ಯುಎಸ್ಎದಲ್ಲಿ ಬಿಡುಗಡೆಗೆ ಸಜ್ಜಾದ ಮೇಡ್ ಇನ್ ಇಂಡಿಯಾ ಆರ್‌ಇ ಮಿಟಿಯೊರ್ 350

ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಪ್ರಮುಖ ಕ್ಲಾಸಿಕ್ ಬೈಕ್ ಮಾದರಿಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡುತ್ತಿದ್ದು, ಹೊಸದಾಗಿ ಬಿಡುಗಡೆಯಾದ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಯುಎಸ್ಎದಲ್ಲಿ ಬಿಡುಗಡೆಗೆ ಸಜ್ಜಾದ ಮೇಡ್ ಇನ್ ಇಂಡಿಯಾ ಆರ್‌ಇ ಮಿಟಿಯೊರ್ 350

ಭಾರತದಿಂದ ರಫ್ತುಗೊಳ್ಳುವ ಹೊಸ ವಾಹನಗಳಲ್ಲಿ ರಾಯಲ್ ಎನ್‌ಫೀಲ್ಡ್ ನಿರ್ಮಾಣದ ವಿವಿಧ ಬೈಕ್ ಮಾದರಿಗಳು ಈಗಾಗಲೇ ಮುಂಚೂಣಿಯಲ್ಲಿದ್ದು, ಕಂಪನಿಯು ದೇಶಿಯ ಮಾರುಕಟ್ಟೆಯಿಂದಲೇ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಫ್ತು ಕೈಗೊಳ್ಳುತ್ತದೆ. ಇತ್ತೀಚೆಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿರುವ ಮಿಟಿಯೊರ್ 350 ಬೈಕ್ ಮಾದರಿಯು ಸಹ ಸದ್ಯ ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಇತರೆ ಬೈಕ್ ಮಾದರಿಗಳಿಂತಲೂ ಹೆಚ್ಚು ಆಕರ್ಷಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಬೈಕ್ ಮಾದರಿಗೆ ವಿದೇಶಿ ಮಾರುಕಟ್ಟೆಯಲ್ಲಿ ಉತ್ತಮ ಪ್ರಕ್ರಿಯೆ ವ್ಯಕ್ತವಾಗಿದೆ.

ಯುಎಸ್ಎದಲ್ಲಿ ಬಿಡುಗಡೆಗೆ ಸಜ್ಜಾದ ಮೇಡ್ ಇನ್ ಇಂಡಿಯಾ ಆರ್‌ಇ ಮಿಟಿಯೊರ್ 350

ಭಾರತದಲ್ಲಿ ಬಿಡುಗಡೆಯ ನಂತರ ಮೊದಲ ಬಾರಿಗೆ ಥೈಲ್ಯಾಂಡ್‌ ಪ್ರವೇಶಿಸಿರುವ ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಇದೀಗ ಯುಎಸ್ಎದಲ್ಲೂ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದೆ.

ಯುಎಸ್ಎದಲ್ಲಿ ಬಿಡುಗಡೆಗೆ ಸಜ್ಜಾದ ಮೇಡ್ ಇನ್ ಇಂಡಿಯಾ ಆರ್‌ಇ ಮಿಟಿಯೊರ್ 350

ಭಾರತದಲ್ಲಿ ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.84 ಲಕ್ಷದಿಂದ ರೂ. 1.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಯುಎಸ್ಎ ಬಿಡುಗಡೆಯಾಗಲಿರುವ ಬೈಕ್ ಮಾದರಿಯು ಕೆಲವು ಸ್ಟ್ಯಾಂಡರ್ಡ್ ಫೀಚರ್ಸ್‌ಗಳೊಂದಿಗೆ ಬೆಲೆಯಲ್ಲೂ ತುಸು ದುಬಾರಿಯಾಗಲಿದೆ.

ಯುಎಸ್ಎದಲ್ಲಿ ಬಿಡುಗಡೆಗೆ ಸಜ್ಜಾದ ಮೇಡ್ ಇನ್ ಇಂಡಿಯಾ ಆರ್‌ಇ ಮಿಟಿಯೊರ್ 350

ಹೊಸ ಬೈಕ್ ಮಾದರಿಯು ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದೆ. ಹೊಸ ಬೈಕಿನ ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ನೀಡಲಾಗಿದೆ.

ಯುಎಸ್ಎದಲ್ಲಿ ಬಿಡುಗಡೆಗೆ ಸಜ್ಜಾದ ಮೇಡ್ ಇನ್ ಇಂಡಿಯಾ ಆರ್‌ಇ ಮಿಟಿಯೊರ್ 350

ಹೊಸ ಬೈಕಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಥಂಡರ್‌ಬರ್ಡ್ ಎಕ್ಸ್ ಮಾದರಿಗಿಂತಲೂ 6 ಕೆ.ಜಿ ಕಡಿಮೆ ತೂಕ ಹೊಂದಿರುವ ಹೊಸ ಮಿಟಿಯೊರ್ 350 ಬೈಕ್ ಮಾದರಿಯು 1,400-ಎಂಎಂ ವೀಲ್ಹ್‌ಬೆಸ್, 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ. ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಹೊಸದಾಗಿ ಅಭಿವೃದ್ದಿಗೊಳಿಸಲಾದ ಜೆ-ಸೀರಿಸ್ ಮಾದರಿಯ ಎಂಜಿನ್ ಬಳಕೆ ಮಾಡಲಾಗಿದ್ದು, ಹೊಸ ಎಂಜಿನ್‌ನಿಂದಾಗಿ ಬೈಕಿನ ವೈಬ್ರೆಷನ್ ಪ್ರಮಾಣವು ಸಾಕಷ್ಟು ಸುಧಾರಣೆಯಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಯುಎಸ್ಎದಲ್ಲಿ ಬಿಡುಗಡೆಗೆ ಸಜ್ಜಾದ ಮೇಡ್ ಇನ್ ಇಂಡಿಯಾ ಆರ್‌ಇ ಮಿಟಿಯೊರ್ 350

ಎಂಜಿನ್ ಮತ್ತು ಪರ್ಫಾಮೆನ್ಸ್

ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇ‌ರ್‌ಬಾಕ್ಸ್‌ನೊಂದಿಗೆ 20.2-ಬಿಎಚ್‌ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಯುಎಸ್ಎದಲ್ಲಿ ಬಿಡುಗಡೆಗೆ ಸಜ್ಜಾದ ಮೇಡ್ ಇನ್ ಇಂಡಿಯಾ ಆರ್‌ಇ ಮಿಟಿಯೊರ್ 350

ಮಿಟಿಯೊರ್ 350 ಆರಂಭಿಕ ಮಾದರಿಯಾದ ಫೈರ್‌ಬಾಲ್‌ನಲ್ಲಿ ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಟೋನ್ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಔಟ್ ಎಂಜಿನ್ ಮತ್ತು ಕಲರ್ ರಿಮ್ ಟೇಪ್ ಅಳವಡಿಸಲಾಗಿದ್ದು, ಎರಡನೇ ಮಾದರಿಯಾದ ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್‌ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್‌ಬಾರ್ ಮತ್ತು ಕ್ರೋಮ್ ಇಎಫ್‌ಐ ಕವರ್ ಪಡೆದುಕೊಂಡಿದ್ದು, ಇದರಲ್ಲಿ ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಯುಎಸ್ಎದಲ್ಲಿ ಬಿಡುಗಡೆಗೆ ಸಜ್ಜಾದ ಮೇಡ್ ಇನ್ ಇಂಡಿಯಾ ಆರ್‌ಇ ಮಿಟಿಯೊರ್ 350

ಹೈ ಎಂಡ್ ಮಾದರಿಯಾದ ಸೂಪರ್‌ನೊವಾದಲ್ಲಿ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್‌ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ. ಜೊತೆಗೆ ಹೊಸ ಬೈಕಿನಲ್ಲಿ ಟಿಪ್ಲರ್ ಸ್ಕ್ರೀನ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

Most Read Articles

Kannada
English summary
Royal Enfield Meteor 350 soon to launch in America. Read in Kannada.
Story first published: Friday, April 9, 2021, 1:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X