ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಕ್ಲಾಸಿಕ್ 350 ಮಾದರಿಗಳಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅವುಗಳನ್ನು ರಿಕಾಲ್ ಮಾಡಲು ಮುಂದಾಗಿದೆ. ಸರಿಸುಮಾರು 26,300 ಯುನಿಟ್‌ಗಳನ್ನು ರಿಕಾಲ್ ಮಾಡಲಾಗುತ್ತದೆ.

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

2021ರ ಸೆಪ್ಟೆಂಬರ್ 1 ಮತ್ತು ಡಿಸೆಂಬರ್ 5ರ ನಡುವೆ ತಯಾರಿಸಲಾದ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350(Royal Enfield Classic 350) ಮಾದರಿಗಳಲ್ಲಿ ದೋಷ ಕಂಡುಬಂದಿದೆ, ರಾಯಲ್ ಎನ್‌ಫೀಲ್ಡ್ ಪ್ರಕಾರ, ತಾಂತ್ರಿಕ ತಂಡವು 2021 ಸಿಂಗಲ್-ಚಾನೆಲ್ ಎಬಿಎಸ್ ಮತ್ತು ಕ್ಲಾಸಿಕ್ 350ಯ ಹಿಂದಿನ ಡ್ರಮ್ ಬ್ರೇಕ್ ರೂಪಾಂತರಗಳೆರಡರ ಸ್ವಿಂಗ್ ಆರ್ಮ್‌ಗೆ ಜೋಡಿಸಲಾದ ಬ್ರೇಕ್ ರಿಯಾಕ್ಷನ್ ಬ್ರಾಕೆಟ್‌ನಲ್ಲಿ ದೋಷ ಕಂಡುಬಂದಿದೆ. ಕೆಲವು ಬಾರಿ, ರೈಡಿಂಗ್ ಸಮಯದಲ್ಲಿ ಹಿಂಭಾಗದ ಬ್ರೇಕ್ ಪೆಡಲ್ನಲ್ಲಿ ಅಸಾಧಾರಣವಾಗಿ ಹೆಚ್ಚಿನ ಬ್ರೇಕಿಂಗ್ ಲೋಡ್ ಅನ್ನು ಅನ್ವಯಿಸುವುದರಿಂದ ಪ್ರತಿಕ್ರಿಯೆ ಬ್ರಾಕೆಟ್ನ ಸಂಭಾವ್ಯ ಹಾನಿಗೆ ಕಾರಣವಾಗಬಹುದು.

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ಇದರೊಂದಿಗೆ ಬ್ರೇಕಿಂಗ್ ದಕ್ಷತೆಯ ತೀವ್ರ ಕ್ಷೀಣತೆಗೆ ಕಾರಣವಾಗಬಹುದು. ಹಿಂದಿನ ಡ್ರಮ್ ಬ್ರೇಕ್ ಮತ್ತು ಸಿಂಗಲ್ ಚಾನೆಲ್ ಎಬಿಎಸ್ ಹೊಂದಿರುವ ಕ್ಲಾಸಿಕ್ 350 ಮಾದರಿಗಳಲ್ಲಿ ಮಾತ್ರ ಸಮಸ್ಯೆ ಕಂಡುಬಂದಿದೆ. ಎಲ್ಲಾ ಇತರ ರೂಪಾಂತರಗಳು ಈ ಸಮಸ್ಯೆಯನ್ನು ಹೊಂದಿಲ್ಲ.

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ಮುಂದಿನ ಕೆಲವು ದಿನಗಳಲ್ಲಿ, ರಾಯಲ್ ಎನ್‌ಫೀಲ್ಡ್ ಮತ್ತು ಅವರ ಡೀಲರ್‌ಶಿಪ್‌ಗಳು ರಿಕಾಲ್ ಮಾಡಲು ಮಾಲೀಕರನ್ನು ಸಂಪರ್ಕಿಸಲು ಪ್ರಾರಂಭಿಸುತ್ತವೆ. ಮಾಲೀಕರು ತಮ್ಮ ಮೋಟಾರ್‌ಸೈಕಲ್ ಅನ್ನು ಡೀಲರ್‌ಶಿಪ್‌ಗೆ ತರಬೇಕಾಗುತ್ತದೆ. ಅಲ್ಲಿ ರಾಯಲ್ ಎನ್‌ಫೀಲ್ಡ್ ಎಲ್ಲಾ ಸ್ವಿಂಗ್ ಆರ್ಮ್‌ನ ಬ್ರೇಕ್ ರಿಯಾಕ್ಷನ್ ಬ್ರಾಕೆಟ್ ಅನ್ನು ಬಲಪಡಿಸುತ್ತದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ರಾಯಲ್ ಎನ್‌ಫೀಲ್ಡ್ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ನೀವು ಅದನ್ನು ಪರಿಶೀಲಿಸಬಹುದು.

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ರಾಯಲ್ ಎನ್‌ಫೀಲ್ಡ್ ತನ್ನ 2021ರ ಕ್ಲಾಸಿಕ್ 350 ಬೈಕ್ ಅನ್ನು ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇತ್ತೀಚೆಗೆ ಈ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಉತ್ಪಾದನೆಯು 1 ಲಕ್ಷ ಮೈಲಿಗಲ್ಲನ್ನು ದಾಟಿದೆ. ಈ ಹೊಸ ಬೈಕ್ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿಯು ಮಾರಾಟವಾಗುತ್ತಿದೆ.

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಯುರೋಪ್, ದಕ್ಷಿಣ ಏಷ್ಯಾ, ದಕ್ಷಿಣ ಅಮೇರಿಕಾ, ಆಸ್ಟ್ರೇಲಿಯಾ, ಇತ್ಯಾದಿ ದೇಶಗಳಲ್ಲಿ ಮಾರಾಟವಾಗುತ್ತಿದೆ. ರಾಯಲ್ ಎನ್‌ಫೀಲ್ಡ್ ಈ ಮೈಲಿಗಲ್ಲನ್ನು ಬಹಳ ಹಿಂದೆಯೇ ಸಾಧಿಸುತ್ತಿತ್ತು, ಆದರೆ ಬಿಡಿ ಭಾಗಗಳ ಜಾಗತಿಕ ಕೊರತೆಯಿಂದ ತಡವಾಗಿದೆ. ಈ ಹೊಸ ಕ್ಲಾಸಿಕ್ 350 ಬೈಕಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ. ಇದರ ಪರಿಣಾಮವಾಗಿ ಕಾಯುವ ಅವಧಿಯು ಹೆಚ್ಚಾಗುತ್ತಿದೆ.

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ಈ ಹೊಸ ಬೈಕ್ ಮಾದರಿಯು ರೆಡ್‌ಡಿಚ್, ಹಾಲ್ಕೈನ್, ಸಿಗ್ನಲ್ಸ್, ಡಾರ್ಕ್ ಮತ್ತು ಕ್ರೋಮ್ ಎಂಬ ಐದು ವೆರಿಯೆಂಟ್ ಗಳಲ್ಲಿ ಲಭ್ಯವಿದೆ, ಈ ಹೊಸ ಬೈಕ್ J1A ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಲಾಗಿದೆ. ಇನ್ನು ಈ ಬೈಕ್ ಕ್ರೋಮ್ ರೆಡ್, ಕ್ರೋಮ್ ಬ್ರೊಂಜ್, ಡಾರ್ಕ್ ಸ್ಟೆಲ್ತ್ ಬ್ಲ್ಯಾಕ್, ಡಾರ್ಕ್ ಗನ್‌ಮೆಟಲ್ ಗ್ರೇ, ಸಿಗ್ನಲ್ಸ್ ಮಾರ್ಷ್ ಗ್ರೇ, ಸಿಗ್ನಲ್ಸ್ ಸ್ಯಾಂಡ್ ಸ್ಟಾರ್ಮ, ಹಾಲ್ಸಿಯಾನ್ ಗ್ರೀನ್, ಹಾಲ್ಸಿಯಾನ್ ಬ್ಲ್ಯಾಕ್, ಹಾಲ್ಸಿಯಾನ್ ಗ್ರೇ, ರೆಡ್‌ಡಿಚ್ ಗ್ರೀನ್ ಮತ್ತು ರೆಡ್‌ಡಿಚ್ ಗ್ರೇ ಎಂಬ ಬಣ್ಣಗಳನ್ನು ಹೊಂದಿದೆ.

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ಹೊಸ ಬೈಕ್ ಮಾದರಿಯು ಇತ್ತೀಚೆಗೆ ಬಿಡುಗಡೆಯಾಗಿರುವ ಮಿಟಿಯೊರ್ 350 ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದೆ. 2021ರ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಸಸ್ಷೆಂಷನ್ ಸೆಟಪ್ ಮತ್ತು ಬ್ರೇಕಿಂಗ್ ಸಿಸ್ಟಂ ಅನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಿದೆ, ಈ ಹೊಸ ಬೈಕಿನಲ್ಲಿ ಫ್ಯೂಲ್ ಗೇಜ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಪ್ರಮುಖ ಆಕರ್ಷಣೆಯಾಗಿದೆ.

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಮಿಟಿಯೊರ್ 350 ಮಾದರಿಗಾಗಿ ಪರಿಚಯಿಸಿರುವ 349 ಸಿಸಿ SOHC ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 19.1 ಬಿಎಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ,

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ಈ ಹಿಂದಿನ ಮಾದರಿಗಳಲ್ಲಿ ಇದ್ದ ವೈಬ್ರೆಷನ್ ಪ್ರಮಾಣವು ಗಣನೀಯವಾಗಿ ಸುಧಾರಣೆಯಾಗಿದೆ. ಜೊತೆಗೆ ಎಲೆಕ್ಟ್ರಾನಿಕ್ಸ್ ಸೌಲಭ್ಯಗಳು ಬೈಕ್ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಎಲ್‌ಸಿಡಿ ಜೊತೆಗೆ ಪ್ರತ್ಯೇಕವಾದ ಫ್ಯೂಲ್ ಗೇಜ್ ಮತ್ತು ಟ್ರಿಪ್ಲರ್ ಮೀಟರ್ ನೀಡಲಾಗಿದ್ದು, ಮಿಟಿಯೊರ್ ಮಾದರಿಯಲ್ಲಿರುವಂತೆ ಪ್ರತ್ಯೇಕವಾದ ಟ್ವಿನ್ ಪಾಡ್ ನೀಡದೆ ಇಂಟ್ರಾಗ್ರೆಟೆಡ್ ಮಾಡಲಾಗಿದೆ.

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ಟಾಪ್ ಎಂಡ್ ಮಾದರಿಗಳಿಗಾಗಿ ಮಾತ್ರವೇ ಕಂಪನಿಯು ಟ್ರಿಪ್ಪರ್ ಮೀಟರ್ ಅನ್ನು ಜೋಡಣೆ ಮಾಡಿದ್ದು, ಈ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಮೂಲಕ ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಆದರೆ ಹೊಸ ಬೈಕಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಎಲ್ಇಡಿ ಹೆಡ್‌ಲ್ಯಾಂಪ್‌ಗಳ ಬದಲಾಗಿ ಹಾಲೊಜೆನ್ ಬಲ್ಬ್ ಬಳಕೆ ಮಾಡಿದ್ದು, ಹೆಡ್‌ಲ್ಯಾಂಪ್ ಮಾತ್ರವಲ್ಲ ಟೈಲ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಹಾಲೊಜೆನ್ ಬಲ್ಬ್ ಸಹ ನೀಡಿದೆ,

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ಕಂಪನಿಯು ಹೊಸ ಬೈಕ್ ಮಾದರಿಯನ್ನು ಸಿಂಗಲ್ ಕ್ರೆಡಲ್ ಫ್ರೆಮ್ ಬದಲಾಗಿ ಡ್ಯುಯಲ್ ಡೌನ್ ಟ್ಯೂಬ್ ಚಾರ್ಸಿ‌ಯೊಂದಿಗೆ ಅಭಿವೃದ್ದಿಗೊಳಿಸಿದೆ. ಡಬಲ್ ಕ್ರೆಡ್ ಚಾರ್ಸಿಸ್ ಬದಲಾವಣೆಯಿಂದಾಗಿ ಬೈಕ್ ರೈಡಿಂಗ್ ದೂರದ ಪ್ರಯಾಣದಲ್ಲೂ ಉತ್ತಮ ಅನುಭವವನ್ನು ನೀಡುತ್ತದೆ. ಈ ಹೊಸ ಬೈಕ್ ಸಸ್ಪೆಂಕ್ಷನ್ 41 ಎಂಎಂ ಟೆಲಿಸ್ಕೊಪಿಕ್ ಫೋರ್ಕ್‌ನೊಂದಿಗೆ 170 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಇನ್ನು ಇದರ , ಈ ಬ್ರೇಕಿಂಗ್ ಕೂಡ ಸಾಕಷ್ಟು ಸುಧಾರಿಸಿದೆ. ಇದು ಎರಡೂ ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ,

ರಿಕಾಲ್ ಆಗುತ್ತಿದೆ ದೋಷಪೂರಿತ Royal Enfield Classic 350

ಇದರೊಂದಿಗೆ ಎಬಿಎಸ್‌ನೊಂದಿಗೆ ಸ್ಟ್ಯಾಂಡರ್ಡ್ ಆಗಿ ಹೊಂದಿದೆ. ಖರೀದಿದಾರರು ಆಯ್ಕೆ ಮಾಡಿದ ರೂಪಾಂತರವನ್ನು ಅವಲಂಬಿಸಿ ಸಿಂಗಲ್-ಚಾನೆಲ್ ಅಥವಾ ಡ್ಯುಯಲ್-ಚಾನೆಲ್ ಎಬಿಎಸ್ ಪಡೆಯುತ್ತಾರೆ ಒಟ್ಟಾರೆಯಾಗಿ, ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350ಹಳೆಯ ಮಾದರಿಗಿಂತ ದೊಡ್ಡ ಸುಧಾರಣೆಯಾಗಿದೆ.ಈ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೈನೆಸ್ ಸಿಬಿ350 ಮತ್ತು ಜಾವಾ ಬೈಕ್ ಗಳಿಗೆ ಪೈಪೋಟಿ ನೀಡುತ್ತಿದೆ.

Most Read Articles

Kannada
English summary
Royal enfield recalled the classic 350 model over braking issues details
Story first published: Monday, December 20, 2021, 15:15 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X