ಏಪ್ರಿಲ್ ತಿಂಗಳಿನಲ್ಲಿ 53 ಸಾವಿರಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಿದ ರಾಯಲ್ ಎನ್‌ಫೀಲ್ಡ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಏಪ್ರಿಲ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟು 53,298 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಏಪ್ರಿಲ್ ತಿಂಗಳಿನಲ್ಲಿ 53 ಸಾವಿರಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು 2021ರ ಮಾರ್ಚ್ ತಿಂಗಳಿನಲ್ಲಿ ಒಟ್ಟು 66,058 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಮಾಸಿಕ ಮಾರಾಟದಲ್ಲಿ ಶೇ.19.32 ರಷ್ಟು ಕುಸಿತವನ್ನು ಕಂಡಿದೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರ ರಾಯಲ್ ಎನ್‌ಫೀಲ್ಡ್ ಕಂಪನಿಯು ಕಳೆದ ತಿಂಗಳು 48,789 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಏಪ್ರಿಲ್ ತಿಂಗಳಿನಲ್ಲಿ 53 ಸಾವಿರಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಿದ ರಾಯಲ್ ಎನ್‌ಫೀಲ್ಡ್

ಆದರೆ 2021ರ ಮಾರ್ಚ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರ 60,173 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇದನ್ನು ಕಳೆದ ತಿಂಗಳ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ಯುನಿಟ್‌ಗಳಿಗೆ ಹೋಲಿಸಿದರೆ ಶೇ.18.92 ರಷ್ಟು ಕುಸಿತುವನ್ನು ಕಂಡಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಏಪ್ರಿಲ್ ತಿಂಗಳಿನಲ್ಲಿ 53 ಸಾವಿರಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಿದ ರಾಯಲ್ ಎನ್‌ಫೀಲ್ಡ್

ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು 4,509 ಯುನಿಟ್‌ಗಳನ್ನು ರಫ್ಟು ಮಾಡಿದೆ. ಈ ವರ್ಷದ ಮಾರ್ಚ್ ತಿಂಗಳಿನಲ್ಲಿ 5,885 ಯುನಿಟ್‌ಗಳನ್ನು ರಫ್ಟು ಮಾಡಿದ್ದರು. ಇದನ್ನು ಕಳೆದ ತಿಂಗಳ ರಫ್ತಿನ ಅಂಕಿ ಅಂಶಕ್ಕೆ ಹೋಲಿಸಿದರೆ ಶೇ.23.38 ರಷ್ಟು ಕುಸಿತವನ್ನು ಕಂಡಿದೆ.

ಏಪ್ರಿಲ್ ತಿಂಗಳಿನಲ್ಲಿ 53 ಸಾವಿರಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಿದ ರಾಯಲ್ ಎನ್‌ಫೀಲ್ಡ್

ಇನ್ನು ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಸಂಪೂರ್ಣ ಲಾಕ್‌ಡೌನ್‌ ಆಗಿತ್ತು. ಈ ಅವಧಿಯಲ್ಲಿ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿ ವಾಹನಗಳ ಮಾರಾಟದ ಅಂಕಿಅಂಶಗಳಿಲ್ಲ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಏಪ್ರಿಲ್ ತಿಂಗಳಿನಲ್ಲಿ 53 ಸಾವಿರಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಇದಕ್ಕಾಗಿ ರಾಯಲ್ ಎನ್‌ಫೀಲ್ಡ್ ತನ್ನ ಸರಣಿಯಲ್ಲಿರುವ ಮಾದರಿಗಳನ್ನು ನವೀಕರಿಸಲಾಗುತ್ತಿದೆ ಮತ್ತು ವಿಸ್ತರಿಸಲಾಗುತ್ತಿದೆ.

ಏಪ್ರಿಲ್ ತಿಂಗಳಿನಲ್ಲಿ 53 ಸಾವಿರಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಗಾಗಿ ಹೊಸ ಬೈಕ್‍ಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರತವಾಗಿದೆ, ಇದರಲ್ಲಿ ಕೆಲವು ಮಾದರಿಗಳು ಭಾರತದ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವಾಗ ಕಾಣಿಸಿಕೊಂಡಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಏಪ್ರಿಲ್ ತಿಂಗಳಿನಲ್ಲಿ 53 ಸಾವಿರಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಇತ್ತೀಚೆಗೆ ಶಾಟ್‌ಗನ್ ಎಂಬ ಹೊಸ ಹೆಸರಿಗಾಗಿ ಟ್ರೇಡ್‌ಮಾರ್ಕ್ ಅನ್ನು ಸಲ್ಲಿಸಿದೆ ಎಂದು ವರದಿಗಳಾಗಿದೆ .ರಾಯಲ್ ಎನ್‌ಫೀಲ್ಡ್ ಎರಡು 650ಸಿಸಿ ಬೈಕ್‍ಗಳನ್ನು ಪರೀಕ್ಷಿಸುತ್ತಿದೆ. ಅವುಗಳಲ್ಲಿ ಒಂದು ಕಡಿಮೆ ಸ್ಲಂಗ್ ಕ್ರೂಸರ್ ಮತ್ತು ಇನ್ನೊಂದು ಹೆಚ್ಚು ಸಾಂಪ್ರದಾಯಿಕ ಶೈಲಿಯ ಬೈಕ್ ಆಗಿರುತ್ತದೆ.

ಏಪ್ರಿಲ್ ತಿಂಗಳಿನಲ್ಲಿ 53 ಸಾವಿರಕ್ಕೂ ಹೆಚ್ಚು ಬೈಕ್‌ಗಳನ್ನು ಮಾರಾಟ ಮಾಡಿದ ರಾಯಲ್ ಎನ್‌ಫೀಲ್ಡ್

2021ರ ಏಪ್ರಿಲ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಮಾಸಿಕ ಮಾರಾಟದಲ್ಲಿ ಕುಸಿತವನ್ನು ಕಂಡಿದೆ. ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ. ಇದರಿಂದ ಮಾರಾಟದಲ್ಲ ಬೆಳವಣಿಗೆಯನ್ನು ಸಾಧಿಸಲು ನೆರವಾಗುತ್ತದೆ.

Most Read Articles

Kannada
English summary
Royal Enfield Sold Over 53,000 Units In April 2021. Read In Kannada.
Story first published: Tuesday, May 4, 2021, 9:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X