ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ರಾಯಲ್ ಎನ್‌ಫೀಲ್ಡ್ ಭಾರತದಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಕಳೆದ ತಿಂಗಳ ಮಾರಾಟದಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳು ಉತ್ತಮ ಬೆಳವಣಿಗೆಯನ್ನು ಕಂಡಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಎಂಬ ಟ್ವಿನ್ ಬೈಕ್‌ಗಳ ಒಟ್ಟು 2,154 ಯುನಿಟ್‌ಗಳನ್ನು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ನವೆಂಬರ್‌ ತಿಂಗಳಿನಲ್ಲಿ ಇದರ 1,109 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.94.23 ರಷ್ಟು ಹೆಚ್ಚಿಸಲಾಗಿದೆ. ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಟ್ವಿನ್ ಬೈಕ್‌ಗಳ ಒಟ್ಟು 1,236 ಯೂನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.74.27 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ರಾಯಲ್ ಎನ್‌ಫೀಲ್ಡ್ ಕಂಪನಿಯು ಈ ಟ್ವಿನ್ ಬೈಕ್‌ಗಳನ್ನು ಭಾರತದಲ್ಲಿ ಮೊದಲು ಬಿಡುಗಡೆಗೊಳಿಸಲಾಯಿತು. ಈ ವರ್ಷದ ಮಾರ್ಚ್ ತಿಂಗಳಿನಲ್ಲಿ 2021ರ ಮಾದರಿಯಾಗಿ ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಿತ್ತು. 2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿತ್ತು.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳಲ್ಲಿ ಹಿಂದಿನ ಮಾದರಿಗಳಲ್ಲಿ ಇದ್ದ ಅದೇ, 649ಸಿಸಿ ಪ್ಯಾರಲಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 7,250 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 5,250 ಆರ್‌ಪಿಎಂನಲ್ಲಿ 52 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ಈ ಎರಡು ಟ್ವಿನ್ ಬೈಕ್‌ಗಳ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್-ಗ್ಯಾಸ್ ಚಾರ್ಜ್ಡ್ ಶಾಕ್ ಗಳು 5-ಹಂತದ ಹೊಂದಾಣಿಕೆಯೊಂದಿಗೆ ಪ್ರಿ-ಲೋಡ್ ಡ್ಯಾಂಪಿಂಗ್‌ಗಾಗಿ ನಿರ್ವಹಿಸುತ್ತವೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ಇನ್ನು ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ಈ ಬೈಕ್‌ಗಳಲ್ಲಿ 18 ಇಂಚಿನ ಸ್ಪೋಕ್ಡ್ ವ್ಹೀಲ್ ಗಳನ್ನು ಹೊಂದಿವೆ. ಎರಡು ಬೈಕ್‌ಗಳ ವಿನ್ಯಾಸವು ಬದಲಾಗದೆ ಉಳಿದಿದೆ. ಇದು ಒಂದೇ ಮಾದರಿಯ ಹೆಡ್‌ಲ್ಯಾಂಪ್‌ಗಳು, ಟೈಲ್‌ಲ್ಯಾಂಪ್‌ಗಳು, ಟ್ವಿನ್ ಎಕ್ಸಾಸ್ಟ್ ಸೆಟಪ್, ಸಿಂಗಲ್-ಪೀಸ್ ಫ್ಲಾಟ್ ಸೀಟ್ ಮತ್ತು ಹೆಚ್ಚಿನದನ್ನು ಒಳಗೊಂಡಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ಹೊಸ ಇಂಟರ್‍‍ಸೆಪ್ಟರ್ 650 ಬೈಕ್ ಉತ್ತಮ ಸೀಟಿಂಗ್ ಪೊಷಿಷನ್ ಅನ್ನು ಹೊಂದಿದೆ. ಇನ್ನು ಕಾಂಟಿನೆಂಟಲ್ ಜಿಟಿ 650 ಅದರ ಉದ್ದವಾದ ಟ್ಯಾಂಕ್ ವಿನ್ಯಾಸ ಮತ್ತು ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳೊಂದಿಗೆ ಹೆಚ್ಚು ಅಗ್ರೇಸಿವ್ ಲುಕ್ ನಿಂದ ಕೂಡಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ನೀಡಲಾಗಿಲ್ಲ. ಆದರೆ ಕಸ್ಟಮೈಸ್ ಮಾಡಲು ಒಂದು ಆಯ್ಕೆಯನ್ನು ಸಹ ಕಂಪನಿಯು ಒದಗಿಸಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು 2021ರ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 44,830 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 59,084 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.24 ರಷ್ಟು ಕುಸಿತವನ್ನು ಕಂಡಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ಇನ್ನು ಕಳೆದ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 6,824 ಯುನಿಟ್‌ಗಳನ್ನು ರಫ್ತು ಮಾಡಿದೆ. ಇನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 4,698 ಯುನಿಟ್‌ಗಳನ್ನು ರಫ್ಟು ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ ಶೇ.45 ರಷ್ಟು ಹೆಚ್ಚಳವಾಗಿದೆ. ಒಟ್ಟಾರೆಯಾಗಿ, ರಾಯಲ್ ಎನ್‌ಫೀಲ್ಡ್‌ ಕಂಪನಿಯು ಈ ವರ್ಷದ ನವೆಂಬರ್‌ನಲ್ಲಿ ಒಟ್ಟು 51,654 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ ಶೇಕಡಾ 19 ರಷ್ಟು ಕುಸಿತವನ್ನು ಕಂಡಿದೆ, ಕಳೆದ ವರ್ಷದ ಇದೇ ತಿಂಗಳಿಗೆ 63,782 ಯುನಿಟ್‌ಗಳು ಮಾರಾಟವಾಗಿದ್ದವು.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield 650 ಟ್ವಿನ್ ಬೈಕ್‌ಗಳು

ಮುಂದಿನ ತಿಂಗಳುಗಳಲ್ಲಿ ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಗೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಈಗಾಗಲೇ ಬೈಕ್‌ಗಳ ಹೆಸರಿನ ಟ್ರೇಡ್ ಮಾರ್ಜ್ ಅನ್ನು ನೋಂದಾಯಿಸಿದೆ. ರಾಯಲ್ ಎನ್‌ಫೀಲ್ಡ್ ಇತ್ತೀಚೆಗೆ ಸ್ಕ್ರ್ಯಾಮ್, ಶಾಟ್‌ಗನ್, ಹಂಟರ್, ಫ್ಲೈಯಿಂಗ್ ಫ್ಲಿಯಾ, ಶೆರ್ಪಾ ಮತ್ತು ರೋಡ್ಸ್ಟರ್ ಸೇರಿದಂತೆ ಮುಂಬರುವ ಮಾದರಿಗಳಿಗಾಗಿ ಅನೇಕ ನೇಮ್‌ಪ್ಲೇಟ್‌ಗಳನ್ನು ಟ್ರೇಡ್‌ಮಾರ್ಕ್ ಮಾಡಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಕುರಿತು ಹೆಚ್ಚಿನ ವಿವರಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ.

Article Published On: Monday, December 27, 2021, 15:19 [IST]
English summary
Royal enfield 650 twins over 94 percent sales growth in november 2021 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+