ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಗಾಗಿ ಹೊಸ ಬೈಕ್‍ಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರತವಾಗಿದೆ, ಇದರಲ್ಲಿ ಕೆಲವು ಮಾದರಿಗಳು ಭಾರತದ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವಾಗ ಕಾಣಿಸಿಕೊಂಡಿದೆ.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಮುಂದಿನ 12 ತಿಂಗಳಲ್ಲಿ ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಗೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ ಎಂದು ವರದಿಗಳಾಗಿದೆ. ಪ್ರತಿ ತ್ರೈಮಾಸಿಕದಲ್ಲಿ ಒಂದು ಹೊಸ ಮಾದರಿಯನ್ನು ಬಿಡುಗಡೆಗೊಳಿಸಲು ಕಂಪನಿಯು ಸಜ್ಜಾಗುತ್ತಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಈಗಾಗಲೇ ಬೈಕ್‌ಗಳ ಹೆಸರಿನ ಟ್ರೇಡ್ ಮಾರ್ಜ್ ಅನ್ನು ನೋಂದಾಯಿಸಿದೆ.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ಆದರೆ ಕಂಪನಿಯು ಬಿಡುಗಡೆ ಮಾಡಲಿರುವ ಪ್ರಮುಖ ಮಾದರಿ ನ್ಯೂ ಜನರೇಷನ್ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಆಗಿರಬಹುದು. ಇನ್ನು ಈ ಹೊಸ ಕ್ಲಾಸಿಕ್ 350 ಬೈಕ್ ಹಬ್ಬದ ಸೀಸನ್ ನಲ್ಲಿ ಬಿಡುಗಡೆಯಾಗಬಹುದು.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

2021ರ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಹಲವಾರು ಹೊಸ ಬದಲಾಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಈ ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಈಗ ಅನಲಾಗ್ ಸ್ಪೀಡೋಮೀಟರ್ ಕೆಳಗೆ ಸಣ್ಣ ಡಿಜಿಟಲ್ ಡಿಸ್ ಪ್ಲೇಯನ್ನು ಹೊಂದಿರುತ್ತದೆ.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ಈ ಬೈಕಿನ ಡಿಸ್ ಪ್ಲೇಯಲ್ಲಿ ಟ್ರಿಪ್ ಮೀಟರ್, ಫ್ಯೂಯಲ್ ಗೇಜ್, ಓಡೋಮೀಟರ್, ಓಡೋಮೀಟರ್ ಮತ್ತು ಇತರ ವಿವರಗಳನ್ನು ಪ್ರದರ್ಶಿಸುತ್ತದೆ. ಬದಿಯಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಪಾಡ್ ಇರುವಿಕೆಯು ಅತ್ಯಂತ ಮುಖ್ಯವಾದ ಸೇರ್ಪಡೆಯಾಗಿದೆ. ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರುತ್ತದೆ.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ಇದರೊಂದಿಗೆ ಬ್ಲೂಟೂತ್ ಮತ್ತು ಮೀಸಲಾದ ಅಪ್ಲಿಕೇಶನ್ ಮೂಲಕ ಸ್ಮಾರ್ಟ್‌ಫೋನ್‌ಗೆ ಕನೆಕ್ಟ್ ಮಾಡಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೌಲ್ಯಭ್ಯವನ್ನು ಒದಗಿಸುತ್ತದೆ. ಹೊಸ ಕ್ಲಾಸಿಕ್ 350 ಮಾದರಿಯು ಈಗ ವೃತ್ತಾಕಾರದ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ. ಇನ್ನು ಸ್ಪ್ಲಿಟ್ ಸೀಟ್ ಮತ್ತು ಹಿಂಭಾಗದಲ್ಲಿ ಸ್ವಲ್ಪ ದೊಡ್ಡದಾದ ಗ್ರ್ಯಾಬ್ ಹ್ಯಾಂಡಲ್ ಹೊಂದಿರುತ್ತದೆ.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ಈ ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಹ್ಯಾಲೊಜೆನ್ ಯುನಿಟ್ ಸುತ್ತ ವೃತ್ತಾಕಾರದ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ನವೀಕರಿಸಿದ ಹೆಡ್ ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿವೆ. ಈ ಹೊಸ ಹ್ಯಾಂಡಲ್‌ಬಾರ್ ಗ್ರಿಪ್ಸ್ ಮತ್ತು ಸ್ವಿಚ್‌ಗಿಯರ್‌ಗಳನ್ನು ಸಹ ಹೊಂದಿರುತ್ತದೆ.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ಈ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಪ್ಲಾಟ್‌ಫಾರ್ಮ್ ಮತ್ತು ಎಂಜಿನ್ ಸೆಟಪ್‌ನಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗುತ್ತದೆ. 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಅನ್ನು ಹೊಸ ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ನಲ್ಲಿ ತಯಾರಿಸಲಾಗುತ್ತದೆ.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ಇನ್ನು 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ 350ಸಿಸಿ, ಸುಧಾರಿತ ಎಸ್‌ಒಹೆಚ್‌ಸಿ ಕಾನ್ಫಿಗರೇಶನ್‌ನೊಂದಿಗೆ ಸಿಂಗಲ್ ಸಿಲಿಂಡರ್ ಫ್ಯೂಯಲ್ ಇಂಜೆಕ್ಟ್ ಎಂಜಿನ್ ಒಳಗೊಂಡಿರುತ್ತದೆ. ಈ 350ಸಿಸಿ ಎಂಜಿನ್ 20.2 ಬಿಹೆಚ್‌ಪಿ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಎರಡು 650ಸಿಸಿ ಬೈಕ್‍ಗಳನ್ನು ಪರೀಕ್ಷಿಸುತ್ತಿದೆ. ಅವುಗಳಲ್ಲಿ ಒಂದು ಕಡಿಮೆ ಸ್ಲಂಗ್ ಕ್ರೂಸರ್ ಮತ್ತು ಇನ್ನೊಂದು ಹೆಚ್ಚು ಸಾಂಪ್ರದಾಯಿಕ ಶೈಲಿಯ ಬೈಕ್ ಆಗಿರುತ್ತದೆ. ಈ ಎರಡು ಬೈಕ್‍ಗಳಲ್ಲಿ 650 ಟ್ವಿನ್ ಬೈಕ್‍ಗಳಲ್ಲಿರುವ ಅದೇ 648 ಸಿಸಿ, ಏರ್/ಆಯಿಲ್-ಕೂಲ್ಡ್, ಪ್ಯಾರೆಲಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ.

ಭಾರತದಲ್ಲಿ ಹೊಸ ಬೈಕ್‍ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಇತ್ತೀಚೆಗೆ ಸ್ಕ್ರ್ಯಾಮ್, ಶಾಟ್‌ಗನ್, ಹಂಟರ್, ಫ್ಲೈಯಿಂಗ್ ಫ್ಲಿಯಾ, ಶೆರ್ಪಾ ಮತ್ತು ರೋಡ್ಸ್ಟರ್ ಸೇರಿದಂತೆ ಮುಂಬರುವ ಮಾದರಿಗಳಿಗಾಗಿ ಅನೇಕ ನೇಮ್‌ಪ್ಲೇಟ್‌ಗಳನ್ನು ಟ್ರೇಡ್‌ಮಾರ್ಕ್ ಮಾಡಿದೆ. ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಕುರಿತು ಹೆಚ್ಚಿನ ವಿವರಗಳು ಮುಂದಿನ ದಿನಗಳಲ್ಲಿ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

Most Read Articles

Kannada
English summary
Royal Enfield To Launch “Highest Number of New Models” In FY22. Read In Kannada.
Story first published: Thursday, June 10, 2021, 10:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X