವ ಆರ್‌ವಿ400 ಬೈಕ್ ಮುಂದಿನ ತಿಂಗಳು ಸೆಪ್ಟೆಂಬರ್‌ನಿಂದ ವಿತರಣೆ ಆರಂಭವಾಗಲಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ರಿವೋಲ್ಟ್ ಮೊಬೈಲ್ ಅಪ್ಲಿಕೇಷಶನ್ ಮೂಲಕ 'ಸ್ವೈಪ್ ಟು ಸ್ಮಾರ್ಟ್' ಮಾತ್ರವಲ್ಲದೇ ಲಾಕ್/ಅನ್‌ಲಾಕ್, ಬ್ಯಾಟರಿ ಲಭ್ಯತೆ, ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ ಸೇರಿದಂತೆ ಹಲವು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ಎಲೆಕ್ಟ್ರಿಕ್ ಬೈಕ್ ಮಾರಾಟದಲ್ಲಿ ರಿವೋಲ್ಟ್ ಕಂಪನಿಯು ಹಲವು ಹೊಸ ದಾಖಲೆಗಳಿಗೆ ಕಾರಣವಾಗುತ್ತಿದ್ದು, ಇತ್ತೀಚೆಗೆ ಕಂಪನಿಯು ತನ್ನ ಆರ್‌ವಿ400 ಬೈಕ್ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ಮೂಲಕ ಆಟೋ ಉದ್ಯಮದಲ್ಲಿ ಅಚ್ಚರಿ ಮೂಡಿಸಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿದಾರರು ಇವಿ ವಾಹನಗಳತ್ತ ಆಕರ್ಷಿತರಾಗುತ್ತಿದ್ದು, ಹೊಸ ತಂತ್ರಜ್ಞಾನ ಪ್ರೇರಿತ ರಿವೋಲ್ಟ್ ಇವಿ ಬೈಕ್‌ಗಳು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ರಿವೋಲ್ಟ್ ಕಂಪನಿಯು ಉತ್ಪಾದನಾ ಸಾಮರ್ಥ್ಯದ ಆಧಾರದ ಮೇಲೆ ಹೊಸದಾಗಿ ಸಾವಿರಾರು ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸದಾಗಿ ಬುಕ್ಕಿಂಗ್ ಮಾಡಲಾದ ಗ್ರಾಹಕರಿಗೆ ಮುಂದಿನ ತಿಂಗಳು ಆರಂಭದಿಂದ ವಿತರಣೆ ಆರಂಭಿಸುವುದಾಗಿ ಹೇಳಿಕೊಂಡಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ಕೇಂದ್ರ ಸರ್ಕಾರದ ಫೇಮ್ 2 ತಿದ್ದುಪಡಿಯ ಪರಿಣಾಮ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಹೆಚ್ಚುವರಿಯಾಗಿ ಇದೀಗ ರೂ. 10 ಸಾವಿರದಿಂದ ರೂ.30 ಸಾವಿರ ತನಕ ಹೆಚ್ಚುವರಿ ಸಬ್ಸಡಿ ದೊರೆಯುತ್ತಿದ್ದು, ಹೊಸ ಸಬ್ಸಡಿ ತಿದ್ದುಪಡಿ ಘೋಷಣೆಯ ನಂತರ ರಿವೋಲ್ಟ್ ಬೈಕ್ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗಿರುವುಗದರಿಂದ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ಕೇಂದ್ರ ಸರ್ಕಾರದ ಹೊಸ ಸಬ್ಸಡಿ ನಂತರ ರಿವೋಲ್ಟ್ ಕಂಪನಿಯು ತನ್ನ ಆರ್‌ವಿ400 ಬೆಲೆಯಲ್ಲಿ ಶೇ.20ರಷ್ಟು ಇಳಿಕೆ ಮಾಡಿದ್ದು, ರೂ. 1,18,999 ಬೆಲೆ ಹೊಂದಿದ್ದ ಬೈಕ್ ಇದೀಗ ಹೊಸ ಸಬ್ಸಡಿ ದರ ಸೇರಿದ ನಂತರ ಗ್ರಾಹಕರಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 90,799 ಕ್ಕೆ ಖರೀದಿಗೆ ಲಭ್ಯವಾಗಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ಪುಣೆ ಮೂಲದ ರಿವೋಲ್ಟ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಎರಡು ಆರ್‌ವಿ300 ಮತ್ತು ಆರ್‌ವಿ400 ಎನ್ನುವ ಎರಡು ಎಲೆಕ್ಟ್ರಿಕ್ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದು, ಕೇಂದ್ರ ಸರ್ಕಾರದ ಹೊಸ ಸಬ್ಸಡಿ ಯೋಜನೆಯೆಂತೆ ಸದ್ಯಕ್ಕೆ ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಬೆಲೆಯಲ್ಲಿ ರೂ. 28,200 ಇಳಿಕೆ ಮಾಡಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ಆರ್‌ವಿ400 ಬೈಕಿನಲ್ಲಿ 3.24kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 3kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 85 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 156ಕಿ.ಮಿ ಮೈಲೇಜ್ ನೀಡುತ್ತದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ರಿವೋಲ್ಟ್ ಆರ್‌ವಿ300 ಬೈಕಿನಲ್ಲಿ 2.7kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 1.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 65 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 180 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ರಿವೋಲ್ಟ್ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ 2019ರಲ್ಲಿ ಮೊದಲ ಬಾರಿಗೆ ಆರ್‌ವಿ400 ಮತ್ತು ಆರ್‌ವಿ300 ಬೈಕ್ ಮಾದರಿಗಳನ್ನು ಬಿಡುಗಡೆ ಮಾಡಿತ್ತು. ಹೊಸ ಬೈಕ್‌ಗಳಲ್ಲಿ ಆರ್‌ವಿ400 ಮಾದರಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಗ್ರಾಹಕರನ್ನು ಸೆಳೆಯುವಲ್ಲಿ ತುಸು ಹಿನ್ನಡೆ ಅನುಭವಿಸಿದ್ದನ ಆರ್‌ವಿ300 ಬೈಕ್ ಮಾದರಿಯನ್ನು ಸ್ಥಗಿತಗೊಳಿಸಿ ಅದೇ ಬೈಕ್ ಮಾದರಿಯನ್ನೇ ಬಿಟುಬಿ ವಾಣಿಜ್ಯ ಬೈಕ್ ಮಾದರಿಯನ್ನಾಗಿ ಮರುಬಿಡುಗಡೆ ಮಾಡಲು ನಿರ್ಧರಿಸಿದೆ.

ಆರ್‌ವಿ400 ಎಲೆಕ್ಟ್ರಿಕ್ ಬೈಕ್ ಮಾದರಿಗೆ ಕೀ ಲೆಸ್ ಎಂಟ್ರಿ ಫೀಚರ್ಸ್ ಜೋಡಣೆ ಮಾಡಿದ ರಿವೋಲ್ಟ್

ಗ್ರಾಹಕರು ಆರ್300 ಮಾದರಿಗಿಂತಲೂ ಆರ್‌ವಿ400 ಮಾದರಿಯ ಬೆಲೆ ಹೆಚ್ಚಳವಿದ್ದರೂ ಕೂಡಾ ಆರ್‌ವಿ400 ಖರೀದಿಗೆ ಹೆಚ್ಚಿನ ಬೇಡಕೆ ಸಲ್ಲಿಸುತ್ತಿದ್ದು, ಆರ್‌ವಿ300 ಮಾದರಿಯ ಬೇಡಿಕೆಯನ್ನು ಸುಧಾರಿಸಲು ಹೊಸ ಯೋಜನೆಯೊಂದಿಗೆ ಬದಲಿ ಹೆಸರಿನೊಂದಿಗೆ ಮರುಬಿಡುಗಡೆಗೆ ಸಿದ್ದವಾಗಿದೆ.

More from DriveSpark

Article Published On: Friday, August 13, 2021, 11:35 [IST]
English summary
Revolt rv400 keyless entry swipe to start feature added details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+