ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸರಣಿಯಲ್ಲಿರುವ ಬೈಕ್‌ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಇದರಲ್ಲಿ ರಾಯಲ್ ಎನ್‌ಫೀಲ್ಡ್ ಮೆಟಿಯೊರ್ ಮತ್ತು ಹಿಮಾಲಯನ್ ಅಡ್ವೆಂಚರ್ ಬೈಕ್‌ಗಳು ಕೂಡ ಸೇರಿವೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕ್ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್ ನೋವಾ ಎಂಬ ಮೂರು ರೂಪಾಂತರಗಳ ಜುಲೈ ತಿಂಗಳಿನ ಬೆಲೆಗಳಿಗೆ ಹೋಲಿಸಿದರೆ,ತಲಾ ರೂ.7 ಸಾವಿರವರೆಗೆ ಬೆಲೆ ಹೆಚ್ಚಿಸಲಾಗಿದೆ. ಇದೀಗ ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನ ರೂಪಾಂತರಗಳ ಬೆಲೆಯು, ಫೈರ್‌ಬಾಲ್‌ ರೂಪಾಂತರಕ್ಕೆ ರೂ.1.99 ಲಕ್ಷ, ಸ್ಟೆಲ್ಲಾರ್‌ಗೆ ರೂ.2.05 ಲಕ್ಷ ಮತ್ತು ಸೂಪರ್‌ನೋವಾಕ್ಕೆ ರೂ.2.15 ಲಕ್ಷಗಳಾಗಿದೆ, ಎಲ್ಲಾ ಬೆಲೆಗಳು, ಎಕ್ಸ್ ಶೋರೂಂ ಪ್ರಕಾರವಾಗಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಜನಪ್ರಿಯ ಹಿಮಾಲಯನ್ ಅಡ್ವೆಂಚರ್ ಬೈಕಿನ ಬೆಲೆಯನ್ನು ರೂ.5,000 ಅವರೆಗೆ ಹೆಚ್ಚಿಸಲಾಗಿದೆ. ಇದೀಗ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯು ಎಕ್ಸ್ ಶೂರೂಂ ಪ್ರಕಾರ ರೂ.2.10 ಲಕ್ಷದಿಂದ ರೂ.2.18 ಲಕ್ಷಗಳಾಗಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಇದರಲ್ಲಿ ಮೊದಲಿಗೆ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನ ಬಗ್ಗೆ ಹೇಳುವುದಾದರೆ, ಇದನ್ನು ತಮಿಳುನಾಡು ಮತ್ತು ಯುಕೆ ಮೂಲದ ಆರ್‌ಇ ತಂಡವು ವಿನ್ಯಾಸಗೊಳಿಸಿದೆ. ಹಿಂದಿನ ಥಂಡರ್‌ಬರ್ಡ್ ಎಕ್ಸ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿರುವ ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್‌ಬರ್ಡ್ ಬೈಕಿಗಿಂತಲೂ ಸಾಕಷ್ಟು ವಿಭಿನ್ನವಾಗಿ ಮತ್ತು ಆಕರ್ಷಕವಾಗಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಈ ಹೊಸ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ 349 ಸಿಸಿ, ಏರ್/ಆಯಿಲ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದ್ದು, ಇದರಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಕೂಡ ಪಡೆಯುತ್ತದೆ. ಈ ಎಂಜಿನ್ 20.2 ಬಿಹೆಚ್‍ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕನ್ನು ಹೊಸ ಜೆ ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಲಾಗಿದ್ದು ಅದು ಹೊಸ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಅನ್ನು ಸಹ ಆಧಾರಗೊಳಿಸುತ್ತದೆ. ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಅನುಭವ ನೀಡುತ್ತದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಈ ಬೈಕಿನ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ನೀಡಲಾಗಿದೆ. ಈ ಬೈಕಿನ ಮುಂಭಾಗ 19-ಇಂಚಿನ ಮತ್ತು ಹಿಂಭಾಗದಲ್ಲಿ 17-ಇಂಚಿನ ಅಲಾಯ್ ವ್ಹೀಲ್ ಗಳನ್ನು ಜೋಡಿಸಲಾಗಿದೆ. ಇದು ಕ್ರಮವಾಗಿ 100 / 90-19 57 ಪಿ ಮತ್ತು 140 / 70-17 66 ಪಿ ಸಿಯೆಟ್ ಟ್ಯೂಬ್‌ಲೆಸ್ ಟೈರ್ ಅನ್ನು ಒಳಗೊಂಡಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಇದರೊಂದಿಗೆ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ ಟಿಪ್ಪರ್ ಪಾಡ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇನ್ನು ಇದರೊಂದಿಗೆ ಹಲವಾರು ಫೀಚರ್ ಗಳನ್ನು ಒಳಗೊಂಡಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಇನ್ನು ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಕಾಸ್ಮೆಟಿಕ್ ಅಥವಾ ಯಾಂತ್ರಿಕ ನವೀಕರಣವನ್ನು ಪಡೆದುಕೊಂಡಿಲ್ಲ. ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಸ್ಟ್ಯಾಂಡರ್ಡ್, ಡ್ಯುಯಲ್ ಟೋನ್ ಮತ್ತು ಪೈನ್ ಗ್ರೀನ್ ಮತ್ತು ಗ್ರಾನೈಟ್ ಬ್ಲ್ಯಾಕ್ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಬಗ್ಗೆ ಹೇಳುವುದಾದರೆ, ಈ ಬೈಕಿನಲ್ಲಿ 'ಟ್ರಿಪ್ಪರ್ ನ್ಯಾವಿಗೇಷನ್' ಅನ್ನು ಸಹ ಒಳಗೊಂಡಿದೆ. ಹೊಸ ಸರಳ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಪಾಡ್ ಅನ್ನು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಜೊತೆಗೆ ಅಳವಡಿಸಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಈ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಬೈಕ್ ರೈಡಿಂಗ್ ವೇಳೆ ಸವಾರನಿಗೆ ಸಾಕಷ್ಟು ಸಹಕಾರಿಯಾಗಿರುತ್ತದೆ. ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದು. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆಯನ್ನು ಕೂಡ ಒದಗಿಸಲಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಈ ಹಿಮಾಲಯನ್ ಬೈಕಿನಲ್ಲಿ ಅದೇ 411ಸಿಸಿ ಸಿಂಗಲ್-ಸಿಲಿಂಡರ್ ಎಸ್‌ಒಹೆಚ್‌ಸಿ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಲಾಗಿದೆ. ಈ ಎಂಜಿನ್ 24.3 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮಥ್ಯವನ್ನು ಹೊಂದಿದೆ. ಇನ್ನು ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ Royal Enfield Meteor, Himalayan ಬೈಕ್‌ಗಳು

ಈ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಸಸ್ಪಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41ಎಂಎಂ ಟೆಲಿಸ್ಕೋಪಿಕ್ ಸೆಟಪ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ. ಇನ್ನು ಇದರ ಬ್ರೇಕಿಂಗ್ ಸಿಸ್ಟಂ, ಮುಂಭಾಗದಲ್ಲಿ 300ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇನ್ನು ಸ್ಟ್ಯಾಂಡರ್ಡ್ ಆಗಿ 'ಸ್ವಿಚ್ ಮಾಡಬಹುದಾದ ಎಬಿಎಸ್' ಅನ್ನು ನೀಡಲಾಗಿದೆ.

Most Read Articles

Kannada
English summary
Royal enfield hiked meteor 350 and himalayan prices again in india new price details
Story first published: Wednesday, September 8, 2021, 14:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X