ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಗಾಗಿ ಹೊಸ ಬೈಕ್‍ಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರತವಾಗಿದೆ, ಇದರಲ್ಲಿ ಕೆಲವು ಮಾದರಿಗಳು ಭಾರತದ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವಾಗ ಕಾಣಿಸಿಕೊಂಡಿದೆ.

ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಇತ್ತೀಚೆಗೆ ಸ್ಕ್ರ್ಯಾಮ್ ಎಂಬ ಹೊಸ ಹೆಸರಿಗಾಗಿ ಟ್ರೇಡ್‌ಮಾರ್ಕ್ ಅನ್ನು ಸಲ್ಲಿಸಿದೆ ಎಂದು ವರದಿಗಳಾಗಿದೆ. ಇದು ಹೊಸ ಸ್ಕ್ರಾಂಬ್ಲರ್ ಇದನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಪರಿಗಣಿಸಲಾಗುತ್ತಿದೆ. ಹೊಸ ಬೈಕನ್ನು 650 ಸಿಸಿ ವಿಭಾಗದ ಅಡಿಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಹೆಸರಿನ ಹೊರತಾಗಿ ರಾಯಲ್ ಎನ್‌ಫೀಲ್ಡ್ ಸ್ಕ್ರ್ಯಾಮ್‌ನ ಇತರ ವಿವರಗಳು ಬಹಿರಂಗಗೊಂಡಿಲ್ಲ.

ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

650 ಸಿಸಿ ವಿಭಾಗದಿಂದ ಅಸ್ತಿತ್ವದಲ್ಲಿರುವ ನೇಕೆಡ್ ಬೈಕ್ ಇಂಟರ್‌ಸೆಪ್ಟರ್ 650 ಅನ್ನು ವಿಶ್ವದಾದ್ಯಂತ ಅನೇಕ ಬೈಕ್ ಕಸ್ಟಮ್ಸ್ ಅವರು ಸ್ಕ್ರಾಂಬ್ಲರ್ ಮಾದರಿಯಾಗಿ ಮಾಡಿಫೈಗೊಳಿಸಲು ಆಯ್ಕೆ ಮಾಡುತ್ತಾರೆ. ಆಫ್-ರೋಡ್ ಮತ್ತು ಸ್ಕ್ರ್ಯಾಂಬ್ಲರ್ ಬೈಕ್ ಗಳ ಜನಪ್ರಿಯತೆ ಹೆಚ್ಚಾಗುತ್ತಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

ಇದೇ ಕಾರಣದಿಂದ ರಾಯಲ್ ಎನ್‌ಫೀಲ್ಡ್ ಮಾರುಕಟ್ಟೆಯಲ್ಲಿ ಕಾರ್ಯಕ್ಷಮತೆ ಸ್ಕ್ರ್ಯಾಂಬ್ಲರ್ ಮಾದರಿಯನ್ನು ಬಿಡುಗಡೆಗೊಳಿಸಲು ಮುಂದಾಗಿರಬಹುದು . ಸ್ಕ್ರ್ಯಾಮ್, 650 ಸಿಸಿ ವಿಭಾಗದಲ್ಲಿ ಬಿಡುಗಡೆಯಾದರೆ,ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ನಿಂದ ಅದೇ ಎಂಜಿನ್ ಮತ್ತು ಪ್ಲಾಟ್‌ಫಾರ್ಮ್ ಅನ್ನು ಬಳಸಬಹುದು.

ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

ಸ್ಕ್ರ್ಯಾಮ್‌ನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಸ್ಕ್ರ್ಯಾಂಬ್ಲರ್ ಬೈಕುಗಳು ಸಾಮಾನ್ಯವಾಗಿ ಒರಟಾದ ಲುಕ್ ನಿಂದ ಕೂಡಿರುತ್ತದೆ. ಸ್ಕ್ರ್ಯಾಮ್ ಇದೇ ರೀತಿಯ ವಿನ್ಯಾಸ ಹೊಂದಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

ಈ ಬೈಕಿನಲ್ಲಿ ಉದ್ದನೆಯ ಆಕಾರದ ಫ್ಯೂಯಲ್ ಟ್ಯಾಂಕ್, ಸಿಂಗಲ್ ಸ್ಪ್ಲೀಟ್ ಸೀಟ್, ಒಂದೇ ಬದಿಯಲ್ಲಿ ಜೋಡಿಸಲಾದ ಅಪ್-ಸ್ವಿಪ್ಟ್ ಡ್ಯುಯಲ್ ಎಕ್ಸಾಸ್ಟ್, ಹ್ಯಾಂಡಲ್‌ಬಾರ್, ಡಿಆರ್‌ಎಲ್‌ಗಳೊಂದಿಗೆ ಸುತ್ತಲೂ ಎಲ್ಇಡಿ ಲೈಟಿಂಗ್ ಮತ್ತು ಮುಂಭಾಗ ಮತ್ತು ಹಿಂಭಾಗದ ಫೆಂಡರ್‌ಗಳನ್ನು ಹೊಂದಿರುತ್ತದೆ.

ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ಈ ಹೊಸ ಸ್ಕ್ರ್ಯಾಮ್ ಬೈಕ್ ಬ್ರ್ಯಾಂಡ್‌ನ ಟಿಪ್ಪರ್ ನ್ಯಾವಿಗೇಷನ್ ಪಾಡ್‌ನೊಂದಿಗೆ ಸಿಂಗಲ್-ಪಾಡ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಸಹ ಹೊಂದುವ ನಿರೀಕ್ಷೆಯಿದೆ. ಬ್ಲೂಟೂತ್ ಮತ್ತು ಮೀಸಲಾದ ಅಪ್ಲಿಕೇಶನ್ ಮೂಲಕ ಸ್ಮಾರ್ಟ್‌ಫೋನ್‌ಗೆ ಕನೆಕ್ಟ್ ಮಾಡಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೌಲ್ಯಭ್ಯವನ್ನು ಒದಗಿಸುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

650 ಟ್ವಿನ್ ಬೈಕ್‌ಗಳಲ್ಲಿ ಇದ್ದ ಅದೇ, 649ಸಿಸಿ ಪ್ಯಾರಲಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 7,250 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 5,250 ಆರ್‌ಪಿಎಂನಲ್ಲಿ 52 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರ್ಯಾಮ್ ಬೈಕ್ ಮುಂಭಾಗದಲ್ಲಿ ಅಪ್ಸೈಡ್-ಡೌನ್ ಫ್ರಂಟ್ ಫೋರ್ಕ್ ಅನ್ನು ಸಹ ಒಳಗೊಂಡಿರಬಹುದು. ಕ್ರೂಸರ್'ನ ಉತ್ತಮ ನಿರ್ವಹಣಾ ಗುಣಲಕ್ಷಣಗಳಿಗೆ ಯುಎಸ್ಡಿ ಸಹಾಯ ಮಾಡುತ್ತದೆ. ಸ್ಕ್ರ್ಯಾಂಬ್ಲರ್ ಹಿಂಭಾಗದಲ್ಲಿ ಟ್ವಿನ್ ಶಾಕ್ ಯುನಿಟ್ ಅನ್ನು ಹೊಂದಿರುತ್ತದೆ.

ಸ್ಕ್ರ್ಯಾಮ್ ಹೆಸರಿಗಾಗಿ ಹೊಸ ಟ್ರೇಡ್‌ಮಾರ್ಕ್ ನೋಂದಾಯಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿರುತ್ತದೆ. ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗುತ್ತದೆ.

Most Read Articles

Kannada
English summary
Royal Enfield Scram Name Registered In India. Read In Kannada.
Story first published: Monday, May 24, 2021, 17:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X