ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಮಾರ್ಚ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟು 66,058 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 35,814 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.84 ರಷ್ಟು ಭಾರಿ ಬೆಳವಣಿಗೆಯನ್ನು ಸಾದಿಸಿದೆ. ಇನ್ನು ದೇಶೀಯ ಮಾರುಕಟ್ಟೆಯಲ್ಲಿ ಮಾತ್ರ, ರಾಯಲ್ ಎನ್‌ಫೀಲ್ಡ್ 2021ರ ಮಾರ್ಚ್ ತಿಂಗಳಿನಲ್ಲಿ 60,173 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಒಂದು ವರ್ಷದ ಹಿಂದೆ ದೇಶೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳಲ್ಲಿ 32,630 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾದ ಯುನಿಟ್‌ಗಳಿಗೆ ಹೋಲಿಸಿದರೆ ಶೇ.84 ಬೆಳವಣಿಗೆಯನ್ನು ಸಾಧಿಸಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು 650 ಟ್ವಿನ್ ಬೈಕ್ ಗಳು ಮತ್ತು ಹೊಸ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಜಾಗತಿಕ ಮಾದರಿಗಳಾಗಿ ಬಿಡುಗಡೆಗೊಳಿಸಿತ್ತು. ರಾಯಲ್ ಎನ್‌ಫೀಲ್ಡ್ ರಫ್ತು ಮತ್ತು ಹೊಸ ಜಾಗತಿಕ ಮಾರುಕಟ್ಟೆಗಳಲ್ಲಿ ಉಪಸ್ಥಿತಿಯು ಉತ್ತಮ ಫಲಿತಾಂಶಗಳನ್ನು ನೀಡುತ್ತಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಇದಕ್ಕಾಗಿ ರಾಯಲ್ ಎನ್‌ಫೀಲ್ಡ್ ತನ್ನ ಸರಣಿಯಲ್ಲಿರುವ ಮಾದರಿಗಳನ್ನು ನವೀಕರಿಸಲಾಗುತ್ತಿದೆ ಮತ್ತು ವಿಸ್ತರಿಸಲಾಗುತ್ತಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‍ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕ್‌ಗಳನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಎರಡು ಟ್ವಿನ್ ಬೈಕ್‌ಗಳು ಹೊಸ ನವೀಕರಣಗಳನ್ನು ಪಡೆದುಕೊಂಡಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

2021ರ ಕಾಂಟಿನೆಂಟಲ್ ಜಿ‍ಟಿ6 50 ಕೆಫೆ-ರೇಸರ್ ಬೈಕಿನ ಆರಂಭಿಕ ಬೆಲೆಯು ರೂ.2.91 ಲಕ್ಷಗಳಾದರೆ, ಇದರ ಕಸ್ಟಮ್ ಬಣ್ಣದ ಮಾದರಿಗೆ ರೂ.2.99 ಲಕ್ಷಗಳಾಗಿದೆ. ಇನ್ನು ಟಾಪ್-ಸ್ಪೆಕ್ ಮಿಸ್ಟರ್ ಕ್ಲೀನ್ ಬಣ್ಣದ ಮಾದರಿಯ ಬೆಲೆಯು ರೂ.2.99 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ದೆಹಲಿಯ ಎಕ್ಸ್ ಶೋರೂಂ ಪ್ರಕಾರವಾಗಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇತ್ತೀಚೆಗೆ ಬಿಡುಗಡೆಗೊಂಡ ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕ್‌ಗಳು ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. ಹೊಸ ಬಣ್ಣಗಳ ಹೊರತಾಗಿ, ಎರಡು ಬೈಕ್‌ಗಳು ಬ್ರ್ಯಾಂಡ್‌ನ ಮೇಕ್-ಇಟ್-ಯುವರ್ಸ್ ಕಸ್ಟಮೈಸ್ ಕಾರ್ಯಕ್ರಮದ ಭಾಗವಾಗಿದೆ. ಫಾಕ್ಟಿರಿಯಿದಲೇ ಗ್ರಾಹಕರು ತಮ್ಮ ಬೈಕಿನಲ್ಲಿ ತಮಗೆ ಇಷ್ಟವಿರುವಂತಹ ಮಾಡಿಫೈ ಅನ್ನು ಮಾಡಿಸಬಹುದು.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇದರೊಂದಿಗೆ ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ 2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯು ಚೆನ್ನೈ ಎಕ್ಸ್ ಶೋರೂಂ ಪ್ರಕಾರ ರೂ.2.01 ಲಕ್ಷಗಳಾಗಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.84ರಷ್ಟು ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

2021ರ ಮಾರ್ಚ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟದಲ್ಲಿ ಉತ್ತಮ ಬಳೆವಣಿಗೆಯನ್ನು ಸಾಧಿಸಿದೆ. ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ. ಇದರಿಂದ ಮಾರಾಟದಲ್ಲಿ ಮತಷ್ಟು ಬೆಳವಣಿಗೆಯನ್ನು ಸಾಧಿಸಲು ನೆರವಾಗುತ್ತದೆ.

Article Published On: Thursday, April 1, 2021, 21:29 [IST]
English summary
Royal Enfield Sales Grow 84 Per Cent. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+