Just In
- 2 hrs ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 2 hrs ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 3 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 4 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- Movies
ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ದಂಪತಿಗೆ ಕೊರೊನಾ
- News
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹಾಗೂ ಅಖಿಲೇಶ್ ಯಾದವ್ಗೆ ಕೊರೊನಾ
- Lifestyle
ಬೆಳಿಗ್ಗೆ ಎದ್ದ ಕೂಡಲೇ ನೀವು ಯಾಕೆ ಸುಸ್ತಾಗುತ್ತೀರಿ? ಈ ಪರಿಹಾರಗಳಿಂದ ನಿಮ್ಮ ಸುಸ್ತು ದೂರವಾಗುತ್ತೆ!
- Sports
ಐಪಿಎಲ್ 2021: ಅತಿ ದೊಡ್ಡ ಮೈಲಿಗಲ್ಲು ಮುಟ್ಟಲು ವಿರಾಟ್ ಕೊಹ್ಲಿ ಮತ್ತಷ್ಟು ಸನಿಹ
- Finance
ಸತತ 15ದಿನಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸವಿಲ್ಲ
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
ರಾಯಲ್ ಎನ್ಫೀಲ್ಡ್ ನಿರ್ಮಾಣದ ಹೊಸ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕ್ರೂಸರ್ ಬೈಕ್ ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರತೀಯ ಆಟೋಉದ್ಯಮದಲ್ಲಿ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಯೊಂದಕ್ಕೆ ಭಾಜನವಾಗಿದೆ.

ಹೌದು, ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗುವುದರ ಜೊತೆಗೆ 2021ರ ಇಂಡಿಯನ್ ಮೋಟಾರ್ಸೈಕಲ್ ಆಫ್ ಇಯರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು, ಪ್ರತಿಷ್ಠಿತ ಪ್ರಶಸ್ತಿಗಾಗಿ ಪೈಪೋಟಿಯಲ್ಲಿದ್ದ ಹಲವು ಬೈಕ್ ಮಾದರಿಗಳನ್ನು ಹಿಂದಿಕ್ಕಿ ಮಿಟಿಯೊರ್ 350 ಮಾದರಿಯು ವರ್ಷದ ಅತ್ಯುತ್ತಮ ಬೈಕ್ ಆವೃತ್ತಿಯಾಗಿ ಹೊರಹೊಮ್ಮಿದೆ.

2021ರ ಇಂಡಿಯನ್ ಮೋಟಾರ್ಸೈಕಲ್ ಆಫ್ ಇಯರ್ ಪ್ರಶಸ್ತಿಗಾಗಿ ಭಾರೀ ಪೈಪೋಟಿಯಲ್ಲಿದ್ದ ಬಜಾಜ್ ಡೊಮಿನಾರ್ 250, ಹೀರೊ ಗ್ಲಾಮರ್ 125, ಹೀರೋ ಪ್ಯಾಶನ್ ಪ್ರೊ, ಹೀರೊ ಎಕ್ಸ್ಟ್ರಿಮ್ 160ಆರ್, ಹೋಂಡಾ ಹಾರ್ನೆಟ್ 2.0, ಹಸ್ಕವರ್ನಾ ಸ್ವಾರ್ಟ್ಪಿಲೆನ್ 250 ಮತ್ತು ಕೆಟಿಎಂ 390 ಅಡ್ವೆಂಚರ್ ಬೈಕ್ ಮಾದರಿಗಳನ್ನು ಹಿಂದಿಕ್ಕಿ ಆರ್ಇ ಮಿಟಿಯೊರ್ 350 ಬೈಕ್ ಪ್ರತಿಷ್ಠಿತ ಪಡೆದುಕೊಂಡಿತು.

ಆರ್ಇ ಮಿಟಿಯೊರ್ 350 ಬೈಕ್ ಮಾದರಿಗೆ ತೀವ್ರ ಪೈಪೋಟಿ ನೀಡಿದ್ದ ಕೆಟಿಎಂ 390 ಅಡ್ವೆಂಚರ್ ಮತ್ತು ಹೀರೊ ಎಕ್ಸ್ಟ್ರಿಮ್ 160ಆರ್ ಬೈಕ್ ಮಾದರಿಗಳನ್ನು ರನ್ನರ್ ಅಪ್ ಎಂದು ಘೋಷಣಿಸಲಾಗಿದ್ದು, ಸುಧಾರಿತ ತಂತ್ರಜ್ಞಾನ, ವಿನ್ಯಾಸ, ಎಂಜಿನ್ ಮತ್ತು ಪರ್ಫಾಮೆನ್ಸ್ ಮತ್ತು ಬೆಲೆ ಅಂಶಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

2007ರಿಂದ ಆರಂಭವಾಗಿರುವ ಇಂಡಿಯನ್ ಮೋಟಾರ್ಸೈಕಲ್ ಆಫ್ ಇಯರ್ ಪ್ರಶಸ್ತಿಯು ಭಾರತೀಯ ಆಟೋ ಉದ್ಯಮದಲ್ಲಿನ ಪ್ರತಿಷ್ಠಿತ ಪ್ರಶಸ್ತಿ ಎಂದೇ ಪರಿಣಿಸಲಾಗಿದ್ದು, ಇಂಡಿಯನ್ ಮೋಟಾರ್ಸೈಕಲ್ ಆಫ್ ಇಯರ್ ಪ್ರಶಸ್ತಿಯನ್ನು ಹಲವಾರು ಅಂಶಗಳನ್ನು ಪರಿಗಣಿಸಿ ಪ್ರಶಸ್ತಿಯನ್ನು ನಿರ್ಧರಿಸಲಾಗುತ್ತದೆ. 2021ರ ಇಂಡಿಯನ್ ಮೋಟಾರ್ಸೈಕಲ್ ಆಫ್ ಇಯರ್ ಪ್ರಶಸ್ತಿ ಪಡೆದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕ್ ಮಾದರಿಯು ಇದೀಗ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಗೊಂದಿಗೆ ಗ್ರಾಹಕರ ಗರಿಷ್ಠ ಬೇಡಿಕೆಗಳನ್ನು ಪೂರೈಸುವ ಮೂಲಕ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ.

ರಾಯಲ್ ಎನ್ಫೀಲ್ಡ್ ನಿರ್ಮಾಣದ ಈ ಹಿಂದಿನ ಥಂಡರ್ಬರ್ಡ್ ಎಕ್ಸ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿರು ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್ಬರ್ಡ್ ಬೈಕಿಗಿಂತಲೂ ಸಾಕಷ್ಟು ವಿಭಿನ್ನತೆಗಳನ್ನು ಹೊಂದಿದ್ದು, ಹೊಸ ಬೈಕ್ ಮಾದಿರಿಯು ಫೈರ್ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್ನೊವಾ ಎಂಬ ಮೂರು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ.

ಹೊಸ ಬೈಕ್ ಮಾದರಿಯು ಸದ್ಯ ಬೆಂಗಳೂರಿನಲ್ಲಿ ಆನ್ರೋಡ್ ಪ್ರಕಾರ ಆರಂಭಿಕವಾಗಿ ರೂ.2.22 ಲಕ್ಷ (ಫೈರ್ಬಾಲ್), ರೂ. 2.28 ಲಕ್ಷ (ಸ್ಟೆಲ್ಲಾರ್) ಮತ್ತು ಹೈ ಎಂಡ್ ಮಾದರಿಯಾದ (ಸೂಪರ್ನೊವಾ) ಮಾದರಿಯು ರೂ. 2.40 ಲಕ್ಷ ಬೆಲೆ ಹೊಂದಿದೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಡಬಲ್ ಡೌನ್ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್ ಅಬ್ಸಾರ್ಬರ್ ನೀಡಲಾಗಿದೆ.

ಹೊಸ ಬೈಕಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಥಂಡರ್ಬರ್ಡ್ ಎಕ್ಸ್ ಮಾದರಿಗಿಂತಲೂ 6 ಕೆ.ಜಿ ಕಡಿಮೆ ತೂಕ ಹೊಂದಿರುವ ಹೊಸ ಮಿಟಿಯೊರ್ 350 ಬೈಕ್ ಮಾದರಿಯು 1,400-ಎಂಎಂ ವೀಲ್ಹ್ಬೆಸ್, 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ. ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಹೊಸದಾಗಿ ಅಭಿವೃದ್ದಿಗೊಳಿಸಲಾದ ಜೆ-ಸೀರಿಸ್ ಮಾದರಿಯ ಎಂಜಿನ್ ಬಳಕೆ ಮಾಡಲಾಗಿದ್ದು, ಹೊಸ ಎಂಜಿನ್ನಿಂದಾಗಿ ಬೈಕಿನ ವೈಬ್ರೆಷನ್ ಪ್ರಮಾಣವು ಸಾಕಷ್ಟು ಸುಧಾರಣೆಯಾಗಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ನೊಂದಿಗೆ 20.2-ಬಿಎಚ್ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಇದರೊಂದಿಗೆ ಹೊಸ ಬೈಕಿನಲ್ಲಿ ಟಿಪ್ಪರ್ ಪಾಡ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.