ಬೆಲೆ ಏರಿಕೆ ಪಡೆದುಕೊಂಡ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್
ಚೆನ್ನೈ ಮೂಲದ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ ಕ್ಲಾಸಿಕ್ 350 ಬೈಕಿನ ಬೆಲೆಯನ್ನು ಹೆಚ್ಚಿಸಿದೆ. ಈ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಬೈಕ್‌ಗಳಲ್ಲಿ ಒಂದಾಗಿದೆ.

ಇತ್ತೀಚಿನ ಬೆಲೆ ಏರಿಕೆಯ ನಂತರ, ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕಿನ ಎಂಟ್ರಿ ಲೆವೆಲ್ ರೂಪಾಂತರಕ್ಕೆ ರೂ.1.79 ಲಕ್ಷಗಳಾದರೆ, ಟಾಪ್-ಎಂಡ್ ರೂಪಾಂತರದ ಬೆಲೆಯು ರೂ.2.03 ಲಕ್ಷಗಳಾಗಿದೆ. ಈ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ರೂ.8,362 ಗಳವರೆಗೂ ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ರೂಪಾಂತರಗಳ ಅನುಗುಣವಾಗಿ ಬೆಲೆಯನ್ನು ಏರಿಸಲಾಗಿದೆ. ಇದರಿಂದ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ತುಸು ದುಬಾರಿಯಾಗಿದೆ.

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ನ್ಯೂ ಜನರೇಷ ಕ್ಲಾಸಿಕ್ 350 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. 2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಹಲವಾರು ಹೊಸ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಈ ನ್ಯೂ ಜನರೇಷನ್ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತದಲ್ಲಿ ಹಲವು ಬಾರಿ ಸ್ಫಾಟ್ ಟೆಸ್ಟ್ ಅನ್ನು ನಡೆಸಿದೆ. ಈ ನ್ಯೂ ಜನರೇಷನ್ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಈಗ ಅನಲಾಗ್ ಸ್ಪೀಡೋಮೀಟರ್ ಕೆಳಗೆ ಸಣ್ಣ ಡಿಜಿಟಲ್ ಡಿಸ್ ಪ್ಲೇಯನ್ನು ಹೊಂದಿರುತ್ತದೆ.

ಈ ಡಿಸ್ ಪ್ಲೇಯಲ್ಲಿ ಟ್ರಿಪ್ ಮೀಟರ್, ಫ್ಯೂಯಲ್ ಗೇಜ್, ಓಡೋಮೀಟರ್, ಓಡೋಮೀಟರ್ ಮತ್ತು ಇತರ ವಿವರಗಳನ್ನು ಪ್ರದರ್ಶಿಸುತ್ತದೆ. ಬದಿಯಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಪಾಡ್ ಇರುವಿಕೆಯು ಅತ್ಯಂತ ಮುಖ್ಯವಾದ ಸೇರ್ಪಡೆಯಾಗಿದೆ. ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರಬಹುದು ಎಂದು ನಿರೀಕ್ಷಿಸುತ್ತೇವೆ.

ಇದರೊಂದಿಗೆ ಬ್ಲೂಟೂತ್ ಮತ್ತು ಮೀಸಲಾದ ಅಪ್ಲಿಕೇಶನ್ ಮೂಲಕ ಸ್ಮಾರ್ಟ್‌ಫೋನ್‌ಗೆ ಕನೆಕ್ಟ್ ಮಾಡಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೌಲ್ಯಭ್ಯವನ್ನು ಒದಗಿಸುತ್ತದೆ. ಈ ಬೈಕಿನಲ್ಲಿ ವೃತ್ತಾಕಾರದ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ. ಇನ್ನು ಇದರಲ್ಲಿ ಸ್ಪ್ಲಿಟ್ ಸೀಟ್ ಮತ್ತು ಹಿಂಭಾಗದಲ್ಲಿ ಸ್ವಲ್ಪ ದೊಡ್ಡದಾದ ಗ್ರ್ಯಾಬ್ ಹ್ಯಾಂಡಲ್ ಹೊಂದಿರುತ್ತದೆ.

ಈ ಹೊಸ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಹ್ಯಾಲೊಜೆನ್ ಯುನಿಟ್ ಸುತ್ತ ವೃತ್ತಾಕಾರದ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ನವೀಕರಿಸಿದ ಹೆಡ್ ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿವೆ. ಇನ್ನು ಹ್ಯಾಂಡಲ್‌ಬಾರ್ ಗ್ರಿಪ್ಸ್ ಮತ್ತು ಸ್ವಿಚ್‌ಗಿಯರ್‌ಗಳನ್ನು ಸಹ ಹೊಂದಿರುತ್ತದೆ.

ಈ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಪ್ರಸ್ತುತ ಮಾದರಿಯಂತೆಯೇ ವಿನ್ಯಾಸ ಮತ್ತು ಸಿಲೂಯೆಟ್ ಅನ್ನು ಮುಂದಕ್ಕೆ ಸಾಗಿಸಿದೆ. ಈ ಹೊಸ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕಿನ ಪ್ಲಾಟ್‌ಫಾರ್ಮ್ ಮತ್ತು ಎಂಜಿನ್ ಸೆಟಪ್‌ನಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗುತ್ತದೆ.
| Royal Enfield Classic 350
| Latest Price | Previous Price | Premium |
| Single-channel ABS, Chestnut Red, Ash, Mercury Silver, Redditch Red, Pure Black | ₹1,79,782 | ₹1,72,466 | ₹7,316 |
| Dual-channel ABS, Classic Black, Pure Black & Mercury Silver | ₹1,88,531 | Pure Black & Mercury Silver: ₹1,80,877, Classic Black: ₹1,80,879 | Pure Black & Mercury Silver: ₹7,654, Classic Black: ₹7,652 |
| Dual-channel ABS, Gunmetal Grey | ₹2,03,480 (Alloy)
₹1,90,555 (Spoke) | ₹1,95,252 (Alloy)
₹1,82,825 (Spoke) | ₹8,228 (Alloy)
₹7,730 (Spoke) |
| Dual-channel ABS, Signals edition (Airborne Blue & Stormrider Sand) | ₹1,99,777 | Airborne Blue: ₹1,91,693,
Stormrider Sand: ₹1,91,692 | Airborne Blue: ₹8,084
Stormrider Sand: ₹8,085 |
| Dual-channel ABS, Stealth Black & Chrome Black | ₹2,06,962 | ₹1,98,600 | ₹8,362 |
| Dual-Channel ABS, Orange Ember & Metallo Silver | ₹2,03,480 | ₹1,95,252 | ₹8,228 |

2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಅನ್ನು ಹೊಸ ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ನಲ್ಲಿ ತಯಾರಿಸಲಾಗುತ್ತದೆ. ಈ ಬೈಕಿನಲ್ಲಿ ಹೊಸ 350ಸಿಸಿ, ಸುಧಾರಿತ ಎಸ್‌ಒಹೆಚ್‌ಸಿ ಕಾನ್ಫಿಗರೇಶನ್‌ನೊಂದಿಗೆ ಸಿಂಗಲ್ ಸಿಲಿಂಡರ್ ಫ್ಯೂಯಲ್ ಇಂಜೆಕ್ಟ್ ಎಂಜಿನ್ ಒಳಗೊಂಡಿರುತ್ತದೆ.

ಈ 350ಸಿಸಿ ಎಂಜಿನ್ 20.2 ಬಿಹೆಚ್‌ಪಿ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. ಈ ನ್ಯೂ ಜನರೇಷನ್ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ದೇಶೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








