ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಕೋವಿಡ್ ವಿರುದ್ದ ಹೋರಾಟಕ್ಕಾಗಿ ಮತ್ತು ಚಂಡಮಾರುತದಿಂದಾದ ಸಂಕಷ್ಟಕ್ಕೆ ನೆರವು ನೀಡಲು ಆರ್ಥಿಕ ನೆರವು ಘೋಷಣೆ ಮಾಡಿದ್ದು, ತಮಿಳುನಾಡು ಸರ್ಕಾರಕ್ಕೆ ಕಂಪನಿಯು ಸುಮಾರು ರೂ.2 ಕೋಟಿ ದೇಣಿಗೆ ನೀಡಿದೆ.

ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾಗಿ ಹರಸಾಹಸಪಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ಕೋವಿಡ್ ಹರಡುವಿಕೆ ತಡೆಯಲು ವಿವಿಧ ರಾಜ್ಯ ಸರ್ಕಾರಗಳು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್‌ನೊಂದಿಗೆ ಲೌಕ್‌ಡೌನ್ ಮುಂದುವರಿಸಲಾಗುತ್ತಿದೆ.

ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ವೈರಸ್ ಹರಡುವಿಕೆ ತೀವ್ರವಾಗಿರುವುದರಿಂದ ಸೋಂಕಿತರಿಗೆ ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ವಿವಿಧ ರಾಜ್ಯ ಸರ್ಕಾರಗಳ ಪ್ರಯತ್ನಕ್ಕೆ ಆಟೋ ಮೊಬೈಲ್ ಕಂಪನಿಗಳು ಸಾಕಷ್ಟು ಸಹಕಾರ ನೀಡಿವೆ.

ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ಆರ್ಥಿಕ ಸಂಕಷ್ಟದ ನಡುವೆಯೂ ಪ್ರಮುಖ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ರಾಯಲ್ ಎನ್‌ಫೀಲ್ಡ್ ಕೂಡಾ ಕೋವಿಡ್ ಪರಿಹಾರಕ್ಕಾಗಿ ಮತ್ತು ಚಂಡಮಾರುತದಿಂದ ಉಂಟಾಗಿರುವ ಹಾನಿಯ ಪರಿಹಾರಕ್ಕಾಗಿ ರೂ.2 ಕೋಟಿ ಹಣಕಾಸು ನೆರವನ್ನು ತಮಿಳುನಾಡು ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ.

MOST READ: ತಾಯಿಯ ಸಾವಿನ ಸುದ್ದಿ ಕೇಳಿಯೂ ಕರ್ತವ್ಯ ಮುಂದುವರೆಸಿದ ಆಂಬ್ಯುಲೆನ್ಸ್ ಚಾಲಕ

ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ಚೆನ್ನೈ ಹೊರವಲಯದಲ್ಲಿ ತನ್ನ ವಾಹನ ಉತ್ಪಾದನಾ ಘಟಕವನ್ನು ಹೊಂದಿರುವ ರಾಯಲ್‌ ಎನ್‌ಫೀಲ್ಡ್ ಕಂಪನಿಯು ತಮಿಳುನಾಡು ಸರ್ಕಾರದ ವಿಪತ್ತು ನಿರ್ವಹಣಾ ನಿಧಿಗೆ ರೂ. 2 ಕೋಟಿ ಹಣಕಾಸು ನೆರವು ನೀಡಿದ್ದು, ಮೊದಲ ಕೋವಿಡ್ ಅಲೆಯ ಸಂದರ್ಭದಲ್ಲೂ ತಮಿಳುನಾಡು ಮತ್ತು ಕೇಂದ್ರ ಸರ್ಕಾರಕ್ಕೂ ದೇಣಿಗೆ ಹಸ್ತಾಂತರ ಮಾಡಿತ್ತು.

ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ಇನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿಯಲ್ಲಿ ರಾಯಲ್ ಎನ್‌ಫೀಲ್ಡ್ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಮಟ್ಟದ ಹಣಕಾಸಿನ ನೆರವು ನೀಡಿವೆ.

ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ಕೋವಿಡ್ ನಿಯಂತ್ರಣಕ್ಕಾಗಿ ಪ್ರಮುಖ ವಾಹನ ಕಂಪನಿಗಳು ಹಣಕಾಸು ನೆರವು ನೀಡಿದ್ದಲ್ಲಿ ಇನ್ನು ಕೆಲವು ವಾಹನ ಕಂಪನಿಗಳು ವೈದ್ಯಕೀಯ ಸೇವೆಗಳನ್ನು ಉನ್ನತೀಕರಿಸಲು ವೆಂಟಿಲೇಟರ್ ಉತ್ಪಾದನೆ ಮತ್ತು ಆಕ್ಸಿಜನ್ ಉತ್ಪಾದನೆಗೆ ಸಹಕಾರಿಯಾಗುತ್ತಿರುವುದಲ್ಲದೆ ಕೋವಿಡ್ ಕೇರ್‌ಗಳಿಗೆ ಚಾಲನೆ ನೀಡಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ ರಾಯಲ್ ಎನ್‌ಫೀಲ್ಡ್

ಸಾಂಕ್ರಾಮಿಕ ರೋಗದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ಆಟೋ ಕಂಪನಿಗಳ ಸಾಮಾಜಿಕ ಕಳಕಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ದೇಶಿಯ ವಾಹನ ಉತ್ಪಾದನಾ ಕಂಪನಿಗಳು ಹೆಚ್ಚಿನ ಮಟ್ಟದ ಸಹಕಾರ ನೀಡುತ್ತಿವೆ.

Article Published On: Wednesday, June 9, 2021, 20:05 [IST]
English summary
Royal Enfield Donates ₹ 2 Crore To Tamil Nadu Disaster Relief Fund. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+