Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- News
ಎಬಿಪಿ ಸಮೀಕ್ಷೆ: ಬೆಂಗಾಳದಲ್ಲಿ ಬಿಜೆಪಿ ಏಳಿಗೆ ನಡುವೆ ಟಿಎಂಸಿಗೆ ಗೆಲುವು
- Sports
ಸ್ಪಿನ್ ಆಗಲು ಆರಂಭವಾದರೆ ಜಗತ್ತು ಅಳಲು ಆರಂಭಿಸುತ್ತದೆ: ಪಿಚ್ ಬಗ್ಗೆ ಟೀಕೆಗೆ ಆಸಿಸ್ ಸ್ಪಿನ್ನರ್ ತಿರುಗೇಟು
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರ ಹಿಮಾಲಯನ್ ಬೈಕ್ ವಿತರಣೆ- ಕೇರಳದಲ್ಲಿ ಒಂದೇ ದಿನ 100 ಯುನಿಟ್ ವಿತರಿಸಿದ ರಾಯಲ್ ಎನ್‌ಫೀಲ್ಡ್
ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಅಡ್ವೆಂಚರ್ ಬೈಕ್ ಮಾದರಿಯಾದ ಹಿಮಾಲಯನ್ ಆವೃತ್ತಿಯನ್ನು ಇತ್ತೀಚೆಗಷ್ಟೇ 2021ರ ಆವೃತ್ತಿಯೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಬೈಕ್ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಹೊಸ ಹಿಮಾಲಯನ್ ಬೈಕ್ ಮಾದರಿಯ ವಿತರಣೆಯನ್ನು ಹೆಚ್ಚಿಸಲು ಉತ್ಪಾದನಾ ಪ್ರಕ್ರಿಯೆಯನ್ನು ತೀವ್ರಗೊಳಿಸಿರುವ ರಾಯಲ್ ಎನ್‌ಫೀಲ್ಡ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ ಹೊಸ ಬೈಕ್ ವಿತರಣೆಗೆ ಚಾಲನೆ ನೀಡಿದ್ದು, ಕೇರಳದಲ್ಲಿ ಒಂದೇ ದಿನದಲ್ಲಿ ವಿವಿಧ ಡೀಲರ್ಸ್‌ಗಳಲ್ಲಿ ಬರೋಬ್ಬರಿ 100 ಯುನಿಟ್ ಬೈಕ್‌ಗಳನ್ನು ವಿತರಿಸಿದೆ. ಒಂದೇ ದಿನದಲ್ಲಿ ಹಿಮಾಲಯನ್ ಬೈಕ್ ಮಾದರಿಯ ಅತ್ಯಧಿಕ ಯುನಿಟ್ ವಿತರಣೆ ಇದಾಗಿದ್ದು, ಹೊಸ ಬೈಕ್ ಮಾದರಿಗೆ ಭಾರೀ ಬೇಡಿಕೆ ಹರಿದುಬರುತ್ತಿದೆ.

2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯು ಬೆಂಗಳೂರಿನಲ್ಲಿ ಸದ್ಯ ಆರಂಭಿಕವಾಗಿ ರೂ.2.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 2.58 ಲಕ್ಷಗಳಾಗಿದ್ದು, ಹೊಸ ಮಾದರಿಯು ಈ ಬಾರಿ ಹಲವು ಹೊಸ ಫೀಚರ್ಸ್ ಜೊತೆಗೆ ಹೆಚ್ಚುವರಿಯಾಗಿ ಮೂರು ಹೊಸ ಬಣ್ಣ ಆಯ್ಕೆಗಳನ್ನು ಪಡೆದಿದೆ.

ರಾಯಲ್ ಎನ್‌ಫೀಲ್ಡ್ ಕಂಪನಿಯ 2021 ಹಿಮಾಲಯನ್ ಬೈಕಿನ ತಾಂತ್ರಿಕ ಅಂಶಗಳ ಬದಲಾವಣೆಯ ಬಗೆಗೆ ಹೇಳುವುದಾದರೆ, ಹೊಸ ಹಿಮಾಲಯನ್ ಬೈಕ್ ಅದರ ಹಿಂದಿನ ಮಾದರಿಯಲ್ಲಿರುವಂತಹ ವಿನ್ಯಾಸದೊಂದಿಗೆ ಬದಲಾವಣೆ ಮಾಡಲಾದ ಸಿಲೊಯೆಟ್ ಮತ್ತು ಕೆಲವು ಸಣ್ಣ ಪುಟ್ಟ ನವೀಕರಣಗಳನ್ನು ಮಾಡಲಾಗಿದೆ.

ಇವುಗಳಲ್ಲಿ ನವೀಕರಿಸಿದ ಆಸನಗಳು ಇದೀಗ ಮತ್ತಷ್ಟು ಕಂಫರ್ಟ್ ನೀಡಲಿದ್ದು, ವಿಶೇಷವಾಗಿ ಲಾಂಗ್ ರೈಡ್ ಹೋಗುವಾಗ ಇದು ಹೆಚ್ಚು ಸಹಕಾರಿಯಾಗಿರುತ್ತದೆ. ಇನ್ನು ನವೀಕರಿಸಿದ ಹಿಂಭಾಗದ ಕ್ಯಾರಿಯರ್ ಮತ್ತು ಮುಂಭಾಗ ಮೆಟಲ್ ಫ್ರೇಮ್ ಮತ್ತು ಹೊಸ ವಿಂಡ್‌ಸ್ಕ್ರೀನ್ ಸಹ ಸೇರ್ಪಡೆಯಾಗಿದ್ದು, ಹೆಚ್ಚುವರಿ ಬಣ್ಣಗಳ ಆಯ್ಕೆಯು ಸಹ ಹೊಸ ಬೈಕಿಗೆ ಮತ್ತಷ್ಟು ಮೆರುಗು ನೀಡಲಿವೆ.

ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾದರಿಯು ಬ್ರಾಂಡ್ ನ್ಯೂ ಟ್ರಿಪ್ಪರ್ ನ್ಯಾವಿಗೇಷನ್' ಅನ್ನು ಸಹ ಒಳಗೊಂಡಿದ್ದು, ಹೊಸ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಪಾಡ್ ಅನ್ನು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಜೊತೆಗೆ ಅಳವಡಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೊಸ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಬೈಕ್ ರೈಡಿಂಗ್ ವೇಳೆ ಸವಾರನಿಗೆ ಸಾಕಷ್ಟು ಸಹಕಾರಿಯಾಗಿರುತ್ತದೆ. ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆಯನ್ನು ಒದಗಿಸುವ ಮೂಲಕ ಬೈಕ್ ಚಾಲನೆ ವೇಳೆ ಮೊಬೈಲ್ ಬಳಕೆಗೆ ಕಡಿವಾಣ ಹಾಕುತ್ತದೆ.

ಇದರೊಂದಿಗೆ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್ ಮಾದರಿಗಾಗಿ ಹೆಚ್ಚುವರಿ ಸೌಲಭ್ಯಗಳನ್ನು ಜೋಡಿಸಲು ಮೇಕ್-ಇಟ್-ಯುವರ್ಸ್ ಆಯ್ಕೆ ನೀಡಲಾಗಿದ್ದು, ಇದು ಗ್ರಾಹಕರಿಗೆ ಹೊಸ ಬೈಕ್ ಮಾದರಿಯನ್ನು ಸ್ಟ್ಯಾಂಡರ್ಡ್ ಫೀಚರ್ಸ್ ಹೊರತುಪಡಿಸಿ ಹೆಚ್ಚುವರಿ ಆಕ್ಸೆಸರಿಸ್ ಪಡೆದುಕೊಳ್ಳಲು ಸಹಕರಿಸುತ್ತದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಇನ್ನುಳಿದ ಹೊಸ ಬೈಕ್ ಮಾದರಿಯಲ್ಲಿ ಹಳೆಯ ಮಾದರಿಯಲ್ಲಿರುವಂತೆ ತಾಂತ್ರಿಕ ಸೌಲಭ್ಯಗಳನ್ನು ಮುಂದುವರಿಸಲಾಗಿದ್ದು, 411-ಸಿಸಿ ಸಿಂಗಲ್-ಸಿಲಿಂಡರ್ ಎಸ್‌ಒಹೆಚ್‌ಸಿ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಕೆ ಹೊಂದಿದೆ. ಈ ಎಂಜಿನ್ 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 24.3 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಸ್ಟ್ಯಾಂಡರ್ಡ್ ಆಗಿ 'ಸ್ವಿಚ್ ಮಾಡಬಹುದಾದ ಎಬಿಎಸ್' ಅನ್ನು ಹೊಂದಿದೆ.