ಜೂನ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಜೂನ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟಾರೆ 43,048 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ.

ಜೂನ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಕಳೆದ ವರ್ಷದ ಜೂನ್ ತಿಂಗಳಿನಲ್ಲಿ 38,065 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.13 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು 7,233 ಯುನಿಟ್‌ಗಳನ್ನು ರಫ್ಟು ಮಾಡಲಾಗಿದೆ. ಇನ್ನು ಕಳೆದ ವರ್ಷದ ಜೂನ್ ತಿಂಗಳಿನಲ್ಲಿ 1,555 ಯುನಿಟ್‌ಗಳನ್ನು ರಫ್ಟು ಮಾಡಲಾಗಿದೆ. ಕಳೆದ ವರ್ಷದ ಜೂನ್ ತಿಂಗಳ ರಫ್ತನ್ನು ಈ ವರ್ಷದ ಜೂನ್ ತಿಂಗಳಿಗೆ ಹೋಲಿಸಿದರೆ ಶೇ.365 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಜೂನ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಒಟ್ಟಾರೆಯಾಗಿ, ರಾಯಲ್ ಎನ್‌ಫೀಲ್ಡ್ ಕಂಪನಿಯು ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ 35,815 ಯುನಿಟ್‌ಗಳನ್ನು ಮಾರಾಟಗೊಳಿಸಿದೆ. ಒಂದು ವರ್ಷದ ಹಿಂದೆ ಇದೇ ತಿಂಗಳಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 36,510 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು.

ಜೂನ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು 2021ರ ಮೊದಲ ತ್ರೈಮಾಸಿಕದಲ್ಲಿ ಮಾರಾಟದಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ (ಏಪ್ರಿಲ್ ನಿಂದ ಜೂನ್ 2021 ರವರೆಗೆ) ದೇಶೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 1,04,677 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಜೂನ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಈಗ 130 ಕ್ಕೂ ಹೆಚ್ಚು ವಿಶೇಷ ಮಳಿಗೆಗಳನ್ನು ಹೊಂದಿದ್ದು, 60ಕ್ಕೂ ಹೆಚ್ಚು ದೇಶಗಳಲ್ಲಿ 760 ಕ್ಕೂ ಹೆಚ್ಚು ಮಳಿಗೆಗಳನ್ನು ಹೊಂದಿದೆ. ಕಳೆದ ವರ್ಷ ರಾಯಲ್ ಎನ್‌ಫೀಲ್ಡ್ ಕಂಪನಿಯು ಜಪಾನ್, ಕಾಂಬೋಡಿಯಾ, ಕೋಸ್ಟರಿಕಾ ಮತ್ತು ಡೊಮಿನಿಕನ್ ರಿಪಬ್ಲಿಕ್‌ನಂತಹ ಹೊಸ ಮಾರುಕಟ್ಟೆಗಳಿಗೆ ಪ್ರವೇಶಿಸಿತು.

ಜೂನ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಕಂಪನಿಯು ತನ್ನ ಮೊದಲ ಸಿಕೆಡಿ ಯುನಿಟ್ ಅನ್ನು ಅರ್ಜೆಂಟೀನಾದ ಬ್ಯೂನಸ್ ಐರಿಸ್ನಲ್ಲಿ ವರ್ಷದಲ್ಲಿ ಪ್ರಾರಂಭಿಸಿತು. 2020ರಲ್ಲಿ ಬಿಡುಗಡೆಯಾದ ಹೊಸ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕ್ ಯುರೋಪ್, ಥೈಲ್ಯಾಂಡ್, ಇಂಡೋನೇಷ್ಯಾ, ಆಸ್ಟ್ರೇಲಿಯಾ, ಜಪಾನ್, ಉತ್ತರ ಅಮೆರಿಕಾ ಮತ್ತು ಯುರೋಪಿನಾದ್ಯಂತ ಪರಿಚಯಿಸಲಾಗಿದೆ.

ಜೂನ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಇದೀಗ ತನ್ನ ಪ್ರಮುಖ ಬೈಕ್ ಮಾದರಿಗಳಿಗೆ ಅತ್ಯುತ್ತಮ ಸರ್ವಿಸ್ ಸೇವೆಗಳನ್ನು ಒದಗಿಸಲು ಕೇರ್ 24 ಪ್ಯಾಕೇಜ್ ಘೋಷಣೆ ಮಾಡಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಘೋಷಣೆ ಮಾಡರುವ ಹೊಸ ಕೇರ್ 24 ಪ್ಯಾಕೇಜ್ ಮಾದರಿಯು ಸ್ಟ್ಯಾಂಡರ್ಡ್ ಸರ್ವಿಸ್ ಪ್ಯಾಕೇಜ್ ಹೊರತುಪಡಿಸಿ ಹೆಚ್ಚುವರಿ ಮೊತ್ತಕ್ಕೆ ಖರೀದಿ ಮಾಡಬೇಕಿದೆ.

ಜೂನ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಹೊಸ ಕೇರ್ 24 ಪ್ಯಾಕೇಜ್‌ನಲ್ಲಿ ನಿಗದಿ ಅವಧಿಯೊಳಗೆ ಮೂರು ಸಾಮಾನ್ಯ ಸರ್ವಿಸ್ ಮತ್ತು ಎರಡು ಬಾರಿ ಆಯಿಲ್ ಬದಲಾಯಿಸಿ ಕೊಡಲಾಗುತ್ತದೆ. ಕೇರ್ 24 ಸರ್ವಿಸ್ ಪ್ಯಾಕೇಜ್‌ಗೆ ರೂ. 2,499 ದರ ನಿಗದಿ ಮಾಡದ್ದು, ಹೊಸ ಸರ್ವಿಸ್ ಪ್ಯಾಕೇಜ್ ಗ್ರಾಹಕರ ಹೆಚ್ಚುವರಿಯಾಗಿ ಕೊಡುಗೆಗೆಗಳನ್ನು ಸಹ ನೀಡಲಾಗುತ್ತದೆ.

ಜೂನ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಹಲವಾರು ಹೊಸ ಮಾದರಿಗಳನ್ನು ಪರಿಚಯಿಸಲು ಸಜ್ಜಾಗುತ್ತಿದೆ. ಹೊಸ ಮಾದರಿಗಳು ಮುಂದಿನ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಇವುಗಳು ಮಾರಾಟವನ್ನು ಹೆಚ್ಚಿಸಲು ನೆರವಾಗುತ್ತದೆ.

Most Read Articles

Kannada
English summary
Royal Enfield Reported Just 13 Percent Over Sales Growth. Read In Kannada.
Story first published: Friday, July 2, 2021, 10:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X