Just In
Don't Miss!
- News
ಶಶಿಕಲಾಗೆ ಶ್ವಾಸಕೋಶ ಸೋಂಕು, ಕೊರೊನಾ ವರದಿ ನೆಗೆಟಿವ್
- Finance
ಬಜೆಟ್ 2021: ಆದಾಯ ತೆರಿಗೆ ಇಳಿಕೆ ಅನುಮಾನ; ವಿನಾಯಿತಿಗಳ ಕಡೆಗೆ ಗಮನ
- Sports
ಧೋನಿ ಜೊತೆಗೆ ನನ್ನನ್ನು ಹೋಲಿಸುವುದು ನ್ಯಾಯ ಅಲ್ಲ ಎಂದ ರಿಷಭ್ ಪಂತ್
- Movies
Breaking: ನಟಿ ರಾಗಿಣಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
- Lifestyle
ನೀವು ರಾತ್ರಿ ಭಾರೀ ಭೋಜನ ಮಾಡೋರಾದ್ರೆ ಈ ಸ್ಟೋರಿ ಓದಲೇಬೇಕು...!
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್
ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕುಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ 2020ರ ಡಿಸೆಂಬರ್ ತಿಂಗಳ ಬೈಕ್ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ.

2020ರ ಡಿಸೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಬೈಕ್ ಮಾರಾಟದಲ್ಲಿ ಶೇ.35 ರಷ್ಟು ಏರಿಕೆಯಾಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಕಳೆದ ತಿಂಗಳು ದೇಶಯ ಮಾರುಕಟ್ಟೆಯಲ್ಲಿ 65,492 ಬೈಕುಗಳನ್ನು ಮಾರಾಟಗೊಳಿಸಿವೆ. ಇನ್ನು 2019ರ ಡಿಸೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 48,489 ಬೈಕುಗಳನ್ನು ಮಾರಾಟಗೊಳಿಸಿದ್ದರು.

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಕಳೆದ ತಿಂಗಳು ಒಟ್ಟಾರೆಯಾಗಿ 68,995 ಬೈಕುಗಳನ್ನು ಮಾರಾಟಗೊಳಿಸಿವೆ. 2019ರ ಡಿಸೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 50,416 ಬೈಕುಗಳನ್ನು ಮಾರಾಟಗೊಳಿತ್ತು.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಕಳೆದ ತಿಂಗಳ ದೇಶಿಯ ಮಾರುಕಟ್ಟೆಯ ಮಾರಾಟವನ್ನು 2019ರ ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಶೇ.37 ರಷ್ಟು ಬಳವಣಿಗೆಯನ್ನು ಸಾಧಿಸಿದೆ. ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಬೈಕುಗಳನ್ನು ರಫ್ತು ಮಾಡುವುದರಲ್ಲಿಯು ಬೆಳವಣಿಗೆಯನ್ನು ಕಂಡಿದೆ.

2020ರ ಡಿಸೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 3,500 ಕ್ಕೂ ಹೆಚ್ಚು ಬೈಕುಗಳನ್ನು ರಫ್ತು ಮಾಡಿದೆ. 2019ರ ಡಿಸೆಂಬರ್ ತಿಂಗಳಲ್ಲಿ ಕೇವಲ 1,927 ಬೈಕುಗಳನ್ನು ರಫ್ತು ಮಾಡಲಾಗುತ್ತು. ಇದರಿಂದ ರಫ್ತಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಶೇ.82 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸರಣಿಯಲ್ಲಿರುವ ಪ್ರಮುಖ ಮಾದರಿಗಳನ್ನು ನವೀಕರಿಸಿ 2021ರಲ್ಲಿ ಬಿಡುಗಡೆಗೊಳಿಸಲಿದೆ. ಇದರಲ್ಲಿ ತನ್ನ ಜನಪ್ರಿಯ ಕ್ಲಾಸಿಕ್ 350 ಬೈಕನ್ನು ನವೀಕರಿಸಲಾಗುತ್ತಿದೆ.

2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ರೌಂಡ್ ಹೆಡ್‌ಲ್ಯಾಂಪ್, ಟಿಯರ್‌ಡ್ರಾಪ್-ಆಕಾರದ ಟರ್ನ್ ಇಂಡಿಕೇಟರ್ಸ್, ಕ್ರೋಮ್ ರಿಯರ್ ವ್ಯೂ ಮಿರರ್ಸ್, ಬ್ರ್ಯಾಂಡ್ ರಿಯರ್ ಫೆಂಡರ್ಸ್ ಮತ್ತು ಕ್ರೋಮ್ಡ್ ಎಕ್ಸಾಸ್ಟ್ ಸಿಸ್ಟಂ ಸೇರಿದಂತೆ ಮೂಲ ರೆಟ್ರೊ ವಿನ್ಯಾಸ ಅಂಶಗಳನ್ನು ಉಳಿಸಿಕೊಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಎಲ್ಇಡಿ ಡಿಆರ್ಎಲ್ ಜೊತೆಗೆ ಹೊಸ ಬಾಡಿ ಪ್ಯಾನಲ್ ಗಳನ್ನು ಹೊಂದಿದೆ. ಆದರೂ ರಾಯಲ್ ಎನ್‌ಫೀಲ್ಡ್ ಹೊಸ ತಲೆಮಾರಿನ ಕ್ಲಾಸಿಕ್ 350 ಬೈಕಿನಲ್ಲಿಯು ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ನೀಡಲಾಗಿಲ್ಲ.

ಇದರ ಜೊತೆಗೆ ರಾಯಲ್ ಎನ್‍ಫೀಲ್ಡ್ ತನ್ನ ಜನಪ್ರಿಯ ಮಾದರಿಗಳಾದ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕುಗಳನ್ನು ನವೀಕರಿಸಲಾಗುತ್ತದೆ. ಇನ್ನು ಹೊಸ ರಾಯಲ್ ಎನ್‍ಫೀಲ್ಡ್ ಈ ಟ್ವೀನ್ ಬೈಕುಗಳಲ್ಲಿಉ ಟ್ರಿಪರ್ ನ್ಯಾವಿಗೇಷನ್ ಫೀಚರ್ ಅನ್ನು ನೀಡಬಹುದು.

ರಾಯಲ್ ಎನ್‌ಫೀಲ್ಡ್ ಬೈಕುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸರಣಿಯಲ್ಲಿರುವ ಪ್ರಮುಖ ಮಾದರಿಗಳನ್ನು ನವೀಕರಿಸಿ ಬಿಡುಗಡೆಗೊಳಿಸಿದ ಬಳಿಕ ಮಾರಾಟದದಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸಬಹುದು.