ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಜುಲೈ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟಾರೆ 44,038 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಕಳೆದ ವರ್ಷದ ಜುಲೈ ತಿಂಗಳಿನಲ್ಲಿ 40,334 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಶೇ,9 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಕಳೆದ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 39,390 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ತಿಂಗಳು 4,748 ಯುನಿಟ್‌ಗಳನ್ನು ರಫ್ತು ಮಾಡಿದೆ. ರಫ್ತಿನಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಕಂಪನಿಯು ರಫ್ತಿನಲ್ಲಿ ಶೇ.9 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸುತ್ತಿದೆ, 2021ರ ಏಪ್ರಿಲ್-ಜುಲೈ ತಿಂಗಳುಗಳ ನಡುವೆ 23,711 ಯುನಿಟ್‌ಗಳನ್ನು ರಫ್ತು ಮಾಡಿದೆ. ಜಾಗತಿಕ ಮಟ್ಟದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್ ಗಳ ಬೇಡಿಕೆ ಹೆಚ್ಚಾಗುತ್ತಿದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಈಗ 130 ಕ್ಕೂ ಹೆಚ್ಚು ವಿಶೇಷ ಮಳಿಗೆಗಳನ್ನು ಹೊಂದಿದ್ದು, 60ಕ್ಕೂ ಹೆಚ್ಚು ದೇಶಗಳಲ್ಲಿ 760 ಕ್ಕೂ ಹೆಚ್ಚು ಮಳಿಗೆಗಳನ್ನು ಹೊಂದಿದೆ. ಕಳೆದ ವರ್ಷ ರಾಯಲ್ ಎನ್‌ಫೀಲ್ಡ್ ಕಂಪನಿಯು ಜಪಾನ್, ಕಾಂಬೋಡಿಯಾ, ಕೋಸ್ಟರಿಕಾ ಮತ್ತು ಡೊಮಿನಿಕನ್ ರಿಪಬ್ಲಿಕ್‌ನಂತಹ ಹೊಸ ಮಾರುಕಟ್ಟೆಗಳಿಗೂ ಪ್ರವೇಶಿಸಿತು.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಕಂಪನಿಯು ತನ್ನ ಮೊದಲ ಸಿಕೆಡಿ ಯುನಿಟ್ ಅನ್ನು ಅರ್ಜೆಂಟೀನಾದ ಬ್ಯೂನಸ್ ಐರಿಸ್ನಲ್ಲಿ ವರ್ಷದಲ್ಲಿ ಪ್ರಾರಂಭಿಸಿತು. 2020ರಲ್ಲಿ ಬಿಡುಗಡೆಯಾದ ಹೊಸ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕ್ ಯುರೋಪ್, ಥೈಲ್ಯಾಂಡ್, ಇಂಡೋನೇಷ್ಯಾ, ಆಸ್ಟ್ರೇಲಿಯಾ, ಜಪಾನ್, ಉತ್ತರ ಅಮೆರಿಕಾ ಮತ್ತು ಯುರೋಪಿನಾದ್ಯಂತ ಪರಿಚಯಿಸಿದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಬಹುನಿರೀಕ್ಷಿತ ಹೊಸ ಕ್ಲಾಸಿಕ್ 350 ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಹೊಸ ಬದಲಾಗಳೊಂದಿಗೆ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಈ ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತದಲ್ಲಿ ಹಲವು ಬಾರಿ ಸ್ಫಾಟ್ ಟೆಸ್ಟ್ ಅನ್ನು ನಡೆಸಲಾಗಿದೆ. ಈ 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ದೇಶೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‍ಫೀಲ್ಡ್ ತನ್ನ ಹಿಮಾಲಯನ್ ಅಡ್ವೆಂಚರ್ ಬೈಕಿನ ಹೊಸ ವೆರಿಯೆಂಟ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹಿಮಾಲಯನ್ ಬೈಕಿನ ಆನ್-ರೋಡ್-ರೋಡ್ ಆಧಾರಿತ ಹೊಸ ವೆರಿಯೆಂಟ್ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಪ್ರಮುಖ ಬೈಕ್ ಮಾದರಿಗಳಿಗೆ ಅತ್ಯುತ್ತಮ ಸರ್ವಿಸ್ ಸೇವೆಗಳನ್ನು ಒದಗಿಸಲು ಕೇರ್ 24 ಪ್ಯಾಕೇಜ್ ಘೋಷಣೆ ಮಾಡಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಘೋಷಣೆ ಮಾಡರುವ ಹೊಸ ಕೇರ್ 24 ಪ್ಯಾಕೇಜ್ ಮಾದರಿಯು ಸ್ಟ್ಯಾಂಡರ್ಡ್ ಸರ್ವಿಸ್ ಪ್ಯಾಕೇಜ್ ಹೊರತುಪಡಿಸಿ ಹೆಚ್ಚುವರಿ ಮೊತ್ತಕ್ಕೆ ಖರೀದಿ ಮಾಡಬೇಕಿದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಹಲವಾರು ಹೊಸ ಮಾದರಿಗಳನ್ನು ಪರಿಚಯಿಸಲು ಸಜ್ಜಾಗುತ್ತಿದೆ. ಹೊಸ ಮಾದರಿಗಳು ಮುಂದಿನ ತಿಂಗಳುಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಇವುಗಳು ಮಾರಾಟವನ್ನು ಹೆಚ್ಚಿಸಲು ನೆರವಾಗುತ್ತದೆ.

More from DriveSpark

Article Published On: Monday, August 2, 2021, 21:45 [IST]
English summary
Royal Enfield Sees 9 Per Cent Growth In Overall Sales. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+