ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಪ್ರಸ್ತುತ ಮಾರಾಟದ ನಿಧಾನಗತಿಯ ಕಾರಣದಿಂದಾಗಿ, ರಾಯಲ್ ಎನ್‌ಫೀಲ್ಡ್ ಕಂಪನಿಯು ಕಳೆದ ತಿಂಗಳ ಮಾರಾಟದಲ್ಲಿ ಗಣನೀಯ ಕುಸಿತವನ್ನು ಕಂಡಿದೆ. ಅದರ ಹೆಚ್ಚಿನ ಮಾದರಿಗಳು ಮಾರಾಟದಲ್ಲಿ ಕುಸಿತವನ್ನು ಕಂಡಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ತಯಾರಕರ ಶ್ರೇಣಿಯಲ್ಲಿ ಮಾರಾಟದಲ್ಲಿ ಬೆಳವಣಿಗೆಯನ್ನು ಕಂಡ ಏಕೈಕ ಮಾದರಿ. ಕಳೆದ ವರ್ಷ ನವೆಂಬರ್‌ನಲ್ಲಿ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಅನ್ನು ಬಿಡುಗಡೆ ಮಾಡಿದಂತೆ, ಇದರಿಂದ ಹೋಲಿಕೆಗಾಗಿ ಯಾವುದೇ ವರ್ಷದಿಂದ ವರ್ಷದ ಅಂಕಿಅಂಶಗಳನ್ನು ಹೊಂದಿಲ್ಲ, ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಮಾದರಿಯ 7,851 ಯೂನಿಟ್ ಗಳು ಮಾರಾಟವಾಗಿವೆ. ಇದು ಹಿಮಾಲಯನ್ ಬೈಕ್ ನಂತೆ ಉತ್ತಮ ಸಂಖ್ಯೆಯ ಮಾರಾಟವಾಗಿದೆ. ಇನ್ನು ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕ್ ತಿಂಗಳಿನಿಂದ ತಿಂಗಳಿ ಮಾರಾಟದಲ್ಲಿ ಶೇ.26.96 ರಷ್ಟು ಮಾರಾಟ ಬೆಳವಣಿಗೆಯನ್ನು ಕಂಡಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕನ್ನು ತಮಿಳುನಾಡು ಮತ್ತು ಯುಕೆ ಮೂಲದ ಆರ್‌ಇ ತಂಡವು ವಿನ್ಯಾಸಗೊಳಿಸಿದೆ. ಹಿಂದಿನ ಥಂಡರ್‌ಬರ್ಡ್ ಎಕ್ಸ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿರುವ ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್‌ಬರ್ಡ್ ಬೈಕಿಗಿಂತಲೂ ಸಾಕಷ್ಟು ವಿಭಿನ್ನವಾಗಿ ಮತ್ತು ಆಕರ್ಷಕವಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ 349 ಸಿಸಿ, ಏರ್/ಆಯಿಲ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದರಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಕೂಡ ಪಡೆಯುತ್ತದೆ.ಇನ್ನು ಈ ಎಂಜಿನ್ 20.2 ಬಿಹೆಚ್‍ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಇನ್ನು ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕ್ ಅನ್ನು ಕಂಪನಿಯ ಹೊಸ ಜೆ ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಲಾಗಿದ್ದು ಅದು ಹೊಸ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಅನ್ನು ಸಹ ಆಧಾರಗೊಳಿಸುತ್ತದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಅನುಭವ ನೀಡುತ್ತದೆ. ಈ ಬೈಕಿನ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ಅನ್ನು ನೀಡಲಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನ ಮುಂಭಾಗ 19-ಇಂಚಿನ ಮತ್ತು ಹಿಂಭಾಗದಲ್ಲಿ 17-ಇಂಚಿನ ಅಲಾಯ್ ವ್ಹೀಲ್ ಗಳನ್ನು ಜೋಡಿಸಲಾಗಿದೆ. ಇದು ಕ್ರಮವಾಗಿ 100 / 90-19 57 ಪಿ ಮತ್ತು 140 / 70-17 66 ಪಿ ಸಿಯೆಟ್ ಟ್ಯೂಬ್‌ಲೆಸ್ ಟೈರ್ ಅನ್ನು ಒಳಗೊಂಡಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಇದರೊಂದಿಗೆ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ ಟಿಪ್ಪರ್ ಪಾಡ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇನ್ನು ಇದರೊಂದಿಗೆ ಹಲವಾರು ಫೀಚರ್ಸ್ ಗಳನ್ನು ಒಳಗೊಂಡಿವೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ರಾಯಲ್ ಎನ್‍ಫೀಲ್ಡ್ ಮೆಟಿಯೊರ್ 350 ಬೈಕ್‌ ಅನ್ನು ಸಹ ವಿಶ್ವದ ಹಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕ್‌ಗಳನ್ನು ಥೈಲ್ಯಾಂಡ್, ಯುರೋಪ್ ಸೇರಿದಂತೆ ಹಲವು ದೇಶಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಇದು ಉತ್ತಮವಾಗಿ ಮಾರಾಟವಾಗುತ್ತಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಕಳೆದ ತಿಂಗಳಿನಲ್ಲಿ 40,611 ಬೈಕ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 62,000ಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕೆಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ರಾಯಲ್ ಎನ್‌ಫೀಲ್ಡ್ ಕಂಪನಿಯು ವರ್ಷದಿಂದ ವರ್ಷದ ಮಾರಾಟದಲ್ಲಿ ಶೇ.38.13 ಇಳಿಕೆಯನ್ನು ಕಂಡಿದೆ. ಇನ್ನು ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 3,522 ಯುನಿಟ್‌ಗಳನ್ನು ರಫ್ತು ಮಾಡಿದ್ದಾರೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಕಳೆದ ವರ್ಷ ಇದೇ ಅವಧಿಯಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 4,033 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ ಶೇ.12.67 ರಷ್ಟು ಕುಸಿತವನ್ನು ಕಂಡಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಈ ಬಾರಿ ಮಾರಾಟದಲ್ಲಿ ದೊಡ್ಡ ಕುಸಿತವನ್ನು ಕಂಡಿದೆ. ಮಾರಾಟದ ಜೊತೆ ರಫ್ತಿನಲ್ಲಿಯು ಕೂಡ ಈ ಬಾರಿ ಕುಸಿತವನ್ನು ಕಂಡಿದೆ,

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ಇನ್ನು ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮಾದರಿಯ ಒಟ್ಟು 3,728 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷ ಇದೇ ತಿಂಗಳಲ್ಲಿ ಹಿಮಾಲಯನ್ ಮಾದರಿಯ 1,791 ಯುನಿಟ್‌ಗಳು ಮಾರಾಟವಾಗಿತ್ತು. ಹಿಮಾಲಯನ್ ಕಳೆದ ತಿಂಗಳು ಶೇ.108.15 ಶೇಕಡಾ ಮಾರಾಟದಲ್ಲಿ ವರ್ಷದಿಂದ ವರ್ಷಕ್ಕೆ ಬೆಳವಣಿಗೆಯನ್ನು ಸಾಧಿಸಿದೆ, ಭಾರತದ ಆಟೋಮೊಬೈಲ್ ಮಾರುಕಟ್ಟೆಯು ಇತ್ತೀಚಿನ ದಿನಗಳಲ್ಲಿ ಮಾರಾಟ ಕುಸಿತವನ್ನು ಅನುಭವಿಸುತ್ತಿರುವ ಹೊರತಾಗಿಯೂ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ತನ್ನ ಮಾರಾಟದ ಅಂಕಿಅಂಶಗಳನ್ನು ಹಸಿರು ಬಣ್ಣದಲ್ಲಿ ಇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Meteor 350 ಬೈಕ್

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್‌ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಬಾರತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಹೊಸ ಬೈಕ್‌ಗಳ ಪರಿಚಯಿಸುವ ಮೂಲಕ ಮಾರಾಟದ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ರಾಯಲ್ ಎನ್‌ಫೀಲ್ಡ್ ಭಾರತದಲ್ಲಿ ಎರಡು 650ಸಿಸಿ ಬೈಕ್‍ಗಳನ್ನು ಪರೀಕ್ಷಿಸಲಾಗುತ್ತಿದೆ.

Most Read Articles

Kannada
English summary
Royal enfield meteor 350 october 2021 sales report check details here
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X