ಬೆಲೆ ಏರಿಕೆ ಪಡೆದುಕೊಂಡ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಬೈಕಿನ ಬೆಲೆಯನ್ನು ಹೆಚ್ಚಿಸಿದೆ. ಈ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಭಾರತೀಯ ಮಾರುಕಟ್ಟೆಯ ಜನಪ್ರಿಯ ಅಡ್ವೆಂಚರ್-ಟೂರರ್ ಬೈಕ್‌ಗಳಲ್ಲಿ ಒಂದಾಗಿದೆ.

ರಾಯಲ್ ಎನ್‌ಫೀಲ್ಡ್ ಕಂಪನಿಯು ಹಿಮಾಲಯನ್ ಬೈಕಿನ ಬೆಲೆಯನ್ನು ರೂ,4,614 ಗಳವರೆಗೆ ಹೆಚ್ಚಿಸಲಾಗಿದೆ. ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಕಾಸ್ಮೆಟಿಕ್ ಅಥವಾ ಯಾಂತ್ರಿಕ ನವೀಕರಣವನ್ನು ಪಡೆದುಕೊಂಡಿಲ್ಲ. ಈ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಸ್ಟ್ಯಾಂಡರ್ಡ್, ಡ್ಯುಯಲ್ ಟೋನ್ ಮತ್ತು ಪೈನ್ ಗ್ರೀನ್ ಮತ್ತು ಗ್ರಾನೈಟ್ ಬ್ಲ್ಯಾಕ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ.

ಬೆಲೆ ಏರಿಕೆಯ ಬಳಿಕ, ರಾಯಲ್ ಎನ್ಫೀಲ್ಡ್ ಹಿಮಾಲಯನ್ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆ ರೂ.2,05,784 ಗಳಾದರೆ, ಡ್ಯುಯಲ್ ಟೋನ್ ರೂಪಾಂತರದ ಬೆಲೆಯು ರೂ,2,09,529 ಗಳಾಗಿದೆ. ಇನ್ನು ಪೈನ್ ಗ್ರೀನ್ ಮತ್ತು ಗ್ರಾನೈಟ್ ಬ್ಲ್ಯಾಕ್ ರೂಪಾಂತರದ ಬೆಲೆಯು ರೂ.2,13,273 ಆಗಿದೆ. ಈ ಎಲ್ಲಾ ಬೆಲೆಗಳು ಬೆಂಗಳೂರು ಎಕ್ಸ್ ಶೋರೂಂ ಪ್ರಕಾರವಾಗಿದೆ.

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಬಗ್ಗೆ ಹೇಳುವುದಾದರೆ, ಈ ಬೈಕಿನಲ್ಲಿ 'ಟ್ರಿಪ್ಪರ್ ನ್ಯಾವಿಗೇಷನ್' ಅನ್ನು ಸಹ ಒಳಗೊಂಡಿದೆ. ಹೊಸ ಸರಳ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಪಾಡ್ ಅನ್ನು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಜೊತೆಗೆ ಅಳವಡಿಸಲಾಗಿದೆ.

ಈ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಬೈಕ್ ರೈಡಿಂಗ್ ವೇಳೆ ಸವಾರನಿಗೆ ಸಾಕಷ್ಟು ಸಹಕಾರಿಯಾಗಿರುತ್ತದೆ. ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆಯನ್ನು ಒದಗಿಸಲಿದೆ.

ಈ ಹಿಮಾಲಯನ್ ಬೈಕಿನಲ್ಲಿ ಅದೇ 411ಸಿಸಿ ಸಿಂಗಲ್-ಸಿಲಿಂಡರ್ ಎಸ್‌ಒಹೆಚ್‌ಸಿ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಲಾಗಿದೆ. ಈ ಎಂಜಿನ್ 24.3 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಇನ್ನು 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಸಸ್ಪಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41ಎಂಎಂ ಟೆಲಿಸ್ಕೋಪಿಕ್ ಸೆಟಪ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ.

ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 300ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇನ್ನು ಸ್ಟ್ಯಾಂಡರ್ಡ್ ಆಗಿ 'ಸ್ವಿಚ್ ಮಾಡಬಹುದಾದ ಎಬಿಎಸ್' ಅನ್ನು ಹೊಂದಿದೆ.

ರಾಯಲ್ ಎನ್ಫೀಲ್ಡ್ ಹಿಮಾಲಯನ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿಎಂ 390 ಅಡ್ವೆಂಚರ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications








