ನವೆಂಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Bullet 350 ಬೈಕ್
ರಾಯಲ್ ಎನ್‌ಫೀಲ್ಡ್ ಭಾರತದಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ರಾಯಲ್ ಎನ್‌ಫೀಲ್ಡ್ ಕಳೆದ ತಿಂಗಳ ಮಾರಾಟದ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ. ಕಂಪನಿಯ ಒಟ್ಟಾರೆ ಮಾರಾಟವು ಗಮನಾರ್ಹವಾಗಿ ಕಡಿಮೆಯಾಗಿದ್ದರೂ, ಬುಲೆಟ್ 350 ಸೇರಿದಂತೆ ಕೆಲವು ಬೈಕ್‌ಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

2021ರ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ 350 ಮಾದರಿಯ ಒಟ್ಟು 8,733 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,513 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ರಾಯಲ್ ಎನ್ಫೀಲ್ಡ್ ಬುಲೆಟ್ 350 ಶೇ.34.09 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಕಂಡಿದೆ. ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಬುಲೆಟ್ 350 ಮಾದರಿಯ 5,822 ಯುನಿಟ್‌ಗಳು ಮಾರಾಟವಾಗಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.50 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಕಂಡಿದೆ.

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ನ್ಯೂ ಜನರೇಷನ್ ಬುಲೆಟ್ 350 ಅನ್ನು 2022 ರಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಹೊಸ ಮಾದರಿಯು ಬ್ರ್ಯಾಂಡ್‌ನ 'ಜೆ' ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ, ಇದು ಕ್ಲಾಸಿಕ್ 350 ಮತ್ತು ಮಿಟಿಯರ್ 350 ಗಳಿಗೂ ಸಹ ಆಧಾರವಾಗಿದೆ. ವಿನ್ಯಾಸವು ಕೆಲವು ಬದಲಾವಣೆಗಳಿಗೆ ಒಳಗಾಗುತ್ತದೆ, ಆದರೂ ಬುಲೆಟ್‌ನ ರೆಟ್ರೊ ಸ್ಟೈಲ್ ಅನ್ನು ಸಂರಕ್ಷಿಸಲಾಗಿದೆ.

ಪ್ರಸ್ತುತ ಮಾರಾಟವಾಗುತ್ತಿರುವ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ ಬೈಕಿನಲ್ಲಿರುವ ಮಾದರಿಯ ಎಂಜಿನ್ ಅನ್ನು ಬುಲೆಟ್ 350 ಬೈಕಿನಲ್ಲಿ ಅಳವಡಿಸಲಿದೆ. ಕ್ಲಾಸಿಕ್ 350 ಬೈಕಿನಲ್ಲಿರುವ 346 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‍ನಂತೆಯೇ ಎಲೆಕ್ಟ್ರಾನಿಕ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಈ ಬೈಕಿನಲ್ಲಿ ಅಳವಡಿಸಿದೆ.

ಅದರೆ ಬುಲೆಟ್ ಬೈಕಿನಲ್ಲಿರುವ ಎಂಜಿನ್ 19.3 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಕ್ಲಾಸಿಕ್ 350 ಬೈಕಿನ ಎಂಜಿನ್‍ಗೆ ಹೋಲಿಸಿದರೆ 0.71 ಬಿಹೆಚ್‍ಪಿ ಪವರ್ ಕಡೆಮೆ ಉತ್ಪಾದಿಸುತ್ತದೆ. ಟಾರ್ಕ್ ಅಂಕಿ ಅಂಶದಲ್ಲಿ ಯಾವುದೇ ಬದಲಾವಣೆಗಳು ಇಲ್ಲ, ಅದೇ 28 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ರಾಯಲ್ ಎನ್ಫೀಲ್ಡ್ ಬುಲೆಟ್ 350 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಟ್ವಿನ್ ರೇರ್ ಶಾಕ್ ಅಬ್ಸಾರ್ಬರ್ ಸೆಟಪ್ ಅನ್ನು ಒಳಗೊಂಡಿದೆ.

ಇನ್ನು ಈ ಬೈಕಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಮುಂಭಾಗದಲ್ಲಿ 280 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 153 ಎಂಎಂ ಡ್ರಮ್ ಬೈಕ್ ಅನ್ನು ಹೊಂದಿದೆ. ಇನ್ನು ಹೆಚ್ಚಿನ ಸುರಕ್ಷತೆಗಾಗಿ ಸಿಂಗಲ್ ಚಾನೆಲ್ ಎಬಿಎಸ್ ಸ್ಟ್ಯಾಡಂರ್ಡ್ ಆಗಿ ಅಳವಡಿಸಿದೆ.

ನ್ಯೂ ಜನರೇಷನ್ ರಾಯಲ್ ಎನ್ಫೀಲ್ಡ್ ಬುಲೆಟ್ 350 ಬೈಕ್ ಅನಾಲಾಗ್ ಸ್ಪೀಡೋಮೀಟರ್ ಮತ್ತು ಟ್ರಿಪ್‌ಮೀಟರ್, ಫ್ಯುಯಲ್ ಗೇಜ್ ಇತ್ಯಾದಿಗಳಿಗೆ ಡಿಜಿಟಲ್ ಡಿಸ್‌ಪ್ಲೇ ಒಳಗೊಂಡಿರುವ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಪಡೆದುಕೊಳ್ಳಬಹುದು ಎಂದು ನಿರೀಕ್ಷಿಸುತ್ತೇವೆ. ಆಫರ್‌ನಲ್ಲಿರುವ ಇತರ ವೈಶಿಷ್ಟ್ಯಗಳು ಫ್ರಂಟ್ ಡಿಸ್ಕ್ ಬ್ರೇಕ್, ಸಿಂಗಲ್-ಚಾನಲ್ ಎಬಿಎಸ್ ಮತ್ತು ಸೆಲ್ಫ್ ಸ್ಟಾರ್ಟ್, ರೇರ್ ಡಿಸ್ಕ್ ಬ್ರೇಕ್ (ಡ್ಯುಯಲ್-ಚಾನೆಲ್ ಎಬಿಎಸ್ ನೊಂದಿಗೆ) ಒಂದು ಆಯ್ಕೆಯಾಗಿ ನೀಡಲಾಗುವುದು.

ನ್ಯೂ ಜನರೇಷನ್ ರಾಯಲ್ ಎನ್ಫೀಲ್ಡ್ ಬುಲೆಟ್ 350 ಬೈಕ್ ಪ್ರಸ್ತುತ ಮಾದರಿಗಿಂತ ತುಸು ದುಬಾರಿಯಾಗಿರುತ್ತದೆ. ಈ ಹೊಸ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಜಾವಾ, ಹೋಂಡಾ ಸಿಬಿ350 ಹೈನಸ್, ಬೆನೆಲ್ಲಿ ಇಂಪಿರಿಯಲ್ 400 ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಈ ವರ್ಷದ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 44,830 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 59,084 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.24 ರಷ್ಟು ಕುಸಿತವನ್ನು ಕಂಡಿದೆ. ಕಳೆದ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 6,824 ಯುನಿಟ್‌ಗಳನ್ನು ರಫ್ತು ಮಾಡಿದೆ. ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 4,698 ಯುನಿಟ್‌ಗಳನ್ನು ರಫ್ಟು ಮಾಡಲಾಗಿತ್ತು.

ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ ಶೇ.45 ರಷ್ಟು ಹೆಚ್ಚಳವಾಗಿದೆ. ಒಟ್ಟಾರೆಯಾಗಿ, ರಾಯಲ್ ಎನ್‌ಫೀಲ್ಡ್ ಕಂಪನಿಯು ಈ ವರ್ಷದ ನವೆಂಬರ್‌ನಲ್ಲಿ ಒಟ್ಟು 51,654 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ ಶೇಕಡಾ 19 ರಷ್ಟು ಕುಸಿತವನ್ನು ಕಂಡಿದೆ, ಮುಂದಿನ ತಿಂಗಳುಗಳಲ್ಲಿ ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಗೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಈಗಾಗಲೇ ಬೈಕ್‌ಗಳ ಹೆಸರಿನ ಟ್ರೇಡ್ ಮಾರ್ಜ್ ಅನ್ನು ನೋಂದಾಯಿಸಿದೆ.

ರಾಯಲ್ ಎನ್‌ಫೀಲ್ಡ್ ಇತ್ತೀಚೆಗೆ ಸ್ಕ್ರ್ಯಾಮ್, ಶಾಟ್‌ಗನ್, ಹಂಟರ್, ಫ್ಲೈಯಿಂಗ್ ಫ್ಲಿಯಾ, ಶೆರ್ಪಾ ಮತ್ತು ರೋಡ್ಸ್ಟರ್ ಸೇರಿದಂತೆ ಮುಂಬರುವ ಮಾದರಿಗಳಿಗಾಗಿ ಅನೇಕ ನೇಮ್‌ಪ್ಲೇಟ್‌ಗಳನ್ನು ಟ್ರೇಡ್‌ಮಾರ್ಕ್ ಮಾಡಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಕುರಿತು ಹೆಚ್ಚಿನ ಮಾಹಿತಿಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ.


Click it and Unblock the Notifications