ಟ್ವಿನ್ 650 ಹೊಸ ಆವೃತ್ತಿಗಳ ಟಿವಿ ಜಾಹೀರಾತು ಬಿಡುಗಡೆ ಮಾಡಿದ ರಾಯಲ್ ಎನ್‌ಫೀಲ್ಡ್
ರಾಯಲ್ ಎನ್‍ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಪ್ರೀಮಿಯಂ ಬೈಕ್ ಮಾದರಿಗಳಾದ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳನ್ನು ಇತ್ತೀಚೆಗೆ ಹೊಸ ಆವೃತ್ತಿಗಳೊಂದಿಗೆ ಬಿಡುಗಡೆಗೊಳಿಸಿದ್ದು, ಈ ಟ್ವಿನ್ ಬೈಕ್‌ಗಳು ಹಲವು ಹೊಸ ನವೀಕರಣಗಳನ್ನು ಪಡೆದುಕೊಂಡಿವೆ.

ನವೀಕೃತಗೊಂಡಿರುವ 2021ರ ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳ ಟಿವಿಸಿ ಬಿಡುಗಡೆಗೊಳಿಸಲಾಗಿದ್ದು, ಹೊಸ ಟಿವಿಸಿ ವೀಡಿಯೋದಲ್ಲಿ 2021ರ ಕಾಂಟಿನೆಂಟಲ್ ಜಿಟಿ 650 ಬೈಕಿನ ಹೊಸ ನವೀಕರಣಗಳು ಮತ್ತು ಬೈಕಿನ ಯಾಂತ್ರಿಕ ವಿಶೇಷತೆಗಳ ಬಗ್ಗೆ ತಿಳಿಸಿದ್ದಾರೆ. ಈ ಹೊಸ ಟಿಸಿವಿಯು ಆಕರ್ಷಕವಾಗಿದ್ದು, ಹೆಚ್ಚಾಗಿ ಯುವ ರೈಡರ್ ಗಳನ್ನು ಈ ಟಿವಿಸಿ ಸೆಳೆಯುತ್ತದೆ. ಅಲ್ಲದೇ ಲಾಂಗ್ ರೈಡ್ ತೆರಳಲು ಕಾಂಟಿನೆಂಟಲ್ ಜಿಟಿ 650 ಬೈಕ್ ಉತ್ತಮ ಆಯ್ಕೆಯಾಗಿದೆ ಎಂದು ತಿಳಿಸಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳು ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. 2021ರ ಇಂಟರ್‍ಸೆಪ್ಟರ್ 650 ಬೈಕಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.2.75 ಲಕ್ಷಗಳಾಗಿದ್ದರೆ, ಇದರ ಕಸ್ಟಮ್ ಬಣ್ಣದ ಆಯ್ಜೆಯ ಮಾದರಿಯ ಬೆಲೆಯು ರೂ.2.83 ಲಕ್ಷಗಳಾಗಿದೆ.

ಇಂಟರ್‍ಸೆಪ್ಟರ್ 650 ಟಾಪ್-ಸ್ಪೆಕ್ ಕ್ರೋಮ್ ಬಣ್ಣದ ಮಾದರಿಯ ಬೆಲೆಯು ರೂ.2.97 ಲಕ್ಷಗಳಾಗಿದ್ದು, 2021ರ ಕಾಂಟಿನೆಂಟಲ್ ಜಿಟಿ650 ಕೆಫೆ-ರೇಸರ್ ಬೈಕಿನ ಆರಂಭಿಕ ಬೆಲೆಯು ರೂ.2.91 ಲಕ್ಷವಾಗಿದೆ. ಇದರ ಕಸ್ಟಮ್ ಬಣ್ಣದ ಮಾದರಿಗೆ ರೂ.2.99 ಲಕ್ಷಗಳಾಗಿದ್ದು, ಟಾಪ್-ಸ್ಪೆಕ್ ಮಿಸ್ಟರ್ ಕ್ಲೀನ್ ಬಣ್ಣದ ಮಾದರಿಯ ಬೆಲೆಯು ರೂ.2.99 ಲಕ್ಷಗಳಾಗಿದೆ.

ಹೊಸ ಬಣ್ಣಗಳ ಹೊರತಾಗಿ, ಎರಡು ಬೈಕ್‌ಗಳು ಬ್ರ್ಯಾಂಡ್‌ನ ಮೇಕ್-ಇಟ್-ಯುವರ್ಸ್ ಕಸ್ಟಮೈಸ್ ಕಾರ್ಯಕ್ರಮದ ಭಾಗವಾಗಿದೆ. ಫಾಕ್ಟಿರಿಯಿದಲೇ ಗ್ರಾಹಕರು ತಮ್ಮ ಬೈಕಿನಲ್ಲಿ ತಮಗೆ ಇಷ್ಟವಿರುವಂತಹ ಮಾಡಿಫೈ ಅನ್ನು ಮಾಡಿಸಬಹುದು. ಇದರಲ್ಲಿ ವಿವಿಧ ಸೀಟುಗಳ ಆಕಾರಗಳು, ಟೂರಿಂಗ್ ಮೀರರ್, ಫ್ಲೈಸ್ಕ್ರೀನ್‌ಗಳು ಮತ್ತು ಸಂಪ್ ಗಾರ್ಡ್‌ಗಳು ಮತ್ತು ಇತರ ಉಪಕರಣಗಳನ್ನು ಒಳಗೊಂಡಿವೆ.
ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳಲ್ಲಿ ಹಿಂದಿನ ಮಾದರಿಗಳಲ್ಲಿ ಇದ್ದ ಅದೇ 649ಸಿಸಿ ಪ್ಯಾರಲಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಒಳಗೊಡಿದೆ.

ಹೊಸ ಬೈಕಿನ ಎಂಜಿನ್ 7,250 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 5,250 ಆರ್‌ಪಿಎಂನಲ್ಲಿ 52 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಇನ್ನು ಎರಡು ಟ್ವಿನ್ ಬೈಕ್‌ಗಳ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್-ಗ್ಯಾಸ್ ಚಾರ್ಜ್ಡ್ ಶಾಕ್ ಗಳು 5-ಹಂತದ ಹೊಂದಾಣಿಕೆಯೊಂದಿಗೆ ಪ್ರಿ-ಲೋಡ್ ಡ್ಯಾಂಪಿಂಗ್‌ಗಾಗಿ ನಿರ್ವಹಿಸುತ್ತವೆ.

ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಈ ಬೈಕ್‌ಗಳಲ್ಲಿ 18 ಇಂಚಿನ ಸ್ಪೋಕ್ಡ್ ವ್ಹೀಲ್ ಗಳನ್ನು ಹೊಂದಿವೆ. ಎರಡು ಬೈಕ್‌ಗಳ ವಿನ್ಯಾಸವು ಬದಲಾಗದೆ ಉಳಿದಿದೆ. ಇದು ಒಂದೇ ಮಾದರಿಯ ಹೆಡ್‌ಲ್ಯಾಂಪ್‌ಗಳು, ಟೈಲ್‌ಲ್ಯಾಂಪ್‌ಗಳು, ಟ್ವಿನ್ ಎಕ್ಸಾಸ್ಟ್ ಸೆಟಪ್, ಸಿಂಗಲ್-ಪೀಸ್ ಫ್ಲಾಟ್ ಸೀಟ್ ಮತ್ತು ಹೆಚ್ಚಿನದನ್ನು ಒಳಗೊಂಡಿದೆ.

ಹೊಸ ಇಂಟರ್‍ಸೆಪ್ಟರ್ 650 ಬೈಕ್ ಉತ್ತಮ ಸೀಟಿಂಗ್ ಪೊಷಿಷನ್ ಅನ್ನು ಹೊಂದಿದೆ. ಇನ್ನು ಕಾಂಟಿನೆಂಟಲ್ ಜಿಟಿ 650 ಅದರ ಉದ್ದವಾದ ಟ್ಯಾಂಕ್ ವಿನ್ಯಾಸ ಮತ್ತು ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳೊಂದಿಗೆ ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. ಆದರೆ ಈ ಟ್ವಿನ್ ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ನೀಡಲಾಗಿಲ್ಲ. ಆದರೆ ಕಸ್ಟಮೈಸ್ ಮಾಡಲು ಒಂದು ಆಯ್ಕೆಯನ್ನು ಸಹ ಕಂಪನಿಯು ಒದಗಿಸಿದೆ.


Click it and Unblock the Notifications