Just In
- 39 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 3 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ವ್ಯಕ್ತಿಚಿತ್ರ
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್
ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಫೆಬ್ರವರಿ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟು 69,659 ಬೈಕುಗಳನ್ನು ಮಾರಾಟಗೊಳಿಸಿವೆ.

ಇನ್ನು 2020ರ ಫೆಬ್ರವರಿ ತಿಂಗಳಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟು 63,536 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.10 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ 65,114 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು 2020ರ ಫೆಬ್ರವರಿಯಲ್ಲಿ 61,188 ಯುನಿಟ್‌ಗಳು ಮಾರಾಟವಾಗಿತ್ತು.

ಇದನ್ನು ಕಳೆದ ತಿಂಗಳ ದೇಶಿಯ ಮಾರುಕಟ್ಟೆಯ ಮಾರಾಟಕ್ಕೆ ಹೋಲಿಸಿದರೆ ಶೇ.6 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ದೇಶಿಯ ಮಾರುಕಟ್ಟೆಯ ರಾಯಲ್ ಎನ್‌ಫೀಲ್ಡ್ ಕಂಪನಿಯು ಕಳೆದ ತಿಂಗಳು ಬೈಕ್ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

2021ರ ಫೆಬ್ರವರಿ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 4,545 ಯುನಿಟ್‌ಗಳನ್ನು ರಫ್ತು ಮಾಡಿದೆ, ಒಂದು ವರ್ಷದ ಹಿಂದೆ ಇದೇ ತಿಂಗಳಲ್ಲಿ 2,348 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಇದು ರಫ್ತು ಅಂಕಿ ಅಂಶಗಳಲ್ಲಿ ಸುಮಾರು ಶೇ.94 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಇದಕ್ಕಾಗಿ ರಾಯಲ್ ಎನ್‌ಫೀಲ್ಡ್ ತನ್ನ ಸರಣಿಯಲ್ಲಿರುವ ಮಾದರಿಗಳನ್ನು ನವೀಕರಿಸಲಾಗುತ್ತಿದೆ ಮತ್ತು ವಿಸ್ತರಿಸಲಾಗುತ್ತಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ರಾಯಲ್ ಎನ್ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಮಾದರಿಗಳಾದ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕುಗಳನ್ನು ನವೀಕರಿಸಲಾಗುತ್ತಿದೆ. ಕಂಪನಿಯು ಈ ಎರಡು ಟ್ವಿನ್ ಬೈಕುಗಳ ಸೂಕ್ಷ್ಮ ನವೀಕರಣಗಳನ್ನು ಪರಿಚಯಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕುಗಳು ಭಾರತದಲ್ಲಿ ಪ್ರತ್ಯೇಕವಾಗಿ ಸ್ಪಾಟ್ ಟೆಸ್ಟ್ ಅನ್ನು ಈಗಾಗಲೇ ನಡೆಸಿದೆ.

ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕುಗಳು ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ. ಮಾಹಿತಿಯ ಪ್ರಕಾರ 2021ರ ರಾಯಲ್ ಎನ್‍ಫೀಲ್ಡ್ ಟ್ವಿನ್ ಬೈಕುಗಳು ರಾವಿಶಿಂಗ್ ಬ್ಲ್ಯಾಕ್, ಗ್ರೇ ಗೂಸ್, ವೆಂಚುರಾ ಬ್ಲೂ ಮತ್ತು ರಾಯಲ್ ರೆಡ್ ಎಂಬ ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ.p
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ 2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯು ಚೆನ್ನೈ ಎಕ್ಸ್ ಶೋರೂಂ ಪ್ರಕಾರ ರೂ.2.01 ಲಕ್ಷಗಳಾಗಿದೆ.

ಭಾರತೀಯ ಮಾರುಕಟ್ಟೆಯಲ್ಲಿ 2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ವಿತರಣೆಯನ್ನು ಪ್ರಾರಂಭಿಸಿದೆ. ಇನ್ನು 2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಹೊಸ ಫೀಚರ್ ಗಳು ಮತ್ತು ಮೂರು ಹೊಸ ಬಣ್ಣ ಆಯ್ಕೆಗಳನ್ನು ಪಡೆದುಕೊಂಡಿದೆ.

2021ರ ಫೆಬ್ರವರಿ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟದಲ್ಲಿ ಉತ್ತಮ ಬಳೆವಣಿಗೆಯನ್ನು ಸಾಧಿಸಿದೆ. ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ. ಇದರಿಂದ ಮಾರಾಟದಲ್ಲಿ ಮತಷ್ಟು ಬೆಳವಣಿಗೆಯನ್ನು ಸಾಧಿಸಲು ನೆರವಾಗುತ್ತದೆ.